ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆಯಲ್ಲಿ ನಿರೀಕ್ಷೆಯಂತೆ ಫಲಿತಾಂಶ ಬಂದಿಲ್ಲ - ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು.ಫೆ.23: ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆಯಲಿ್ಲ ನಿರೀಕ್ಷೆಯಂತೆ ಫಲಿತಾಂಶ ಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬರುವ 2018ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬರುವದಿನಗಳಲ್ಲಿ ಆಡಳಿತ ಸುಧಾರಣೆಗೆ ಹೆಚ್ಚು ಒತ್ತು ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದರು.
ಈ ಮೂಲಕಅವರುಬಜೆಟ್ ಅಧಿವೇಶನದ ನಂತರ ಸರ್ಕಾರದ ಮಟ್ಟದಲ್ಲಿ ಬಹುದೊಡ್ಡ ಬದಲಾವಣೆ ತರುವ ಇಂಗಿತ ವ್ಯಕ್ತಪಡಿಸಿದ್ದಾರೆ. ಹೈಕಮಾಂಡ್ ಜತೆ ಚರ್ಚೆ ನಡೆಸಿ ಸಚಿವ ಸಂಪುಟವನ್ನು ಪು
ನರ್ ರಚಿಸುವುದಾಗಿ ಮತ್ತೊಮ್ಮೆ ಪುನರುಚ್ಚಸಿದರು. ಮುಂದಿನ ದಿನಗಳಲ್ಲಿ ಅಭಿವೃದ್ಧಿ ವೇಗವನ್ನು ಹೆಚ್ಚಿಸುವುದಲ್ಲದೇ 2018ರ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಹೆಚ್ಚಿನ ಉತ್ಸಾಹ ಮತ್ತು ಹುರುಪಿನಿಂದ ಕಾರ್ಯನಿರ್ವಹಿಸುತ್ತೇವೆ ಎಂದರು. ಫಲಿತಾಂಶ ಕುರಿತು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ನಿರೀಕ್ಷೆಗೆ ತಕ್ಕಂತೆ ಮತದಾರರ ಒಲವು ವ್ಯಕ್ತವಾಗಿಲ್ಲ. ಈ ಫಲಿತಾಂಶದಿಂದ ಇನ್ನೂ ಹೆಚ್ಚು ಕೆಲಸ ಮಾಡಲು ಸಾಧ್ಯವಾಗಲಿದೆ ಎಂದು ಹೇಳೀದರು. ತಾವು ಅಧಿಕಾರಕ್ಕೆ ಬಂದ ನಂತರ ಲೋಕಸಭೆ, ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಎದುರಿಸಲಾಗಿದೆ. ಉಳಿದ ಎರಡೂವರೆ ವರ್ಷಗಳ ಕಾಲ ಯಾವುದೇ ಚುನಾವಣೆಗಳಿಲ್ಲ. ಲೋಕಸಭೆ ಚುನಾವಣೆ ಹೊರತು ಪಡಿಸಿ ಎಲ್ಲಾ ಚುನಾವಣೆಗಳಲ್ಲಿ ಪಕ್ಷ ಉತ್ತಮ ಸಾಧನೆ ಮಾಡಿದೆ.
ಇನ್ನು ಮುಂದೆ ಆಡಳಿತದ ಬಗ್ಗೆ ವಿಶೇಷ ಮುತುವರ್ಜಿ ವಹಿಸುವುದಾಗಿ ಹೇಳಿದರು. ಈ ಚುನಾವಣೆ ಫಲಿತಾಂಶದ ಕಾರಣಕ್ಕಾಗಿಸಂಪುಟದಲ್ಲಿಬದಲಾವಣೆ ಮಾಡುತ್ತಿಲ್ಲ. ಬಜೆಟ್ ಅಧಿವೇಶನ ನಂತರ ಮಂತ್ರಿಮಂಡಲ ಪುನರ್ ರಚನೆ ಮಾಡಲಾಗುವುದು ಎಂದು ಮೊದಲೇ ಹೇಳಿದ್ದೆ. ಈಗ ಸಂಪುಟದಲ್ಲಿರುವ ಎಲ್ಲರೂ ದಕ್ಷರೇ ಆಗಿದ್ದಾರೆ. ಆದರೆ ಹೊಸಬರಿಗೆ ಅವಕಾಶ ಕಲ್ಪಿಸಬೇಕಾಗಿರುವುದರಿಂದ ಬದಲಾವಣೆ ಅಗತ್ಯ ಎಂದು ಪ್ರತಿಪಾದಿಸಿದರು. ಅತಂತ್ರ ಪರಿಸ್ಥಿತಿ ಇರುವ ಕಡೆಗಳಲ್ಲಿ ಕೋಮುವಾದಿ ಬಿಜೆಪಿ ಜತೆ ಹೊಂದಾಣಿಕೆ ಇಲ್ಲ. ಜಾತ್ಯತೀತ ಮನಸ್ಥಿತಿಯ ಸ್ವತಂತ್ರ ಅಭ್ಯರ್ಥಿಗಳ ಜತೆ ಚರ್ಚೆ ನಡಸಿ ಹೊಂದಾಣಿಕೆ ಮಾಡಿಕೊಂಡು ಅಧಿಕಾರ ಹಿಡಿಯುತ್ತೇವೆ.
