ಮಂಗಳೂರು : ನ್ಯಾಯಾಧೀಶರಿಗೆ ಆರೋಗ್ಯ ಶಿಬಿರ

ಮಂಗಳೂರು, ಫೆ, 22 ; ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು, ಎ.ಜೆ. ಮೆಡಿಕಲ್ ಕಾಲೇಜು ಸಂಯುಕ್ತ ಆಶ್ರಯದಲ್ಲಿ ನ್ಯಾಯಾಂಗ ಇಲಾಖೆಯ ಅಧಿಕಾರಿಗಳಿಗಳು ಮತ್ತು ಅವರ ಕುಟುಂಬದವರಿಗೆ ಆರೋಗ್ಯ ಶಿಬಿರವನ್ನು ಭಾನುವಾರ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಉಮಾ. ಎಂ.ಜಿ., ನೆರವೇರಿಸಿ ಮಾತನಾಡುತ್ತಾ ನ್ಯಾಯಾಧೀಶರು ಕೆಲಸದ ಒತ್ತಡದಲ್ಲಿ ಆರೋಗ್ಯದ ಬಗ್ಗೆ ಮತ್ತು ಅವರ ಕುಟುಂಬದವರ ಆರೋಗ್ಯದ ಬಗ್ಗೆ ಗಮನ ಹರಿಸಲು ಸಾಧ್ಯವಾಗದೇ ಆರೋಗ್ಯದಲ್ಲಿ ಏರು-ಪೇರು ಆಗುವುದು ಸಹಜವಾಗಿದೆ. ಈ ನಿಟ್ಟಿನಲ್ಲಿ ವೈದ್ಯಕೀಯ ತಪಾಸಣೆ ಮಾಡಿರುವುದು ಒಂದು ವಿಶೇಷವಾಗಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎ.ಜೆ. ವೈದ್ಯಕೀಯ ಸಂಸ್ಥೆಯ ಉಪಾಧ್ಯಕ್ಷ ಪ್ರಶಾಂತ್ ಶೆಟ್ಟಿ ವಹಿಸಿದ್ದರು.
Next Story





