ಸಿಎಂ ತವರಲ್ಲೇ ಕೈಗೆ ಸೋಲು
ಮೈಸೂರು, ಫೆ.23: ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದರೂ ಕೂಡಾ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಕ್ಷೇತ್ರ ವರುಣಾದಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದೆ.
ವರುಣಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರೇಮಾ ಎಚ್.ಆರ್.(11,651 ಮತ) ಅವರು ಕಾಂಗ್ರೆಸ್ ಅಭ್ಯರ್ಥಿ ಚಂದ್ರಮ್ಮ (8,964 ಮತ) ಅವರನ್ನು ಸೋಲಿಸಿದ್ದಾರೆ. ತಾಲೂಕು ಪಂಚಾಯತ್‌ನಲ್ಲೂ ಬಿಜೆಪಿ ಅಭ್ಯರ್ಥಿಯೇ ಭರ್ಜರಿ ಜಯ ಸಾಧಿಸಿದ್ದಾರೆ. ಇದರಿಂದ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯನವರಿಗೆ ತೀವ್ರ ಮುಖಭಂಗವಾಗಿದೆ. ಈ ಹಿಂದೆ ಅಭೂತಪೂರ್ವವಾಗಿ ಗೆಲ್ಲಿಸಿದ್ದ ವರುಣಾ ಕ್ಷೇತ್ರದ ಮತದಾರರೇ ಇದೀಗ ಬಿಜೆಪಿಗೆ ಮತಹಾಕುವ ಮೂಲಕ ಪರೋಕ್ಷವಾಗಿ ಮುಖ್ಯಮಂತ್ರಿಯ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
Next Story





