‘ಕುಂದಾಪುರ ರೋಗಮುಕ್ತಗೊಳಿಸಲು ಪ್ರಯತ್ನ’

ಕುಂದಾಪುರ, ಫೆ.28: ಕೊಳಚೆ ನಿರ್ಮೂಲನೆ ಹಾಗೂ ಉತ್ತಮ ಒಳ ಚರಂಡಿ ವ್ಯವಸ್ಥೆಯಿಂದ ಕುಂದಾಪುರ ಪುರಸಭೆಯನ್ನು ರೋಗ ಮುಕ್ತ ನಗರವನ್ನಾಗಿ ಮಾಡಲು ರಾಜ್ಯ ಸರಕಾರ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ ಹೇಳಿದ್ದಾರೆ.
ಕುಂದಾಪುರ ಪುರಸಭೆ ಕಚೇರಿ ಆವರಣದಲ್ಲಿ ಪುರಸಭೆ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಬೆಂಗಳೂರು ವತಿಯಿಂದ ಪುರಸಭೆಯ ವ್ಯಾಪ್ತಿಯ ಒಳಚರಂಡಿ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡುತ್ತಿದ್ದರು.ುಂದಾಪುರ ಪುರಸಭೆಗೆ 48 ಕೋ.ರೂ. ವೆಚ್ಚದಲ್ಲಿ ಒಳಚರಂಡಿ ಯೋಜನೆಯನ್ನು ಕೈಗೆತ್ತಿಕೊಂಡಿದ್ದು, ಇನ್ನೆರಡು ವರ್ಷಗಳಲ್ಲಿ ಕಾಮಗಾರಿ ಸಂಪೂರ್ಣಗೊಳ್ಳಲಿದೆ. ಕೋಡಿ ಸಂಪರ್ಕ ಸೇತುವೆ ಪೂರ್ಣಗೊಂಡಿದ್ದು, ಆನಗಳ್ಳಿ ಸೇತುವೆ ನಿರ್ಮಾಣ 1 ವರ್ಷದೊಳಗೆ ಪೂರ್ಣಗೊಳ್ಳಲಿದೆ. ಇತರ ಕಾಮಗಾರಿಗಾಗಿ ಸರಕಾರದಿಂದ ಪುರಸಭೆಗೆ 20 ಕೋಟಿ ರೂ.ಗಳಿಗೂ ಹೆಚ್ಚು ಅನುದಾನ ಮಂಜೂರಾಗಿದೆ ಎಂದು ಸೊರಕೆ ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಚಂದ್ರ ಶೆಟ್ಟಿ, ಕುಂದಾಪುರ ಪ್ರಾಧಿಕಾರದ ಅಧ್ಯಕ್ಷ ಜಾಕೋಬ್ ಡಿಸೋಜ, ತಹಶೀಲ್ದಾರ್ ಗಾಯತ್ರಿ ನಾಯಕ್, ಉಪಾಧ್ಯಕ್ಷ ನಾಗರಾಜ್ ಕಾಮಧೇನು, ಸ್ಥಾಯಿ ಸಮಿತಿಯ ಅಧ್ಯಕ್ಷೆ ಗೀತಾ, ಕರ್ನಾಟಕ ಮೀನುಗಾರಿಕಾ ನಿಗಮದ ಅಧ್ಯಕ್ಷ ಬಿ.ಹಿರಿಯಣ್ಣ, ಒಳಚರಂಡಿ ಮಂಡಳಿ ಪ್ರಾಧಿಕಾರದ ಅಧಿಕಾರಿಗಳಾದ ಸುರೇಂದ್ರ, ನಟರಾಜ್ ಮುಂತಾದವರು ಉಪಸ್ಥಿತರಿದ್ದರು.