ಬೆಳಗಾವಿ, ಯಾದಗಿರಿ, ಕೋಲಾರದಲ್ಲಿ ಸ್ವತಂತ್ರ ಅಭ್ಯರ್ಥಿಗಳ ಜತೆ ಸೇರಿ ಅಧಿಕಾರ ಹಿಡಿಯಲಾಗುವುದು ಎಂದರು. ಜಿಲ್ಲಾ ಪಂಚಾಯತ್‌ನಲ್ಲಿ ಕಾಂಗ್ರೆಸ್ 496, 410 ಬಿಜೆಪಿ, ಜೆಡಿಎಸ್ 147 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್ ಒಟ್ಟಾರೆ ಶೇ 46, ಶೇ 38 ಬಿಜೆಪಿ, ಶೇ 14 ರಷ್ಟು ಜೆಡಿಎಸ್‌ಗೆ ದೊರೆತಿದೆ. 2011ರಲ್ಲಿ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಶೇ 35 ರಷ್ಟು, ಬಿಜೆಪಿ ಶೇ 44 ಹಾಗೂ ಜೆಡಿಎಸ್ 18 ರಷ್ಟು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ ಎಂದು ಪಕ್ಷದ ಸಾಧನೆಗಳನ್ನು ಸಮರ್ಥಿಸಿಕೊಂಡರು.
ಪಕ್ಷ ಮತ್ತು ಸರ್ಕಾರ ಜನರ ವಿಶ್ವಾಸ ಉಳಿಸಿಕೊಂಡಿದೆ. ಈ ಚುನಾವಣೆ ಫಲಿತಾಂಶ ಸರ್ಕಾರದ ಜನಾದೇಶವಲ್ಲ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬೇರೆ ಬೇರೆ ವಿಚಾರಗಳ ಬಗ್ಗೆ ಚರ್ಚೆಯಾಗುತ್ತದೆ. ಸ್ಥಳೀಯ ವಿಚಾರಗಳ ಆಧಾರದ ಮೇಲೆ ಮತದಾರರು ಮತದಾನ ಮಾಡುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಯಿಸಿದರು. ಮೈಸೂರಿನ ವರುಣಾ ಕ್ಷೇತ್ರದ ಮೂರು ಜಿಲ್ಲಾ ಪಂಚಾಯತ್ ಕ್ಷೇತ್ರಗಳ:ಲ್ಲಿ ಸೋತಿದ್ದು ನಿಜ. ಆದರೆ ವರುಣಾದಲ್ಲಿ 3 ಕಾಂಗ್ರೆಸ್, 3 ಬಿಜೆಪಿ ಗೆದ್ದಿದೆ ಎಂದು ಸಿದ್ದರಾಮಯ್ಯ ಹೇಳಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಸಚಿವ ಎಚ್.ಕೆ. ಪಾಟೀಲ್ ಗದಗ್‌ನಲ್ಲಿ ಪ್ರತಿಕ್ರಿಯೆ ನೀಡಿ, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆಡಳಿತದಲ್ಲಿ ಮೂಡಿಸಿರುವ ಚುರುಕು ಮತ್ತು 21 ಅಂಶಗಳ ಕಾರ್ಯಕ್ರಮ ಸಮರ್ಪಕ ಜಾರಿಗೆ ರಾಜ್ಯದ ಮತದಾರರು ನೀಡಿರುವ ಪ್ರೋತ್ಸಾಹ ಈ ಫಲಿತಾಂಶವಾಗಿದೆ ಎಂದಿದ್ದಾರೆ







