ಉಳ್ಳಾಲ: ಗಾಯಗೊಂಡಿದ್ದ ವ್ಯಕ್ತಿ ಮೃತ್ಯು
ಉಳ್ಳಾಲ, ೆ.18: ಮೀನುಗಾರಿಕೆ ನಡೆಸುತ್ತಿರುವಾಗ ಬೋಟ್ ಅವಘಡದಲ್ಲಿ ಗಂಭೀರ ಗಾಯಗೊಂಡಿದ್ದ ಉಳ್ಳಾಲ ಮೊಗವೀರಪಟ್ಣ ನಿವಾಸಿ ರಾಜ್ಯ ಪ್ರಶಸ್ತಿ ಪುರಸ್ಕೃತ ಜೀವರಕ್ಷಕ ಈಜುಗಾರ ಜಯಂತ ಸಾಲ್ಯಾನ್(48) ಚಿಕಿತ್ಸೆ ಲಕಾರಿಯಾಗದೆ ಮೃತಪಟ್ಟಿದ್ದಾರೆ.
ತಿಂಗಳ ಹಿಂದೆ ತನ್ನದೇ ಪಾಲುದಾರಿಕೆಯ ಬೋಟ್‌ನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಬೋಟ್‌ನಲ್ಲಿದ್ದ ಕಂಬ ತುಂಡಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಉಸ್ತಾದ್ ದಿ.ವೀರಪ್ಪ ಪುತ್ರನ್‌ರ ಪುತ್ರರಾಗಿದ್ದ ಅವರು ಕಬಡ್ಡಿ ಆಟಗಾರರಾಗಿದ್ದರು.
ಬ್ರದರ್ಸ್ ಸ್ಪೋರ್ಟ್ಸ್ ಕ್ಲಬ್, ಶ್ರೀ ಮಾರುತಿ ವ್ಯಾಯಾಮ ಶಾಲೆಯ ಸಕ್ರಿಯರಾಗಿದ್ದ ಅವರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
Next Story





