ಬೈಲುಕೊಪ್ಪದಲ್ಲಿ ಭೀಕರ ರಸ್ತೆ ಅಪಘಾತ: ಮಡಿಕೇರಿಯ ಮೂವರು ವಿದ್ಯಾರ್ಥಿಗಳ ದುರ್ಮರಣ

ಮಡಿಕೇರಿ, ಫೆ.27: ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಡಿಕೇರಿಯ ಮೂವರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಕುಶಾಲನಗರ ಸಮೀಪ ಬೈಲಕೊಪ್ಪೆಯಲ್ಲಿ ನಡೆದಿದೆ.
ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿಗಳಾದ ಸುಬ್ಬಯ್ಯ, ವಿವೇಕ್, ಪೂವಣ್ಣ ಮೃತಪಟ್ಟ ದುರ್ದೈವಿಗಳು. ಕಾರಿನಲ್ಲಿದ್ದ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿರುವ ವಿನಯ್, ಮಾಚಯ್ಯ, ತಿಮ್ಮಯ್ಯ ಅವರುಗಳನ್ನು ಮೈಸೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಮೈಸೂರಿನಿಂದ ಮಡಿಕೇರಿ ಕಡೆಗೆ ಕಾರಿನಲ್ಲಿ ಬರುತ್ತಿದ್ದ ಸಂದರ್ಭ ಬೈಲುಕೊಪ್ಪ ಬಳಿ ಲಾರಿಗೆ ಢಿಕ್ಕಿಯಾಗಿ ಘಟನೆ ಸಂಭವಿಸಿದೆ. ಮೃತ ವಿದ್ಯಾರ್ಥಿಗಳು ಕಾಲೇಜಿನ ಅಂತಿಮ ಪದವಿ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಮೈಸೂರಿನಲ್ಲಿ ಹಾಕಿ ಕ್ರೀಡೆಯಲ್ಲಿ ಪಾಲ್ಗೊಂಡು ಹಿಂತಿರುಗುವ ಸಂದರ್ಭ ಘಟನೆ ನಡೆದಿದೆ. ಬೈಲುಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಚಾಲಕ ತಲೆ ಮರೆಸಿಕೊಂಡಿದ್ದಾನೆ.


Next Story





