Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಬ್ಸಿಡಿಗಳ ಸಿಂಹಪಾಲು ಕಬಳಿಸುತ್ತಿರುವ...

ಸಬ್ಸಿಡಿಗಳ ಸಿಂಹಪಾಲು ಕಬಳಿಸುತ್ತಿರುವ ಭಾರೀ ಶ್ರೀಮಂತರು:ಸುಬ್ರಮಣಿಯನ್

ವಾರ್ತಾಭಾರತಿವಾರ್ತಾಭಾರತಿ28 Feb 2016 7:49 PM IST
share
ಸಬ್ಸಿಡಿಗಳ ಸಿಂಹಪಾಲು ಕಬಳಿಸುತ್ತಿರುವ ಭಾರೀ ಶ್ರೀಮಂತರು:ಸುಬ್ರಮಣಿಯನ್

ಹೊಸದಿಲ್ಲಿ,ಫೆ.28: ವಿತ್ತಸಚಿವ ಅರುಣ್ ಜೇಟ್ಲಿ ಅವರು ಸೋಮವಾರ ಮಂಡಿಸಲಿರುವ ಸಾಮಾನ್ಯ ಮುಂಗಡ ಪತ್ರವು ಕೆಲವು ಸಬ್ಸಿಡಿಗಳ ರದ್ದತಿಗೆ ಮತ್ತು ಬಡವರ ಹೆಸರಿನಲ್ಲಿ ಭಾರೀ ಶ್ರೀಮಂತರ ಜೇಬು ಸೇರುತ್ತಿರುವ ಕೆಲವು ಸಬ್ಸಿಡಿಗಳ ತೀವ್ರ ಪರಿಷ್ಕರಣೆಗೆ ಒತ್ತು ನೀಡಬಹುದು.
ಪ್ರಧಾನಿ ನರೇಂದ್ರ ಮೋದಿಯವರ ಬಳಿಕ ಇದೀಗ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ ಸುಬ್ರಮಣಿಯನ್ ಅವರೂ ತೆರಿಗೆ ವಿನಾಯಿತಿಗಳು ಮತ್ತು ಸಬ್ಸಿಡಿಗಳ ಲಾಭ ಪಡೆದುಕೊಳ್ಳುತ್ತಿರುವವರು ಭಾರೀ ಶ್ರೀಮಂತರೇ ಹೊರತು ಮಧ್ಯಮ ವರ್ಗದವರಾಗಲೀ ಶ್ರೀಮಂತರಾಗಲೀ ಅಲ್ಲ ಎಂದು ಬೆಟ್ಟು ಮಾಡಿದ್ದಾರೆ.
ಬಡವರು ಹೆಚ್ಚಾಗಿ ಬಳಸುತ್ತಿರುವ ರಸಗೊಬ್ಬರವಾಗಿರುವ ಯೂರಿಯಾದ ಮೇಲಿನ ಸಬ್ಸಿಡಿಯನ್ನು ಶ್ರೀಮಂತ ರೈತರೇ ಕಬಳಿಸುತ್ತಿದ್ದಾರೆ. ಅವರು ಅಧಿಕಾರದಲ್ಲಿರುವ ರಾಜಕೀಯ ಪಕ್ಷದೊಂದಿಗೆ ಉತ್ತಮ ನಂಟು ಹೊಂದಿರುವುದು ಇದಕ್ಕೆ ಕಾರಣವಾಗಿದೆ ಎಂದು ಶುಕ್ರವಾರ ಸಂಸತ್ತಿನಲ್ಲಿ ಮಂಡಿಸಲಾದ ಆರ್ಥಿಕ ಸಮೀಕ್ಷೆಯು ತಿಳಿಸಿದೆ. ಇದೇ ರೀತಿ ಸರಕಾರವು ಚಿನ್ನ,ಅಡುಗೆ ಅನಿಲ,ಸೀಮೆಎಣ್ಣೆ,ವಿದ್ಯುತ್ತು,ವಿಮಾನ ಇಂಧನ ಮತ್ತು ರೈಲ್ವೆ ಪ್ರಯಾಣ ದರಗಳ ಮೇಲೆ ಬಡವರಿಗಾಗಿ ನೀಡುವ ರಿಯಾಯಿತಿಗಳ ಲಾಭವನ್ನು ಶ್ರೀಮಂತರೇ ಪಡೆದುಕೊಳ್ಳುತ್ತಿದ್ದಾರೆ ಎಂದು ಸುಬ್ರಮಣಿಯನ್ ಹೇಳಿದ್ದಾರೆ.
 ಬಾಂಗ್ಲಾದೇಶಕ್ಕೆ ಹೊಂದಿಕೊಂಡಿರುವ ಈಶಾನ್ಯ ರಾಜ್ಯಗಳು ಮತ್ತು ನೇಪಾಳಕ್ಕೆ ಹೊಂದಿಕೊಂಡಿರುವ ಉತ್ತರ ಪ್ರದೇಶದಲ್ಲಿ ಗಡಿಯಾಚೆಯಿಂದ ಯೂರಿಯಾ ಕಳ್ಳ ಸಾಗಾಣಿಕೆಯಾಗುತ್ತಿದ್ದು,ಸಣ್ಣ ರೈತರು ಸಬ್ಸಿಡಿಯ ಲಾಭ ಪಡೆದುಕೊಳ್ಳುವುದು ಹೋಗಲಿ,ಮಾರುಕಟ್ಟೆಯ ದರಗಳಿಗಿಂತ ಶೇ.60ರಷ್ಟು ಹೆಚ್ಚಿನ ದರ ತೆತ್ತು ಕಾಳಸಂತೆಯಲ್ಲಿ ಖರೀದಿಸಬೇಕಾದ ಸ್ಥಿತಿಯಿದೆ ಎಂದು ಸುಬ್ರಮಣಿಯನ್ ಆರ್ಥಿಕ ಸಮೀಕ್ಷೆ ವರದಿಯಲ್ಲಿ ತಿಳಿಸಿದ್ದಾರೆ. ಕೆಟ್ಟ ಸಬ್ಸಿಡಿಗಳನ್ನು ರದ್ದುಗೊಳಿಸಬೇಕಾದ ಅಗತ್ಯವಿದೆ ಎಂದು ಅವರು ಒತ್ತಿ ಹೇಳಿದ್ದಾರೆ.
ರಸಗೊಬ್ಬರ ಸಬ್ಸಿಡಿಯನ್ನು ಜನಧನ-ಆಧಾರ್-ಮೊಬೈಲ್ ವೇದಿಕೆಯೊಂದಿಗೆ ಜೋಡಣೆ ಮಾಡಬೇಕೆಂದು ಅವರು ಪ್ರತಿಪಾದಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರೂ ಇತ್ತೀಚಿಗೆ ಇಂತಹುದೇ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು. ಕೆಲವು ಸಬ್ಸಿಡಿಗಳು ಬಡವರನ್ನು ರಕ್ಷಿಸಲು ಅಗತ್ಯವಾಗಿರಬಹುದು ಮತ್ತು ಅವು ಯಶಸ್ವಿಯಾಗಲು ನ್ಯಾಯಯುತವಾದ ಅವಕಾಶವನ್ನು ನೀಡಬೇಕಾಗುತ್ತದೆ. ಹೀಗಾಗಿ ಸಬ್ಸಿಡಿಗಳನ್ನು ನಿವಾರಿಸುವುದು ತನ್ನ ಗುರಿಯಲ್ಲ,ಆದರೆ ಅವುಗಳ ಪರಿಷ್ಕರಣೆಯಾಗಬೇಕು ಎಂದು ಅವರು ಹೇಳಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X