ಉತ್ತರಪ್ರದೇಶ: ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ
ವಾರಾಣಾಸಿ, ಫೆ.27: ಮೂವರು ದುರುಳರು 14ರ ಹರೆಯದ ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಲ್ಲದೆ, ಸೀಮೆ ಎಣ್ಣೆ ಸುರಿದು ಸುಡಲು ಯತ್ನಿಸಿದ ಅಮಾನವೀಯ ಘಟನೆ ಉತ್ತರ ಪ್ರದೇಶದ ಗಾಝಿಯಾಪುರ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.
ಶಿವಾನ್ ನಗರದಲ್ಲಿ ಏಳನೆ ತರಗತಿಯಲ್ಲಿ ಓದುತ್ತಿರುವ ಬಾಲಕಿ ಶಾಲೆಗೆ ತೆರಳುವ ಮಾರ್ಗ ಮಧ್ಯೆಯ ಕಬ್ಬಿನ ಗದ್ದೆಯೊಂದರಲ್ಲಿ ಅವಿತು ಕುಳಿತ್ತಿದ್ದ ಮೂವರು ಯುವಕರು ಆಕೆಯ ಮೇಲೆ ಗ್ಯಾಂಗ್ ರೇಪ್ ನಡೆಸಿದ್ದಾರೆ. ಆ ನಂತರ ಆಕೆಯ ಮೇಲೆ ಸೀಮೆ ಎಣ್ಣೆ ಸುರಿದು ಸುಡಲು ಯತ್ನಿಸಿದ್ದಾರೆ.
ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಬಾಲಕಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ. ಪೊಲೀಸರು ಈ ಅಹಿತಕರ ಘಟನೆಗೆ ಸಂಬಂಧಿಸಿ ಮೂವರು ಕಿರಾತಕರ ವಿರುದ್ಧ ದೂರು ದಾಖಲಿಸಿದ್ದಾರೆ.
Next Story





