ಪುತ್ತೂರಿನಲ್ಲಿ ಕಾಂಗ್ರೆಸ್, ಬಿಜೆಪಿ ವಿಜಯೋತ್ಸವ

ಪುತ್ತೂರು: ತಾಲೂಕಿನ ಜಿ.ಪಂ ಮತ್ತು ತಾ.ಪಂ ಚುನಾವಣೆಯಲ್ಲಿ ಗೆಲುವು ಪಡೆದ ಅಭ್ಯರ್ಥಿಗಳ ವಿಜಯೋತ್ಸವ ಕಾರ್ಯಕ್ರಮ ಹಲವು ಕಡೆಗಳಲ್ಲಿ ನಡೆಯಿತು. ಬಿಜೆಪಿ ಕಾರ್ಯಕರ್ತರು ಪುತ್ತೂರಿನ ಬಸ್ಸು ನಿಲ್ದಾಣದ ಬಳಿಯಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ನೆಟ್ಟಣಿಗೆ ಮುಡ್ನೂರು ಜಿಪಂ ಮತ್ತು ತಾ.ಪಂ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ವಿಜಯಗಳಿಸಿದ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಅಭ್ಯರ್ಥಿಗಳಾದ ಜಿಪಂ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ನೆಟ್ಟಣಿಗೆ ಮುಡ್ನೂರು ತಾಪಂ ಸದಸ್ಯೆ ಫೌಝಿಯಾ, ಕೊಳ್ತಿಗೆ ತಾಪಂ ಸದಸ್ಯ ರಾಮ ಪಾಂಬಾರು ಅವರನ್ನು ತೆರೆದ ವಾಹನದಲ್ಲಿ ಕಾರ್ಯಕರ್ತರು ಮೆರವಣಿಗೆಯಲ್ಲಿ ಸಾಗಿಸಿದರು. ಬ್ಲಾಕ್ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಅಬ್ದುಲ್‌ಖಾದರ್ ಮೇರ್ಲ, ನೆಟ್ಟಣಿಗೆ ಮುಡ್ನೂರು ಗ್ರಾಪಂ ಉಪಾಧ್ಯಕ್ಷ ಶ್ರೀರಾಂ ಪಕ್ಕಳ, ಇಕ್ಬಾಲ್ ಕೌಡಿಚ್ಚಾರ್, ರವಿಪ್ರಸಾದ್ ಶೆಟ್ಟಿ ಬನ್ನೂರು, ಮಹಮ್ಮದ್ ಮೇನಾಲ, ನಗರಸಭಾ ಸದಸ್ಯರಾದ ಮಹಮ್ಮದ್ ಆಲಿ, ಲೋಕೇಶ್ ಹೆಗ್ಡೆ, ಕಾರ್ಮಿಕ ಕಾಂಗ್ರೆಸ್ ಮುಖಂಡ ಶಿವಕುಮಾರ್ ಕೌಡಿಚ್ಚಾರ್, ಮಹಿಳ್ನಾಥ್ ಶೆಟ್ಟಿ, ಅಬ್ದುಲ್ ಅಝೀರ್ ಬುಶ್ರಾ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
ಒಳಮೊಗ್ರು ತಾಪಂ ಕ್ಷೇತ್ರ ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ
ಒಳಮೊಗ್ರು ತಾಪಂ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಬಿಜತ್ರೆ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಕುಂಬ್ರದಲ್ಲಿ ಬಿಜೆಪಿ ಕಾರ್ಯಕರ್ತರು ಒಳಮೊಗ್ರು ಗ್ರಾಮ ಸಮಿತಿ ಅಧ್ಯಕ್ಷ ರಾಜೇಶ್ ರೈ ಪಪುರ್ಂಜ ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಿದರು. ಈ ಸಂದಭರ್ರ್ದಲ್ಲಿ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು ಸಿಹಿ ಹಂಚಿ ಸಂಭ್ರಮಿಸಿದರು.








