Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಾಳೆಯಿಂದ ಸಫಾಯಿ ಕರ್ಮಚಾರಿಗಳ ಸಮೀಕ್ಷೆ:...

ನಾಳೆಯಿಂದ ಸಫಾಯಿ ಕರ್ಮಚಾರಿಗಳ ಸಮೀಕ್ಷೆ: ಡಿಸಿ

ವಾರ್ತಾಭಾರತಿವಾರ್ತಾಭಾರತಿ27 Feb 2016 11:53 PM IST
share

ಮಂಗಳೂರು, ಫೆ.27: ಒಣ ಶೌಚಾಲಯಗಳ ನಿರ್ಮೂಲನೆ ಹಾಗೂ ಮನುಷ್ಯನ ಮಲವನ್ನು ದೈಹಿಕ ಶ್ರಮದಿಂದ ಸ್ವಚ್ಛಗೊಳಿಸುವ ವೃತ್ತಿಯನ್ನು ತೊಡೆದುಹಾಕಿ ಸಫಾಯಿ ಕರ್ಮಚಾರಿಗಳಿಗೆ ಪರ್ಯಾಯ ಉದ್ಯೋಗ ಹಾಗೂ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಗ್ರಾಮೀಣ ಭಾಗದಲ್ಲಿ ಫೆ.29ರಿಂದ ಮಾರ್ಚ್ 12ರವರೆಗೆ ಸಫಾಯಿ ಕರ್ಮಚಾರಿಗಳ ಸಮೀಕ್ಷೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹೀಂ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಕೇಂದ್ರ ಸರಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲ ಯದ ಸೂಚನೆ ಮೇರೆಗೆ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ವತಿಯಿಂದ ಈ ಸಮೀಕ್ಷೆ ನಡೆಯಲಿದೆ ಎಂದರು. ಸಮೀಕ್ಷೆ ಬಳಿಕ ಮಾ.14ರಿಂದ 19ರವರೆಗೆ ಗ್ರಾಮಸಭೆಗಳನ್ನು ಏರ್ಪಡಿಸಿ, ಗ್ರಾಪಂ ಅಧ್ಯಕ್ಷರಿಂದ ಗ್ರಾಮೀಣ ಸಫಾಯಿ ಕರ್ಮಚಾರಿಗಳ ಭರ್ತಿ ಮಾಡಿದ ಸಮೀಕ್ಷೆಯ ನಮೂನೆಗಳನ್ನು ಶಿಫಾರಸಿನೊಂದಿಗೆ ಜಿಪಂ ಸಿಇಒಗೆ ರವಾನಿಸಲಾಗುವುದು. ಮಾ.21ರಿಂದ 26ರವರೆಗೆ ಸಮೀಕ್ಷೆ ನಮೂನೆಗಳ್ನು ಜಿಲ್ಲಾಧಿಕಾರಿ ಅನುಮೋದನೆಗೆ ಕಳುಹಿಸುವರು. ಎಪ್ರಿಲ್ 4ರಿಂದ 13ರವರೆಗೆ ಸಮೀಕ್ಷಾ ವರದಿಯನ್ನು ಗಣಕೀಕರಣ ಗೊಳಿಸುವ ಕಾರ್ಯ ನಡೆಯಲಿದೆ ಎಂದು ಜಿಲ್ಲಾಧಿಕಾರಿ ವಿವರಿಸಿದರು. ಸಫಾಯಿ ಕರ್ಮಚಾರಿಗಳನ್ನು ಹೇಗೆ ಗುರುತಿಸಲಾಗುತ್ತದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಮಾಜ ಕಲ್ಯಾಣ ಅಧಿಕಾರಿ ಡಾ.