Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಿಲಿಕುಳದಲ್ಲಿ ರಾಷ್ಟ್ರೀಯ ವಿಜ್ಞಾನ ದಿನ...

ಪಿಲಿಕುಳದಲ್ಲಿ ರಾಷ್ಟ್ರೀಯ ವಿಜ್ಞಾನ ದಿನ :ವಿದ್ಯಾರ್ಥಿಗಳಿಗೆ ವಿವಿಧ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ28 Feb 2016 7:41 PM IST
share
ಪಿಲಿಕುಳದಲ್ಲಿ ರಾಷ್ಟ್ರೀಯ ವಿಜ್ಞಾನ ದಿನ :ವಿದ್ಯಾರ್ಥಿಗಳಿಗೆ ವಿವಿಧ ಕಾರ್ಯಕ್ರಮ

  ಮಂಗಳೂರು,ಫೆ.28: ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ ಪಿಲಿಕುಳದಲ್ಲಿ ಆಯೋಜಿಸಲಾಗಿದ್ದ ಪಿಲಿಕುಳ ಸಂಭ್ರಮದ ಪ್ರಯುಕ್ತ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಿಂದ ರಾಷ್ಟ್ರೀಯ ವಿಜ್ಞಾನ ದಿನ ವನ್ನು ಇಂದು ಆಚರಿಸಲಾಯಿತು.

ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಆಯ್ದ ಹೈಸ್ಕೂಲ್ ಮಕ್ಕಳಿಗೆ ವಿಜ್ಞಾನ ವಿಷಯಗಳಿಗೆ ಸಂಬಂಧಪಟ್ಟ ರಸಪ್ರಶ್ನೆ, ಆಶುಭಾಷಣ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆಯನ್ನು ಮತ್ತು ಶಿಕ್ಷಕರಿಗೆ ಬಯೋಟೆಕ್ , ರೋಬೋಟೆಕ್ ಮತ್ತು ಇಲೆಕ್ಟ್ರಾನಿಕ್ ಕಮ್ಯುನಿಕೇಶನ್‌ನ ಕಾರ್ಯಗಾರವನ್ನು ಆಯೋಜಿಸಲಾಗಿತ್ತು.

   ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ತಾಂತ್ರಿಕ ಮಾಹಿತಿಗಳ ಕಾರ್ಯಕ್ರಮ ಮತ್ತು ಮಾದರಿಗಳ ಪ್ರದರ್ಶನವನ್ನು ಆಯೋಜಿಸಲಾಗಿತ್ತು. 12 ಇಂಜಿನಿಯರಿಂಗ್ ಕಾಲೇಜುಗಳಿಂದ 185 ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. 21 ತಂಡಗಳ ಮಾದರಿ ಪ್ರದರ್ಶನಗಳು ನಡೆದರೆ 19 ತಂಡಗಳಿಂದ ತಾಂತ್ರಿಕ ಮಾಹಿತಿಗಳ ಕಾರ್ಯಕ್ರಮ ನಡೆಯಿತು.

1.80 ಕೋಟಿ ವೆಚ್ಚದಲ್ಲಿ ಅನ್ವೇಷಣಾ ಕೇಂದ್ರಗಳ ಸಮುಚ್ಚಯ:

  ಪಿಲಿಕುಳ ರಾಷ್ಟ್ರೀಯ ವಿಜ್ಞಾನ ಕೇಂದ್ರದಲ್ಲಿ 1.80 ಕೋಟಿ ವೆಚ್ಚದಲ್ಲಿ ಅನ್ವೇಷಣಾ ಕೇಂದ್ರಗಳ ಸಮುಚ್ಚಯವನ್ನು ಸ್ಥಾಪಿಸಲಾಗುತ್ತಿದೆ ಎಂದು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ.ಕೆ.ವಿ.ರಾವ್ ಹೇಳಿದರು. ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸಲು ಈ ಅನ್ವೇಷಣಾ ಕೇಂದ್ರಗಳ ಸಮುಚ್ಚಯ ಆರಂಭಿಸಲಾಗುತ್ತಿದ್ದು ರಾಜ್ಯ ಸರಕಾರ 90 ಲಕ್ಷ ಮತ್ತು ಕೇಂದ್ರ ಸರಕಾರ 90 ಲಕ್ಷ ಹಣವನ್ನು ನೀಡುತ್ತಿದೆ. 3 ವರ್ಷಗಳ ಕಾಲ ತಲಾ 20 ಲಕ್ಷ ರೂಪಾಯಿಯನ್ನು ರಾಜ್ಯ ಸರಕಾರ ನಿರ್ವಹಣೆಗೆಂದು ನೀಡಲಿದೆ ಎಂದು ಅವರು ಹೇಳಿದರು.

