ಬೈಕ್ ಡಿಕ್ಕಿ: ಪಾದಚಾರಿ ಮಹಿಳೆ ಗಂಭೀರ
ಉಪ್ಪಿನಂಗಡಿ: ಬೈಕೊಂದು ಡಿಕ್ಕಿ ಹೊಡೆದು ಪಾದಚಾರಿ ಮಹಿಳೆಯೋರ್ವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಬಳಿಯ ಪೆರಿಯಡ್ಕ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ.
ಇಲ್ಲಿನ ಜನತಾ ಕಾಲನಿ ನಿವಾಸಿ ದೇವಮ್ಮ (55) ಗಾಯಗೊಂಡ ಮಹಿಳೆ. ಉಪ್ಪಿನಂಗಡಿ ಕಡೆಯಿಂದ ಬಂದ ಬೈಕ್ ಪೆರಿಯಡ್ಕ ಬಳಿ ರಸ್ತೆ ದಾಟುತ್ತಿದ್ದ ದೇವಮ್ಮ ಎಂಬವರಿಗೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ರಸ್ತೆಗೆಸೆಯಲ್ಪಟ್ಟ ದೇವಮ್ಮ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಪುತ್ತೂರು ಸಂಚಾರಿ ಪೊಲೀಸರು ಪ್ರಕರಣ ದಾಖಸಿಕೊಂಡಿದ್ದಾರೆ.
Next Story





