ಜಿಪಂನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ?...ದೇವೇಗೌಡ-ಸದಾನಂದ ಗೌಡ ಮಾತುಕತೆ

ಹೊಸದಿಲ್ಲಿ, ಫೆ.25: ಕರ್ನಾಟಕದಲ್ಲಿ ಹನ್ನೊಂದು ಜಿಲ್ಲೆಗಳಲ್ಲಿ ಬಹುಮತವಿಲ್ಲದೆ ಅತಂತ್ರವಾಗಿರುವ ಜಿಲ್ಲಾ ಪಂಚಾಯತ್‌ಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಮೂಲಕ ಅಧಿಕಾರ ಹಂಚಿಕೊಳ್ಳುವ ನಿಟ್ಟಿನಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಕೇಂದ್ರ ಕಾನೂನು ಸಚಿವ ಹಾಗೂ ಬಿಜೆಪಿ ನಾಯಕ ಡಿ.ವಿ. ಸದಾನಂದ ಗೌಡ ಇಂದು ಮಾತುಕತೆ ನಡೆಸಿದ್ದಾರೆ.
ಹೊಸದಿಲ್ಲಿಯಲ್ಲಿ ದೇವೇಗೌಡರನ್ನು ಭೇಟಿಯಾದ ಸದಾನಂದ ಗೌಡ ಬಿಜೆಪಿಗೆ ಬೆಂಬಲ ನೀಡುವಂತೆ ಮನವಿ ಮಾಡಿದರೆಂದು ಗೊತ್ತಾಗಿದೆ. ಮೈತ್ರಿಗೆ ದೇವೇಗೌಡರು ಒಲವು ವ್ಯಕ್ತಪಡಿಸಿದ್ದಾರೆಂದು ತಿಳಿದು ಬಂದಿದೆ.
Next Story