ಗಮಸೆಳೆದ ವಿದ್ಯಾರ್ಥಿಗಳ ಮಾದರಿ ಪ್ರದರ್ಶನ

ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹೊಸ ಹೊಸ ಯೋಜನೆಗಳ ಮಾದರಿಗಳ ಪ್ರದರ್ಶನವನ್ನು ಆಯೋಜಿಸಿದ್ದು ಇವುಗಳು ವಿಜ್ಞಾನಾಸಕ್ತರ ಗಮನಸೆಳೆಯಿತು.

   ವಾಮಂಜೂರು ಸಂತ ಜೋಸೆಫ್ ಇಂಜಿನಿಯರಿಂಗ್ ವಿದ್ಯಾರ್ಥಿಗಳು ತ್ಯಾಜ್ಯ ಪ್ಲಾಸ್ಟಿಕ್‌ನಿಂದ ಇಟ್ಟಿಗೆ ನಿರ್ಮಾಣ ಮಾಡುವ ತಂತ್ರಜ್ಞಾನದ ಪ್ರದರ್ಶನ ನೀಡಿದರು. ಮಣ್ಣಿನಿಂದ ಬಿಸಿ ಮಾಡಿ ತಯಾರಿಸುವ ಇಟ್ಟಿಗೆಯ ಆಕಾರದಲ್ಲಿ ಪ್ಲಾಸ್ಟಿಕ್ ತ್ಯಾಜ್ಯದಿಂದ ಮಾಡುವ ಇಟ್ಟಿಗೆಯನ್ನು ತಯಾರಿಸುವ ತಂತ್ರಜ್ಞಾನ ಮಾಡಿರುವುದು ಪರಿಸರಕ್ಕೆ ಪೂರಕವಾದ ಕಾರಣ ಎಲ್ಲರ ಆಕರ್ಷಣೆಗೆ ಪಾತ್ರವಾಯಿತು. ಪ್ಲಾಸ್ಟಿಕ್‌ನಿಂದ ತಯಾರಿಸಲಾದ ಇಟ್ಟಿಗೆಯು 9 ಟನ್ ಸಾಮರ್ಥ್ಯವನ್ನು ತಡೆದುಕೊಳ್ಳುವ ಸಾಮರ್ಥ್ಯವಿದ್ದರೆ ಪ್ಲಾಸ್ಟಿಕ್‌ನಿಂದ ತಯಾರಿಸಲಾದ ಇಟ್ಟಿಗೆಯು 17 ಟನ್ ಸಾಮರ್ಥ್ಯವನ್ನು ತಡೆದುಕೊಳ್ಳುವ ಸಾಮಥ್ಯವಿದೆ .

     ಅದೇ ರೀತಿ ಶ್ರೀನಿವಾಸ ಇನ್ಸಿಟೂಟ್ ಆಫ್ ಟೆಕ್ನೋಲಜಿಯ ವಿದ್ಯಾರ್ಥಿಗಳ ಮಾನವರಹಿತ ವಿಮಾನದ ಮಾದರಿ, ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ರಾಸಾಯನಿಕ ಸಿಂಪಡಣೆ ಮಾಡಲು ಅನುಕೂಲವಾಗುವ ಯಂತ್ರ, 3ಡಿ ಪ್ರಿಂಟರ್ ಗಮನಸೆಳೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X