Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೆಎನ್‌ಯು ಕಾರ್ಯಕ್ರಮಕ್ಕೆ ವಿದೇಶಿ ನಿಧಿ...

ಜೆಎನ್‌ಯು ಕಾರ್ಯಕ್ರಮಕ್ಕೆ ವಿದೇಶಿ ನಿಧಿ ಬಳಕೆಯಾಗಿಲ್ಲ : ದೆಹಲಿ ಪೊಲೀಸರು

ವಾರ್ತಾಭಾರತಿವಾರ್ತಾಭಾರತಿ25 Feb 2016 12:37 PM IST
share

ನವದೆಹಲಿ : ಜೆಎನ್‌ಯು ಕ್ಯಾಂಪಸ್ಸಿನಲ್ಲಿ ಫೆಬ್ರವರಿ 9ರಂದು ದೇಶ-ವಿರೋಧಿ ಘೋಷಣೆ ಕೂಗಲಾಗಿದೆಯೆನ್ನಲಾದ ವಿವಾದಾಸ್ಪದ ಕಾರ್ಯಕ್ರಮವನ್ನು ವಿದೇಶಿ ನಿಧಿಯನ್ನು ಬಳಸಿ ಆಯೋಜಿಸಲಾಗಿಲ್ಲವೆಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ದೇಶದ್ರೋಹದ ಆರೋಪ ಹೊತ್ತು ಮಂಗಳವಾರ ರಾತ್ರಿ ಶರಣಾಗತರಾದ ಜೆಎನ್‌ಯು ವಿದ್ಯಾರ್ಥಿಗಳಾದ ಉಮರ್ ಖಾಲಿದ್ ಹಾಗೂ ಅನಿರ್ಬನ್ ಭಟ್ಟಾಚಾರ್ಯರನ್ನುಬುಧವಾರ ಪ್ರತ್ಯೇಕವಾಗಿ ಸುಮಾರು 12 ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಪೊಲೀಸರು ಮೇಲಿನ ತೀರ್ಮಾನಕ್ಕೆ ಬಂದಿದ್ದಾರೆ. ಅವರಿಬ್ಬರ ವಿಚಾರಣೆಯನ್ನು ಎರಡು ಹಂತಗಳಲ್ಲಿ ಕ್ಯಾಮರಾ ಎದುರುಗಡೆ ನಡೆಸಲಾಗಿದ್ದು ನಂತರ ಮ್ಯಾಜಿಸ್ಟ್ರೇಟರೊಬ್ಬರನ್ನು ಆರ್‌ಕೆ ಪುರಂ ಪೊಲೀಸ್ ಠಾಣೆಗೆ ಕರೆಸಿ ಇಬ್ಬರನ್ನೂ ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಯಿತು.


ವಿಚಾರಣೆ ವೇಳೆ ಇಬ್ಬರು ಎಸಿಪಿಗಳು, ಮೂವರು ಇನ್‌ಸ್ಪೆಕ್ಟರುಗಳು ಸೇರಿದಂತೆ 10 ಮಂದಿ ಅಧಿಕಾರಿಗಳು ಹಾಜರಿದ್ದರು. ಖಾಲಿದ್ ವಿಚಾರಣೆ ವೇಳೆ ಪೊಲೀಸರೊಂದಿಗೆ ಸಹಕರಿಸಿದ್ದಾನೆಂದು ಹೇಳಲಾಗಿದ್ದು ಅನಿರ್ಬನ್ ಮಾತ್ರ ಹೆಚ್ಚಿನ ಪ್ರಶ್ನೆಗಳಿಗೆ ಉತ್ತರಿಸಿದೆ ಮೌನ ವಹಿಸಿದ್ದನೆಂದು ತಿಳಿದು ಬಂದಿದೆ. ಅಫ್ಜಲ್ ಗುರು ಸ್ಮರಣಾರ್ಥವಾಗಿ ಕ್ಯಾಂಪಸ್ಸಿನಲ್ಲಿ ಕಾರ್ಯಕ್ರಮ ಆಯೋಜನೆ ತನ್ನ ಐಡಿಯಾ ಆಗಿತ್ತು ಎಂದು ಖಾಲಿದ್ ಪೊಲೀಸರಿಗೆತಿಳಿಸಿದ್ದನೆನ್ನಲಾಗಿದ್ದು ಅರ್ನಿಬನ್ ಕಾರ್ಯಕ್ರಮಕ್ಕೆ ಪೋಸ್ಟರುಗಳನ್ನು ಸಿದ್ಧಪಡಿಸಿದ್ದರೆ, ಇನ್ನಷ್ಟೇ ಶರಣಾಗತನಾಗಬೇಕಾದ ಇನ್ನೊಬ್ಬ ವಿದ್ಯಾರ್ಥಿ ರಿಯಾಜ್ ಸೌಂಡ್ ಸಿಸ್ಟಮ್ ವ್ಯವಸ್ಥೆ ಮಾಡಿದ್ದ ಹಾಗೂ ಸಾಮಾಜಿಕ ತಾಣದಲ್ಲಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ್ದ. ‘‘ವಿಚಾರಣೆ ವೇಳೆ ಬಂಜ್ಯೋತ್ಸನ ಲಹಿರಿಯೆಂಬವ ಈ ಕಾರ್ಯಕ್ರಮದ ಸಹ-ಆಯೋಜಕನಾಗಿದ್ದಾನೆ ಎಂದು ಖಾಲಿದ್ ಹೇಳಿದ್ದಾನೆ. ಇವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಲಾಗುತ್ತಿದೆ,’’ಎಂದು ಪೊಲೀಸರು ತಿಳಿಸಿದ್ದಾರೆ.


ದೇಶ ವಿರೋಧಿ ಘೊಷಣೆಗಳನ್ನು ಹೊರಗಿನವರು ಕೂಗಿದ್ದರೆಂದು ಇಬ್ಬರು ವಿದ್ಯಾರ್ಥಿಗಳೂ ಹೇಳಿದ್ದಾರೆ.ಫೆಬ್ರವರಿ 12 ಹಾಗೂ 21ರ ಮಧ್ಯೆ ಅವರೆಲ್ಲಿದ್ದರು, ಯಾರು ಅವರಿಗೆ ಸಹಾಯ ಮಾಡಿದ್ದರು, ಅವರೇಕೆ ದೇಶವಿರೋಧಿ ಘೋಷಣೆ ಕೂಗಿದ್ದರು ಹಾಗೂ ಅವರನ್ನು ಈ ನಿಟ್ಟಿನಲ್ಲಿ ಯಾರಾದರೂ ಪ್ರೇರೇಪಿಸಿದ್ದರೇ ಎಂದು ಪೊಲೀಸರು ಅವರನ್ನು ಪ್ರಶ್ನಿಸಿದ್ದರು, ಎಂದು ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X