Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಳೆದುಹೋದ 3000 ಅಮೆರಿಕನ್ ಡಾಲರ್ ನ್ನು...

ಕಳೆದುಹೋದ 3000 ಅಮೆರಿಕನ್ ಡಾಲರ್ ನ್ನು ಭಾರತೀಯನಿಗೆ ಮರಳಿಸಿ ಪ್ರಾಮಾನಿಕತೆ ಮೆರೆದ ಜಪಾನಿ ಪ್ರಜೆ

ಭಾರತ-ಜಪಾನ್ ಸಂಬಂಧಕ್ಕೊಂದು ಹೆಮ್ಮೆಯ ಗರಿ

ವಾರ್ತಾಭಾರತಿವಾರ್ತಾಭಾರತಿ27 Feb 2016 6:04 PM IST
share
ಕಳೆದುಹೋದ 3000 ಅಮೆರಿಕನ್ ಡಾಲರ್ ನ್ನು ಭಾರತೀಯನಿಗೆ ಮರಳಿಸಿ ಪ್ರಾಮಾನಿಕತೆ ಮೆರೆದ ಜಪಾನಿ ಪ್ರಜೆ

ನವದೆಹಲಿ,ಫೆ27: ಏಷ್ಯಾ ಖಂಡದ ಪ್ರಬಲ ರಾಷ್ಟ್ರಗಳೆಂದು ಪರಿಗಣಿತವಾದ ಭಾರತ ಹಾಗೂ ಜಪಾನ್ ನಡುವಣ ಸಂಬಂಧಗಳು ರಾಜತಾಂತ್ರಿಕ ಮಟ್ಟದಲ್ಲಿ ಸಾಕಷ್ಟು ಸುಧಾರಿಸಿವೆ. ಆದರೆ ವೈಯಕ್ತಿಕ ಮಟ್ಟದಲ್ಲಿಯೂ ಈ ಸಂಬಂಧಗಳು ಸುಧಾರಿಸುತ್ತಿವೆ ಹಾಗೂ ಸುಧಾರಿಸಿವೆಯೆಂಬುದಕ್ಕೆ ಇಲ್ಲಿದೆ ಒಂದು ಅತ್ಯುತ್ತಮ ದೃಷ್ಟಾಂತ.

ಜನವರಿ 12ರಿಂದ 14ರ ತನಕ ಜಪಾನ್ ರಾಜಧಾನಿ ಟೋಕಿಯೋದಲ್ಲಿ 8ನೇ ಭಾರತ-ಜಪಾನ್ ಎನರ್ಜಿ ಸಭೆ ಯಶಸ್ವಿಯಾಗಿ ನಡೆದಿತ್ತು. ಇದಾದ ನಂತರ, ಅಂದರೆ ಜನವರಿ 19ರಂದು ಅಲ್ಲಿನ ಭಾರತೀಯ ದೂತಾವಾಸ ಕಚೇರಿಗೆ ಮಸಾಟೋ ಹಿರಾಮೋಟೋ ಎಂಬ ಜಪಾನೀಯ ಬರೆದ ಪತ್ರವೊಂದು ತಲುಪಿತ್ತು. ತಾನು ಸಭೆಯ ಸಂದರ್ಭದೊರೆತ ಹಲವಾರು ಭಾರತೀಯ ಕಂಪೆನಿಗಳ ಕೈಪಿಡಿಗಳನ್ನು ಪರಿಶೀಲಿಸುತ್ತಿದ್ದಾಗ ಅದರ ನಡುವೆ 3000 ಅಮೆರಿಕನ್ ಡಾಲರ್ ಇದ್ದ ಪ್ಯಾಕೆಟ್ ಒಂದು ಪತ್ತೆಯಾಗಿತ್ತೆಂದೂ ಅದರ ವಾರಿಸುದಾರರನ್ನು ಪತ್ತೆ ಹಚ್ಚಿ ಅದನ್ನು ಅವರಿಗೆ ಹಿಂದಿರುಗಿಸಬೇಕೆಂದೂ ಪತ್ರದಲ್ಲಿ ಬರೆದಿತ್ತು.

ಆ ವ್ಯಕ್ತಿಯ ಪ್ರಾಮಾಣಿಕತೆಯನ್ನು ಮೆಚ್ಚಿದ ದೂತಾವಾಸ ಅಧಿಕಾರಿಗಳು ಹೆಚ್ಚಿನ ಮಾಹಿತಿಯನ್ನು ಕೇಳಿದ್ದರು. ಹಿರಾಮೊಟೋ ನೀಡಿದ ಮಾಹಿತಿಯಂತೆ ಟೋಕಿಯೋದಲ್ಲಿನ ಭಾರತೀಯ ರಾಯಭಾರ ಕಚೇರಿಯ ಸಭೆಯಲ್ಲಿ ಭಾಗವಹಿಸಿದ್ದ ಎಲ್ಲಾ ಕಂಪೆನಿಗಳ ವಿವರಗಳನ್ನು ಪರಿಶೀಲಿಸಿ ಕೊನೆಗೆ ಈ ಹಣವು ಎಫ್‌ಐಇಎಂ ಇಂಡಸ್ಟ್ರೀಸ್ ಇದರ ಅಧ್ಯಕ್ಷ ಹಾಗೂ ಆಡಳಿತ ನಿರ್ದೇಶಕ ಜೆ.ಕೆ.ಜೈನ್ ಅವರದ್ದೆಂದು ಪತ್ತೆ ಹಚ್ಚಲಾಯಿತು.

ಜೆ.ಕೆ.ಜೈನ್ ಅವರನ್ನು ಸಂಪರ್ಕಿಸಿದಾಗ ಆ ಹಣ ಅವರದ್ದೇ ಎಂದು ದೃಢ ಪಟ್ಟಿತ್ತು. ಪರಿಶೀಲನೆಗಳ ನಂತರ ಹಣವನ್ನು ಟೋಕಿಯೋದಲ್ಲಿರುವ ಕಂಪೆನಿಯ ಪ್ರತಿನಿಧಿ ಸುಜನ್ ಆರ್.ರಾಯ್‌ರವರಿಗೆ ಜಪಾನಿನ ಭಾರತೀಯ ರಾಯಭಾರಿಯವರು ಫೆ. 23ರಂದು ಹಸ್ತಾಂತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X