ಕೆಎಂಡಿಸಿ ಅಧ್ಯಕ್ಷರಿಗೆ ಗೌರವ ಡಾಕ್ಟರೇಟ್ ಪ್ರದಾನ

ಬೆಂಗಳೂರು, ಮಾ.1: ಸಾಮಾಜಿಕ ವಲಯದಲ್ಲಿ ಅಲ್ಪಸಂಖ್ಯಾತರ ಪ್ರಗತಿಗೆ ಕೈಗೊಂಡಿರುವ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಸೂದ್ ಫೌಜ್ದಾರ್ ಅವರಿಗೆ ಇಂಡಿಯನ್ ವರ್ಚುವಲ್ ಯುನಿವರ್ಸಿಟಿ ವತಿಯಿಂದ ಬೆಂಗಳೂರಿನಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.
ಸಾಮಾಜಿಕ ಸೇವೆ ಹಾಗೂ ಮಾನವ ಹಕ್ಕುಗಳ ಸಂರಕ್ಷಣೆಯಲ್ಲಿ ಸಲ್ಲಿಸಿರುವ ಅಪರಿಮಿತ ಸೇವೆಗಾಗಿ ಸಮಾಜ ಸೇವಕ ಎ.ಜೆ.ಅಕ್ರಮ್ ಪಾಷ ಅವರಿಗೂ ಇದೇ ಸಂದರ್ಭದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಗೌರವಿಸಲಾಯಿತು.
Next Story





