ಉಪ್ಪಿನಂಗಡಿ: ಕಾರು ಡಿಕ್ಕಿ: ಬೈಕ್ ಸವಾರರು ಗಂಭೀರ
ಉಪ್ಪಿನಂಗಡಿ: ಬೈಕ್ ಹಾಗೂ ಕಾರು ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿಯಲ್ಲಿ ಭಾನುವಾರ ಸಂಜೆ ನಡೆದಿದೆ. ಹಿಟಾಚಿ ಅಪರೇಟರ್ ಆಗಿರುವ ಇಬ್ರಾಹೀಂ ಕೆಮ್ಮಾರ (28) ಗಾಯಗೊಂಡ ಬೈಕ್ ಸವಾರ. ಇವರು ಬೈಕ್‌ನಲ್ಲಿ ಬಸ್ ನಿಲ್ದಾಣದ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿ ಪ್ರವೇಶಿಸುವಾಗ ರಾಷ್ಟ್ರೀಯ ಹೆದ್ದಾರಿಯಿಂದ ಬಸ್ ನಿಲ್ದಾಣ ರಸ್ತೆಗೆ ಪ್ರವೇಶಿಸುತ್ತಿದ್ದ ಕಾರು ಡಿಕ್ಕಿ ಹೊಡೆಯಿತು. ಘಟನೆಯಿಂದ ಬೈಕ್ ಸವಾರ ಗಾಯಗೊಂಡಿದ್ದು, ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