ಸಂತೋಷ್ ಕುಮಾರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಮಾರ್ಗಸೂಚಿ ಪ್ರಕಾರ ಚರಂಡಿ/ಬೀದಿಯಲ್ಲಿ ಕುಡಿಸುವವರು ಸಫಾಯಿ ಕರ್ಮಚಾರಿ ಎಂದು ಪರಿಗಣಿಸಲಾಗುವುದಿಲ್ಲ. ದಿನನಿತ್ಯ ಶೌಚಾಲಯವನ್ನು ತೊಳೆಯುವವರೂ ಸಫಾಯಿ ಕರ್ಮಚಾರಿಗಳು ಅಲ್ಲ ಎಂದು ವ್ಯಾಖ್ಯಾನಿಸಲಾಗಿದೆ ಎಂದರು. ರೈಲ್ವೆ ಹಳಿಗಳಲ್ಲಿ ಮಲಸ್ವಚ್ಛ ಮಾಡುವವರು ಸಫಾಯಿ ಕರ್ಮಚಾರಿಗಳಾಗಿ ಪರಿಗಣಿಸಲ್ಪಡುತ್ತಾರೆ. ಈ ಹಿಂದೆ ಸಫಾಯಿ ಕರ್ಮಚಾರಿಗಳಾಗಿದ್ದು, ಪ್ರಸ್ತುತ ಆ ವೃತ್ತಿ ಮಾಡದವರು ಸಫಾಯಿ ಕರ್ಮಚಾರಿಗಳಲ್ಲ. ಪ್ರಸ್ತುತ ಬೇರೆ ಉದ್ಯೋಗದಲ್ಲಿದ್ದರೂ ಯಾವಾಗಲಾದರೂ ಸಫಾಯಿ ಕರ್ಮಚಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರೆ ಅವರನು ಪರಿಗಣಿಸಬಹುದು. ಒಂದು ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಸಫಾಯಿ ಕರ್ಮಚಾರಿಗಳಿದ್ದರೂ ಪ್ರತಿಯೊಬ್ಬರಿಗೂ ಪ್ರತ್ಯೇಕ ನಮೂನೆ ಭರ್ತಿ ಮಾಡಬೇಕು. ಕೆಲವು ಗ್ರಾಮೀಣ ಭಾಗದಲ್ಲಿ ಮಲ ವಿಸರ್ಜನೆ ಮಾಡಲು ಪ್ರತ್ಯೇಕ ಸ್ಥಳ ನಿಗದಿ ಯಾಗಿರುತ್ತದೆ. ಅಂತಹ ಸ್ಥಳಗಳಲ್ಲಿ ಮಲ ಸ್ವಚ್ಛ ಮಾಡುವವರನ್ನು ಸಫಾಯಿ ಕರ್ಮಚಾರಿ ಎಂದು ಪರಿಗಣಿಸಬೇಕು. ಶೌಚಾಲಯ ಗುಂಡಿ, ಒಳಚರಂಡಿ ಗಳಲ್ಲಿ ನಿಗದಿತ ರಕ್ಷಣಾ ಸಾಮಗ್ರಿಗಳನ್ನು ಉಪಯೋಗಿಸದೆ ಮಲ ಸ್ವಚ್ಛಗೊಳಿಸು ವವರನ್ನು ಸಫಾಯಿ ಕರ್ಮಚಾರಿ ಗಳೆಂದು ಪರಿಗಣಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ ಎಂದು ಅವರು ಹೇಳಿದರು. 2015ರ ಸಮೀಕ್ಷೆ ಪ್ರಕಾರ ಜಿಲ್ಲೆಯಲ್ಲಿ 634 ಸಫಾಯಿ ಕರ್ಮಚಾರಿಗಳು
2011ರಲ್ಲಿ ನಡೆದ ಸಮೀಕ್ಷೆಯಲ್ಲಿ ದ.ಕ. ಜಿಲ್ಲೆಯಲ್ಲಿ 123 ಸಫಾಯಿ ಕರ್ಮಚಾರಿಗಳನ್ನು ಗುರುತಿಸಲಾಗಿ ದ್ದರೆ, 2015ರ ಸಮೀಕ್ಷೆಯಲ್ಲಿ 634 ಸಫಾಯಿ ಕರ್ಮಚಾರಿಗಳಿರುವುದು ದಾಖಲಾಗಿದೆ. ಅದರಂತೆ ಮಂಗಳೂರಿ ನಲ್ಲಿ 96, ಬಂಟ್ವಾಳ- 261, ಪುತ್ತೂರು 36, ಬೆಳ್ತಂಗಡಿ 222 ಹಾಗೂ ಸುಳ್ಯದಲ್ಲಿ 19 ಸಫಾಯಿ ಕರ್ಮಚಾರಿಗಳಿದ್ದರು ಎಂದು ಡಾ.ಸಂತೋಷ್ ಕುಮಾರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಪಂ ಸಿಇಒ ಶ್ರೀವಿದ್ಯಾ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X