Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ಬದಲಾದ...

ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ಬದಲಾದ ತಂತ್ರಗಳಿಂದ ಸಾವುನೋವು ಹೆಚ್ಚಳ?

ವಾರ್ತಾಭಾರತಿವಾರ್ತಾಭಾರತಿ23 Feb 2016 10:49 AM IST
share
ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ಬದಲಾದ ತಂತ್ರಗಳಿಂದ ಸಾವುನೋವು ಹೆಚ್ಚಳ?

ನವದೆಹಲಿ,ಫೆ.23: ಪ್ಯಾಂಪೋರ್‌ನ ಸರಕಾರಿ ಕಟ್ಟಡವೊಂದರಲ್ಲಿ ಅಡಗಿ ಕುಳಿತಿದ್ದ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಇಬ್ಬರು ಪ್ಯಾರ ಕಮಾಂಡೋ ಅಧಿಕಾರಿಗಳೂ ಸೇರಿದಂತೆ ಐದು ಯೋಧರು ಸಾವನ್ನಪ್ಪಿದ್ದಾರೆ. ಮುಖ್ಯವಾಗಿ ನಗರ ಪ್ರದೇಶಗಳಲ್ಲಿ ನಮ್ಮ ರಕ್ಷಣಾ ಪಡೆಗಳು ಅನುಸರಿಸುತ್ತಿರುವ ಉಗ್ರ ನಿಗ್ರಹ ಕಾರ್ಯಾಚರಣೆಯ ಹೊಸ ತಂತ್ರಗಳ ಬಗ್ಗೆ ಹಲವಾರು ಗಂಭೀರ ಪ್ರಶ್ನೆಗಳನ್ನು ಹುಟ್ಟು ಹಾಕಿವೆ. ಕಾದು ನೋಡುವ ತಂತ್ರದ ಬದಲು ಕ್ಷಿಪ್ರ ಕಾರ್ಯಾಚರಣೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿರುವುದರಿಂದ ಸಾವುನೋವುಗಳು ಹೆಚ್ಚಾಗುತ್ತಿವೆಯೆಂಬ ಭಾವನೆ ಸೇನೆಯ ಕೆಲವರಲ್ಲಿದೆ.
‘‘ಕಾರ್ಯಾಚರಣೆಯನ್ನು ಕನಿಷ್ಠ ಸಮಯದಲ್ಲಿ ಮುಗಿಸಲು ಮೇಲಿನಿಂದ ಒತ್ತಡವಿದ್ದಿರಬಹುದು. ಆದರೆ ಪ್ಯಾಂಪೋರಿನಲ್ಲಿ ಉಗ್ರರು ಕಟ್ಟಡವೊಂದರಲ್ಲಿದ್ದರು ಹಾಗೂ ಅವರು ಓಡಿ ಹೋಗುವ ಸಾಧ್ಯತೆಗಳಿರಲಿಲ್ಲ. ಆದುದರಿಂದ ಅವರನ್ನು ನಾವು ಹೇಗಾದರೂ ಸಾಯಿಸುತ್ತೇವೆಂದು ಗೊತ್ತಿದ್ದೂ ಪ್ಯಾರ ಕಮಾಂಡೋಗಳನ್ನು ಅಲ್ಲಿಗೆ ಅವಸವಸರವಾಗಿ ಕಳುಹಿಸಿದ್ದೇಕೆ?’’ ಎಂದು ತಮ್ಮ ಹೆಸರು ಹೇಳಲಿಚ್ಛಿಸದ ಹಿರಿಯ ಸೇನಾಧಿಕಾರಿಯೊಬ್ಬರು ಹೇಳಿದ್ದಾರೆ.
ಕಳೆದ ಬಾರಿ ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರ ಗುಂಡುಗಳಿಗೆ ಇಬ್ಬರು ಕರ್ನಲ್‌ಗಳು ಹತರಾದ ನಂತರ ರಕ್ಷಣಾ ಸಚಿವ ಮನೋಹರ್ ಪಾರಿಕ್ಕರ್ ಅವರು ಸಾವು ನೋವುಗಳು ಆದಷ್ಟು ಕಡಿಮೆಯಾಗುವಂತೆ ನೋಡಿಕೊಳ್ಳಬೇಕೆಂದು ಸೇನೆಗೆ ಹೇಳಿದ್ದರು.
