ಮಂಗಳೂರು ವಿಶ್ವವಿದ್ಯಾನಿಲಯ, ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ

ಮಂಗಳೂರು ವಿವಿಯಲ್ಲಿ ಶುಕ್ರವಾರ ಹುತಾತ್ಮ ಯೋಧರಿಗೆ ಶ್ರದ್ದಾಂಜಲಿ ಅರ್ಪಿಸುವ ಕಾರ್ಯಕ್ರಮ ನಡೆಯಿತು.
ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ಸಂಶೋಧನಾ ವಿದ್ಯಾರ್ಥಿಗಳು ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ಆಶ್ರಯದಲ್ಲಿ ಸಿಯಾಚಿನ್‌ನಲ್ಲಿ ವೀರ ಮರಣವನ್ನಪ್ಪಿದ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮ ಮಂಗಳೂರು ವಿವಿಯ ಮುಖ್ಯದ್ವಾರದ ಬಳಿ ಶುಕ್ರವಾರ ನಡೆಯಿತು.
ಯೋಧರ ಭಾವಚಿತ್ರಕ್ಕೆ ಶ್ರದ್ದಾಂಜಲಿ ಅರ್ಪಿಸಿ ಮಾತನಾಡಿದ ಮಂಗಳೂರು ವಿವಿ ಕುಲಪತಿ ಪ್ರೊ.ಕೆ.ಭೈರಪ್ಪ ಅವರು, ನಾವು ಇಂದು ನೆಮ್ಮದಿಯುತ ಜೀವನ ಸಾಗಿಸುತ್ತೇವೆಂದರೆ ಅದಕ್ಕೆ ಕಾರಣ ದೇಶವನ್ನು ಕಾಯುತ್ತಿರುವ ಯೋಧರು. ಆದ್ದರಿಂದ ಯೋಧರ ಸೇವೆಯನ್ನು ನಾವು ಸದಾ ಗೌರವಿಸಬೇಕು. ಸಿಯಾಚಿನ್‌ನಲ್ಲಿ ಮೃತಪಟ್ಟ ಯೋಧರ ಆತ್ಮಕ್ಕೆ ದೇವರು ಸದ್ಗತಿಯನ್ನು ಕರುಣಿಸಲಿ ಎಂದು ನಾವೆಲ್ಲರೂ ಪ್ರಾರ್ಥಿಸೋನ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಂಗಳೂರು ವಿವಿ ಕುಲಸಚಿವ ಪ್ರೊ.ಟಿ.ಡಿ.ಕೆಂಪರಾಜು, ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗದ ಪ್ರೊ.ಪಿ.ಎಲ್.ಧರ್ಮ, ಪ್ರಾದ್ಯಾಪಕ ಪ್ರೊ.ಮುನಿರಾಜು ಹಾಗೂ ಮಂಗಳೂರು ವಿವಿಯ ಸಂಶೋಧನಾ ವಿದ್ಯಾರ್ಥಿಗಳು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿ ಮೃತ ಯೋಧರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.





