Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೊಹ್ಲಿಯ ಪಾಕ್ ಅಭಿಮಾನಿಗೆ ಜಾಮೀನು...

ಕೊಹ್ಲಿಯ ಪಾಕ್ ಅಭಿಮಾನಿಗೆ ಜಾಮೀನು ನಿರಾಕರಣೆ

ಮನೆಯ ಮೇಲೆ ಭಾರತದ ರಾಷ್ಟ್ರಧ್ವಜ ಹಾರಿಸಿದ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ19 Feb 2016 8:52 PM IST
share
ಕೊಹ್ಲಿಯ ಪಾಕ್ ಅಭಿಮಾನಿಗೆ ಜಾಮೀನು ನಿರಾಕರಣೆ

ಲಾಹೋರ್, ಫೆ. 19: ಪೊಲೀಸರು ಕ್ಲೀನ್‌ಚಿಟ್ ನೀಡಿರುವ ಹೊರತಾಗಿಯೂ, ಕ್ರಿಕೆಟಿಗ ವಿರಾಟ್ ಕೊಹ್ಲಿಯ ಕಟ್ಟಾ ಪಾಕಿಸ್ತಾನಿ ಅಭಿಮಾನಿಗೆ ಜಾಮೀನು ನೀಡಲು ಪಾಕಿಸ್ತಾನದ ನ್ಯಾಯಾಲಯವೊಂದು ನಿರಾಕರಿಸಿದೆ.

ಪಾಕಿಸ್ತಾನದ ಪಂಜಾಬ್ ರಾಜ್ಯದ ಒಕಾರ ಜಿಲ್ಲೆಯ ನಿವಾಸಿ 22 ವರ್ಷದ ಉಮರ್ ಡ್ರಾಝ್‌ರನ್ನು, ತನ್ನ ಮನೆಯ ಮೇಲ್ಛಾವಣಿಯಲ್ಲಿ ಭಾರತೀಯ ರಾಷ್ಟ್ರಧ್ವಜವನ್ನು ಹಾರಿಸಿದ ಆರೋಪದಲ್ಲಿ ಬಂಧಿಸಲಾಗಿತ್ತು. ಅಪರಾಧ ಸಾಬೀತಾದರೆ ಅವರು 10 ವರ್ಷಗಳ ಸೆರೆಮನೆ ವಾಸವನ್ನು ಎದುರಿಸುತ್ತಿದ್ದಾರೆ.

ಜಿಲ್ಲಾ ನ್ಯಾಯಾಧೀಶ ಆನಿಕ್ ಅನ್ವರ್ ಗುರುವಾರ ಜಾಮೀನು ನಿರಾಕರಿಸಿ ತೀರ್ಪು ನೀಡಿದರು.

‘‘ತೀರ್ಪಿನಿಂದ ನಮಗೆ ನಿರಾಶೆಯಾಗಿದೆ ಹಾಗೂ ಇದನ್ನು ಸೆಶನ್ಸ್ ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ’’ ಎಂದು ಡ್ರಾಝ್ ಪರ ವಕೀಲ ಆಮಿರ್ ಭಟ್ಟಿ ಹೇಳಿದರು.

ಡ್ರಾಝ್ ‘‘ದೇಶದ್ರೋಹ’’ ನಡೆಸಿದ್ದಾರೆ ಎನ್ನುವುದನ್ನು ತೋರಿಸುವ ಪುರಾವೆ ಪತ್ತೆಯಾಗಿಲ್ಲ ಎಂಬುದಾಗಿ ತನ್ನ ವರದಿಯಲ್ಲಿ ತಿಳಿಸಿದ್ದೇನೆ ಎಂದು ಪೊಲೀಸ್ ಅಧಿಕಾರಿ ಅಝೀಝ್ ಚೀಮಾ ಸುದ್ದಿಗಾರರಿಗೆ ತಿಳಿಸಿದರು.

ವೃತ್ತಿಯಲ್ಲಿ ದರ್ಜಿಯಾಗಿರುವ ಡ್ರಾಝ್‌ರನ್ನು ಲಾಹೋರ್‌ನಿಂದ ಸುಮಾರು 200 ಕಿ.ಮೀ. ದೂರದಲ್ಲಿರುವ ಅವರ ಊರಿನಲ್ಲಿ ಜನವರಿ 25ರಂದು ಬಂಧಿಸಲಾಗಿತ್ತು.

ಪರಿಣಾಮಗಳ ಅರಿವಿಲ್ಲದೆ ಮಾಡಿದ ತಪ್ಪು: ವಕೀಲ

ಪರಿಣಾಮಗಳ ಅರಿವಿಲ್ಲದೆ ಡ್ರಾಝ್ ತಪ್ಪು ಮಾಡಿದ್ದಾರೆ ಎಂದು ಅವರ ವಕೀಲರು ನ್ಯಾಯಾಲಯದಲ್ಲಿ ಹೇಳಿದರು.

‘‘ಯಾವುದೋ ದೇಶದ ಮೇಲಿನ ಪ್ರೀತಿಯಿಂದ ಆ ದೇಶದ ರಾಷ್ಟ್ರಧ್ವಜವನ್ನು ಹಾರಿಸಿದ ಪ್ರಕರಣ ಇದಲ್ಲ. ಫುಟ್ಬಾಲ್ ವಿಶ್ವಕಪ್ ವೇಳೆ ಇಲ್ಲಿನ ಜನರು ಬ್ರೆಝಿಲ್, ಅಜೇಂಟೀನ ಮುಂತಾದ ದೇಶಗಳ ಧ್ವಜಗಳನ್ನು ಹಾರಿಸಿದ್ದಾರೆ. ಆದರೆ, ಯಾರೊಬ್ಬರೂ ಅದಕ್ಕೆ ಆಕ್ಷೇಪಿಸಿಲ್ಲ. ಯಾಕೆಂದರೆ ಅದನ್ನು ಕ್ರೀಡಾಸ್ಫೂರ್ತಿಯಿಂದ ತೆಗೆದುಕೊಳ್ಳಲಾಗಿತ್ತು. ಇದು ಕೂಡ ಅಂಥದೇ ಪ್ರಕರಣವಾಗಿದೆ’’ ಡ್ರಾಝ್ ಪರ ವಕೀಲರು ವಾದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X