ಇತ್ತೀಚೆಗೆ ಉಗ್ರರು ಎಲ್ಲಿ ಹೆಚ್ಚಿನ ಸಾವುನೋವುಗಳಾಗಬಹುದೋ ಅಂತಹ ಸ್ಥಳಗಳನ್ನು ತಮ್ಮ ದಾಳಿಗೆ ಆಯ್ದುಕೊಳ್ಳುವುದರಿಂದ ಸಾವುನೋವಿನ ಪ್ರಮಾಣ ಹೆಚ್ಚುತ್ತಿದೆ. ಇಂತಹ ಸಂದರ್ಭದಲ್ಲಿ ಕಾರ್ಯಾಚರಣೆ ತುಂಬಾ ಹೊತ್ತು ಸಾಗಿದಾಗ ಸಹಜವಾಗಿ ಮಾಧ್ಯಮಗಳಲ್ಲಿ ಬಹಳಷ್ಟು ಸುದ್ದಿಯಾಗುವುದು ಅವರಿಗೆ ಬೇಕಾಗಿದೆ, ಎಂದು ಅಧಿಕಾರಿಗಳು ಅಭಿಪ್ರಾಯ ಪಡುತ್ತಾರೆ.
‘‘ನಾವು ಒಂದು ಕಟ್ಟಡವನ್ನು ಸ್ಫೋಟಿಸಿ ಉಗ್ರರನ್ನು ಸುಲಭವಾಗಿ ಸಾಯಿಸಬಹುದು. ಅದರೆ ಅದರಿಂದ ಅಕ್ಕಪಕ್ಕದಲ್ಲಿ ಕೂಡ ಸಂಭವಿಸಬಹುದಾದ ಹಾನಿಯ ಬಗ್ಗೆ ಏನಂತೀರಿ? ಆದುದರಿಂದ ಸೂಕ್ಷ್ಮವಾಗಿ ಸಮತೋಲನ ಸಾಧಿಸಿ ನಾಗರಿಕರನ್ನು ರಕ್ಷಿಸಲು ನಾವು ಸಾವುನೋವುಗಳನ್ನು ಅನುಭವಿಸಲು ಸಿದ್ಧರಿದ್ದೇವೆ,’’ ಎಂದು ಮಾಜಿ ಸೇನಾ ಕಮಾಂಡರ್ ಲೆ.ಜ. ಬಿ ಎಸ್ ಜಸ್ವಾಲ್ ತಿಳಿಸಿದ್ದಾರೆ.
ಸೇನೆ ಹಾಗೂ ಉಗ್ರರ ನಡುವಿನ ಕಾರ್ಯಾಚರಣೆಯಲ್ಲಿ ಸಾಮಾನ್ಯವಾಗಿ 1 : 10 ಅನುಪಾತದಲ್ಲಿ ಸಾವುನೋವು ಸಂಭವಿಸಬಹದು ಎಂದು ಹೇಳಲಾಗಿದ್ದರೂ, ಮೂರು ದಿನಗಳ ಪ್ಯಾಂಪೋರ್ ಕಾರ್ಯಾಚರಣೆಯಲ್ಲಿ ಮೂವರು ಉಗ್ರರು ಹತರಾಗಿದ್ದರೆ, ಮೂವರು ಸೇನಾ ಸಿಬ್ಬಂದಿ ಹಾಗೂ ಇಬ್ಬರು ಸಿಆರ್‌ಪಿಎಫ್ ಜವಾನರು ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ ತಿಂಗಳಿನ ಪಠಾಣ್‌ಕೋಟ್ ದಾಳಿಯಲ್ಲಿ ಎನ್‌ಎಸ್‌ಜಿಯ ಲೆ. ಕ. ನಿರಂಜನ್ ಕುಮಾರ್ ಸೇರಿದಂತೆ ಏಳು ಸುರಕ್ಷಾ ಸಿಬ್ಬಂದಿ ಸಾವನ್ನಪ್ಪಿದ್ದರೆ ಐದು ಮಂದಿ ಉಗ್ರರು ಹತರಾಗಿದ್ದರು.
ಪ್ಯಾಂಪೋರಿನಲ್ಲಿ ಉಗ್ರರು ದಾಳಿ ನಡೆಸಿದ್ದ ಕಟ್ಟಡದಲ್ಲಿದ್ದ ನಾಗರಿಕರನ್ನು ಸುರಕ್ಷಿತವಾಗಿ ಹೊರ ಕಳುಹಿಸುವ ಜವಾಬ್ದಾರಿ ಸೇನೆಯ ಮೇಲಿತ್ತು. ಜಂಟಿ ಕಾರ್ಯಾಚರಣೆಯಲ್ಲಿ ನಾವು 120 ನಾಗರಿಕರನ್ನು ಗುಂಡು ನಿರೋಧಕ ವಾಹನಗಳಲ್ಲಿ ಹೊರಕ್ಕೆ ಕರೆದುಕೊಂಡು ಹೋದೆವು,’’ಎಂದು ಮೇಜರ್ ಜನರಲ್ ಅರವಿಂದ್ ದತ್ತಾ ಹೇಳಿದ್ದಾರೆ. ಸ್ಥಳೀಯ ಪತ್ರಿಕೆ ಗ್ರೇಟರ್ ಕಾಶ್ಮೀರದಲ್ಲಿನ ವರದಿಯೊಂದರಂತೆ ಉಗ್ರರು ತಮ್ಮನ್ನು ಹೊರ ಹೋಗಲು ಅನುವು ಮಾಡಿ ಕೊಟ್ಟರು ಎಂದು ಹೆಸರು ಹೇಳಲಿಚ್ಛಿಸದ ಕೆಲವು ಉದ್ಯೋಗಿಗಳು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X