Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು :ರಾಜ್ಯಕ್ಕೆ ಶಾಶ್ವತ ಕೊಡುಗೆ...

ಮಂಗಳೂರು :ರಾಜ್ಯಕ್ಕೆ ಶಾಶ್ವತ ಕೊಡುಗೆ ನೀಡಿದ ದೇವರಾಜ ಅರಸು: ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ25 Feb 2016 6:39 PM IST
share
ಮಂಗಳೂರು :ರಾಜ್ಯಕ್ಕೆ ಶಾಶ್ವತ ಕೊಡುಗೆ ನೀಡಿದ ದೇವರಾಜ ಅರಸು: ಜಿಲ್ಲಾಧಿಕಾರಿ

ಮಂಗಳೂರು,ಫೆಬ್ರವರಿ 24: ಹಿಂದುಳಿದ ವರ್ಗಗಳ ಹರಿಕಾರರಾಗಿರುವ ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರು ತಮ್ಮ ಅಧಿಕಾರವಧಿಯಲ್ಲಿ ರಾಜ್ಯಕ್ಕೆ ನೀಡಿದ ಕೊಡುಗೆಗಳಿಂದಾಗಿ ಜನತೆ ಇಂದು ಅವರನ್ನು ಸದಾ ನೆನಪಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ತಿಳಿಸಿದ್ದಾರೆ.

   ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ರಾಜ್ಯ ಸರಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಏರ್ಪಡಿಸಿರುವ ದೇವರಾಜ ಅರಸು ಅವರ ಛಾಯಾಚಿತ್ರಗಳ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಉಳುವವನೇ ಹೊಲದೊಡೆಯ ಎಂಬ ಕಾನೂನು ಮೂಲಕ ಅನೇಕ ಮಂದಿಗೆ ಭೂಮಿಯ ಮಾಲಕತ್ವ ಒದಗಿಸಿದ ಕೀರ್ತಿ ಅರಸು ಅವರದ್ದಾಗಿದೆ. ಅರಸು ಅವರ ಕೊಡುಗೆಗಳ ಅರಿವು ಇಂದಿನ ಪೀಳಿಗೆಗೆ ಅವಶ್ಯವಾಗಿದೆ. ಈ ನಿಟ್ಟಿನಲ್ಲಿ ವಾರ್ತಾ ಇಲಾಖೆಯು ಆಯೋಜಿಸಿರುವ ಅರಸು ಅವರ ಛಾಯಾಚಿತ್ರಗಳ ಪ್ರದರ್ಶನ ಶ್ಲಾಘನೀಯವಾಗಿದೆ ಎಂದು ಅವರು ಹೇಳಿದರು.

     ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಐ. ಶ್ರೀವಿದ್ಯಾ, ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಪ್ರಕಾಶ್ ನಾಯಕ್ ಉಪಸ್ಥಿತರಿದ್ದರು. ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಶಾ ಸ್ವಾಗತಿಸಿದರು.

ಪ್ರದರ್ಶನ:      ದೇವರಾಜ ಅರಸು ಅವರ ಛಾಯಾಚಿತ್ರಗಳ ಪ್ರದರ್ಶನವನ್ನು ನಗರದ ರಾಜ್ಯದ ಎಲ್ಲಾ 30 ಜಿಲ್ಲೆಗಳಲ್ಲಿ ಇಂದಿನಿಂದ ಆಯೋಜಿಸುತ್ತಿದೆ. ದೇವರಾಜ ಅರಸು ಅವರ ಬಾಲ್ಯ ಜೀವನ, ಶಿಕ್ಷಣ, ಜೀವನ ವಿವಿಧ ಹಂತಗಳ, ರಾಜಕೀಯ ಸ್ಥಾನಮಾನಗಳ, ಮಾಹಿತಿಗಳು ಈ ಛಾಯಾಚಿತ್ರ ಪ್ರದರ್ಶನದಲ್ಲಿವೆ. ಉಳುವವನೇ ಹೊಲದೊಡೆಯ ಸೇರಿದಂತೆ ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದ ಆಡಳಿತಾವಧಿಯಲ್ಲಿ ಜಾರಿಗೆ ಬಂದ ಚಾರಿತ್ರಿಕ ಯೋಜನೆಗಳು, ಸಾಮಾನ್ಯ ಜನತೆಗೆ ಅವರ ಕೊಡುಗೆಗಳು, ಅವರ ಅಧಿಕಾರಾವಧಿಯಲ್ಲಿ ಕರ್ನಾಟಕಕ್ಕೆ ಭೇಟಿ ಕೊಟ್ಟ ವಿದೇಶೀ ನಾಯಕರು, ಅವರ ಭೇಟಿಯಿಂದ ರಾಜ್ಯಕ್ಕೆ ದೊರೆತ ಪ್ರಯೋಜನೆಗಳು, ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ಕರ್ನಾಟಕದ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ ಸಂದರ್ಭದಲ್ಲಿ ನಡೆದ ಘಟನೆಗಳು ಮತ್ತಿತರ ಘಟನೆಗಳ ಮಾಹಿತಿಯನ್ನು ಈ ಛಾಯಾಚಿತ್ರಗಳ ಮೂಲಕ ಜನತೆಯ ಮುಂದಿಡಲಾಗುತ್ತಿದೆ. ಅರಸು ಅವರ ಕೊನೆಯ ದಿನಗಳ ದೃಶ್ಯಗಳನ್ನು ಛಾಯಾಚಿತ್ರದಲ್ಲಿ ಕಾಣಬಹುದು.

      ಇಂದಿನ ಯುವಪೀಳಿಗೆ, ವಿದ್ಯಾರ್ಥಿಗಳಿಗೆ ದೇವರಾಜ ಅರಸು ಅವರು ನಾಡಿಗೆ ನೀಡಿದ ಕೊಡುಗೆಗಳ ಮಾಹಿತಿ, ಅವರ ವ್ಯಕ್ತಿತ್ವದ ಪರಿಚಯ ಮಾಡಿಸಲು ಈ ಛಾಯಾಚಿತ್ರ ಪ್ರದರ್ಶನ ಸಹಕಾರಿಯಾಗಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X