Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಇಸ್ಲಾಮ್ ಮೂಲೋತ್ಪಾಟನೆ ಆಗದೆ ಭಯೋತ್ಪಾದನೆ...

ಇಸ್ಲಾಮ್ ಮೂಲೋತ್ಪಾಟನೆ ಆಗದೆ ಭಯೋತ್ಪಾದನೆ ಕಿತ್ತು ಹಾಕಲು ಸಾಧ್ಯವಿಲ್ಲ: ಬಿಜೆಪಿ ಸಂಸದ ಆಘಾತಕಾರಿ ಹೇಳಿಕ

ವಾರ್ತಾಭಾರತಿವಾರ್ತಾಭಾರತಿ28 Feb 2016 11:48 PM IST
share
ಇಸ್ಲಾಮ್ ಮೂಲೋತ್ಪಾಟನೆ ಆಗದೆ ಭಯೋತ್ಪಾದನೆ ಕಿತ್ತು ಹಾಕಲು ಸಾಧ್ಯವಿಲ್ಲ: ಬಿಜೆಪಿ ಸಂಸದ ಆಘಾತಕಾರಿ ಹೇಳಿಕ

ಶಿರಸಿ, ಫೆ.28: ಎಲ್ಲಿಯವರೆಗೆ ಜಗತ್ತಿನಲ್ಲಿ ಇಸ್ಲಾಮ್ ಇರುತ್ತದೆಯೋ ಅಲ್ಲಿಯವರೆಗೆ ಭಯೋತ್ಪಾದನೆ ಯನ್ನು ಮಟ್ಟ ಹಾಕಲು ಸಾಧ್ಯವಿಲ್ಲ ಎಂದು ಸಂಸದ ಅನಂತ್ ಕುಮಾರ್ ಹೆಗಡೆ ಆಘಾತಕಾರಿ ಹೇಳಿಕೆ ನೀಡಿದ್ದಾರೆ.

ರವಿವಾರ ಶಿರಸಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಭಯೋತ್ಪಾದನೆಗೆ ಕೇಂದ್ರಬಿಂದುವಾಗಿದೆ. ಇಸ್ಲಾಮ್ ಜಗತ್ತಿನ ಶಾಂತಿಗೆ ಬಾಂಬ್ ಇಟ್ಟಿದೆ ಎಂದು ಹೇಳಿದರು.

ದೇಶದಲ್ಲಿ ಕೆಲ ಬುದ್ದಿಜೀವಿಗಳು ಮತ್ತು ಮಾಧ್ಯಮದವರು ಭಯೋತ್ಪಾದನೆಗೆ ಬೆಂಬಲ ನೀಡುತ್ತಿದ್ದಾರೆ. ಜೆಎನ್‌ಯು ವಿಶ್ವವಿದ್ಯಾನಿಲಯದಲ್ಲಿ ನಡೆದ ಘಟನೆಯು ಇದಕ್ಕೆ ಸಾಕ್ಷಿಯಾಗಿದೆ. ದೇಶದ್ರೋಹದ ಕುರಿತಾಗಿ ಕೇಂದ್ರ ಸರಕಾರ ಕಠಿಣ ನಿಲುವು ತಳೆಯುವ ಸಂದರ್ಭದಲ್ಲಿ ದೇಶದ್ರೋಹಿ ಚಟುವಟಿಕೆಗಳನ್ನು ವೈಭವೀಕರಿಸುವ ಮಾಧ್ಯಮಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕಾದ ಸ್ಥಿತಿ ಇಂದು ನಿರ್ಮಾಣವಾಗಿದೆ ಎಂದ ಅವರು, ಇಂದು ಇಡೀ ದೇಶದ ಭಯೋತ್ಪಾದಕ ಕೇಂದ್ರ ಉತ್ತರ ಕನ್ನಡದ ಭಟ್ಕಳ ಹಾಗೂ ಉತ್ತರಪ್ರದೇಶದ ಅಜಂಘಡ ಎನ್ನುವುದು ಎಲ್ಲರಿಗೂ ತಿಳಿದಿರುವ ಸಂಗತಿಯಾಗಿದೆ.

ಇಸ್ಲಾಮ್ ಇರುವವರೆಗೆ ಭಯೋತ್ಪಾದನೆ ನಿಯಂತ್ರಣ ಹಾಗೂ ಜಗತ್ತಿನಲ್ಲಿ ಶಾಂತಿ ಇರಲು ಸಾಧ್ಯವಿಲ್ಲ. ಸರಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕಿದೆ. ಮಾಧ್ಯಮ ಗಳು ಸಹ ಸರಕಾರದೊಂದಿಗೆ ಸಹಕರಿಸಿ ತಮ್ಮ ಜವಾಬ್ದಾರಿ ಯನ್ನು ಸರಿಯಾಗಿ ನಿಭಾಯಿಸಬೇಕು ಎಂದರು.

ಸರಕಾರ ಭಯೋತ್ಪಾದಕನ ವಿರುದ್ಧ ಪೂರಕ ಸಾಕ್ಷಾಧಾರಗಳನ್ನು ಕೊಟ್ಟರೂ ಸಹ ಕೆಲ ಮಾಧ್ಯಮಗಳು ಅದನ್ನು ಪ್ರಚಾರ ಮಾಡುವ ಬದಲು, ಭಯೋತ್ಪಾದಕನಿಗೆ ಪೂರಕವಾದ ವರದಿಗಳನ್ನು ಪದೇ ಪದೇ ಪ್ರಸಾರ ಮಾಡುತ್ತಿವೆ. ದೇಶದ್ರೋಹಿಗಳಿಗೆ ಹೆಚ್ಚು ಪ್ರಚಾರ ನೀಡುವ ಮೂಲಕ ಕೆಲ ದೃಶ್ಯ ಮಾಧ್ಯಮಗಳು ದೇಶದ್ರೋಹಿ ಚಟುವಟಿಕೆ ನಡೆಸುತ್ತಿ ವೆಯೇ ಎಂಬ ಭಾವನೆ ಹುಟ್ಟಿಸಿವೆ.

ಭಯೋತ್ಪಾದನೆ ಹಾಗೂ ರಾಷ್ಟ್ರ ವಿರೋಧಿ ಚಟುವಟಿಕೆಗಳನ್ನು ವೈಭವೀಕರಿಸುವ ಇಂತಹ ಮಾಧ್ಯಮಗಳ ಮೇಲೂ ದೇಶದ್ರೋಹದ ಆಪಾದನೆ ಮಾಡಿ, ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದರು.

ಜಾತ್ಯತೀತತೆಯ ಹೆಸರಿನಲ್ಲಿ ಕೆಲ ರಾಜಕಾರಣಿಗಳು ಸಹ ಭಯೋತ್ಪಾದನೆಯಂತಹ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿವೆ. ಜಾತ್ಯತೀತತೆ ಬಿಟ್ಟು ರಾಷ್ಟ್ರೀಯವಾದ ಅಳವಡಿಸಿಕೊಂಡಾಗ ಮಾತ್ರ ರಾಷ್ಟ್ರವಿರೋಧಿ ಚಟುವಟಿಕೆ ಗಳನ್ನು ಹತ್ತಿಕ್ಕಬಹುದು ಎಂದು ಅನಂತಕುಮಾರ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ವಕ್ತಾರ ನಾಗರಾಜ ಜೋಶಿ, ಕಾರ್ಯದರ್ಶಿ ಶ್ರೀಕಾಂತ ನಾಯ್ಕ, ಜಿಪಂ ಸದಸ್ಯೆ ಉಷಾ ಹೆಗಡೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X