ಎಪಿಎಂಸಿಗಳಲ್ಲಿ ಮಹಿಳಾ ಕೃಷಿಕರಿಗೆ ಪ್ರತ್ಯೇಕ ಗೋದಾಮು: ಸಚಿವೆ ಉಮಾಶ್ರೀ
ಬೆಂಗಳೂರು, ಫೆ. 27: ಕೃಷಿ ಉತ್ಪನ್ನ ಮಾರುಕಟ್ಟೆ/ಎಪಿಎಂಸಿಗಳಲ್ಲಿ ಮಹಿಳೆಯರಿಗೆ ಪ್ರತ್ಯೇಕ ಗೋದಾಮು ಹಾಗೂ ಶೌಚಾಲಯ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಉಮಾಶ್ರೀ ಇಂದಿಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಶನಿವಾರ ಮಹಿಳೆಯರ ಅಭಿವೃದ್ಧಿಗೆ ಆಯವ್ಯಯ ಪ್ರಸ್ತಾವನೆಗೆ ಸಂಬಂಧಿಸಿದಂತೆ ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಅವರು, ರಾಜ್ಯದಲ್ಲಿ ಎಲ್ಲ ಪೊಲೀಸ್ ಠಾಣೆಗಳಲ್ಲಿ ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಕಲ್ಪಿಸಿಲ್ಲ. ಹೀಗಾಗಿ ಕೂಡಲೇ ಸಮರ್ಪಕ ಶೌಚಾಲಯ ನಿರ್ಮಿಸಲು ಸೂಚಿಸಿದರು.
ಕರ್ತವ್ಯನಿತರ ಮಹಿಳಾ ಪೊಲೀಸ್ ಸಿಬ್ಬಂದಿಯ ಮಕ್ಕಳನ್ನು ನೋಡಿಕೊಳ್ಳಲು ಕ್ರಷ್ ಅಥವಾ ಡೇ ಕೇರ್ ವ್ಯವಸ್ಥೆ ಕಲ್ಪಿಸಬೇಕು. ಪ್ರಸ್ತುತ ಇರುವ ಮಹಿಳಾ ಪೊಲೀಸ್ ಠಾಣೆಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಉಮಾಶ್ರೀ ತಾಕೀತು ಮಾಡಿದರು.
Next Story





