ಕೊಣಾಜೆ: ನಾಳೆ ಮುಡಿಪುವಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಅಭಿನಂದನೆ
ಕೊಣಾಜೆ: ಕಳೆದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಕುರ್ನಾಡು ಜಿಲ್ಲಾ ಪಂಚಾಯಿತಿ ಕ್ಷೇತ್ರದ ಅಭ್ಯರ್ಥಿ ಮಮತಾ ಗಟ್ಟಿ, ಬಾಳೆಪುಣಿ ಮತ್ತು ನರಿಂಗಾನ ತಾಲೂಕು ಪಂಚಾಯಿತಿ ಕ್ಷೇತ್ರಗಳ ಅಭ್ಯರ್ಥಿಗಳು ಭರ್ಜರಿ ಮತಗಳ ಅಂತರದಿಂದ ಗೆಲ್ಲಿಸಿಕೊಟ್ಟ ಪಕ್ಷದ ಕಾರ್ಯಕರ್ತರು ಮತ್ತು ಮತದಾರರನ್ನು ಅಭಿನಂದಿಸುವ ಕಾರ್ಯಕ್ರಮ ಮಾ.1ರಂದು ಮುಡಿಪು ಆಡಿಟೋರಿಯಂನಲ್ಲಿ ಸಂಜೆ ನಾಲ್ಕು ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಹಾಸ್ ಕರ್ಕೇರಾ ಹೇಳಿದರು.
ಮುಡಿಪುವಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಆರೋಗ್ಯ ಸಚಿವ ಯು.ಟಿ.ಖಾದರ್, ಜಿಲ್ಲಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್ ಭಾಗವಹಿಸಲಿದ್ದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕರೆ ನೀಡಿದರು.
ಜಿ.ಪಂ. ಸದಸ್ಯೆ ಮಮತಾ ಗಟ್ಟಿ, ತಾ.ಪಂ.ಸದಸ್ಯ ಹೈದರ್ ಕೈರಂಗಳ, ಮುಖಂಡರಾದ ಜಲೀಲ್ ಮೋಂಟುಗೋಳಿ, ನಾಸಿರ್ ನಡುಪದವು, ಪದ್ಮನಾಭ ನರಿಂಗಾನ, ಉಮ್ಮರ್ ಪಜೀರು ಮೊದಲಾದವರು ಇದ್ದರು.







