ಮಂಗಳೂರು : ವ್ಯಕ್ತಿಗೆ ಹಲ್ಲೆ: ಆಸ್ಪತ್ರೆಗೆ ದಾಖಲು
ಮಂಗಳೂರು, ಫೆ. 23: ಇಂದು ಜಿ.ಪಂ. ತಾಲೂಕು ಪಂಚಾಯತ್ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ವಿಜಯೋತ್ಸವ ಆಚರಿಸುವ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವ್ಯಕ್ತಿಯೋರ್ವನ ಹಲ್ಲೆ ನಡೆಸಿರುವ ಘಟನೆ ನಡೆದಿದೆ.ಮುಡಿಪು ಜಿ.ಪಂ. ಸಹಿತ ಇತರ ತಾಲೂಕು ಪಂಚಾಯತ್ ಕ್ಷೇತ್ರದ ಅಭ್ಯರ್ಥಿಗಳು ಜಯಭೇರಿ ಬಾರಿಸಿರುವುದರಿಂದ ಮುಡಿಪುನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಿಹಿ ಹಂಚುವ ಕಾರ್ಯಕ್ರಮವನ್ನು ಇಟ್ಟುಕೊಂಡಿದ್ದರು. ಅದರಂತೆ ರಾತ್ರಿ ಕಾಂಗ್ರೆಸ್‌ನ ಕಾರ್ಯಕರ್ತರು ಸಿಹಿ ತಿಂಡಿ ಹಂಚುವ ವೇಳೆ ಅರಫ ಹನೀಫ್ ಎಂಬವರು ಸಿಹಿ ತಿಂಡಿಯನ್ನು ಸ್ವೀಕರಿಸಲು ನಿರಾಕರಿಸಿದ್ದು, ಇದರಿಂದ ಕುಪಿತಗೊಂಡ ಕೆಲವರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.ಮುಡಿಪುವಿನ ನವಾಝ್, ಖಾದರ್ ಮತ್ತಿತರ ಕಾಂಗ್ರೆಸ್ ಕಾರ್ಯಕರ್ತರು ಹನೀಫ್‌ರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದ್ದು, ಹನೀಫ್ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Next Story





