ಮಾ.6ರಂದು ಬ್ಲೈಂಡ್ ಪಿಂಕ್‌ಥಾನ್
ಬೆಂಗಳೂರು, ಮಾ.1: ಐಡಿಎಲ್ ಸಂಸ್ಥೆಯು ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಮಾ.6ರಂದು ನಗರದ ಎನ್‌ಜಿಒ ಸಭಾಂಗಣದಲ್ಲಿ ‘ಬ್ಲೈಂಡ್ ಪಿಂಕ್‌ಥಾನ್’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಆಯೋಜಕ ಪಿ.ಕೆ.ಪೌಲ್ ತಿಳಿಸಿದ್ದಾರೆ.
ಸೋಮವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹಲವು ವರ್ಷಗಳಿಂದ ಐಡಿಎಲ್ ಸಂಸ್ಥೆಯು ಅಂಧ ವಿದ್ಯಾರ್ಥಿನಿಯರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ತಿಳಿಸಿದರು.
ಮಾ.6ರಂದು ನಡೆಯುವ ಕಾರ್ಯಕ್ರಮಕ್ಕೆ ರಾಜ್ಯದ 16 ಜಿಲ್ಲೆಗಳಿಂದ ಸುಮಾರು 500 ಕ್ಕೂ ಹೆಚ್ಚು ಅಂಧ ವಿಕಲಚೇತನರು ಭಾಗವಹಿಸುತ್ತಿದ್ದಾರೆ. ಈ ವೇಳೆ ಅಂಧ ವಿದ್ಯಾರ್ಥಿನಿಯರಿಗೆ 500ರೂ. ಸಹಾಯಧನ, ವ್ಯಾನಿಟಿ ಬ್ಯಾಗ್ ಸೇರಿದಂತೆ ದಿನಬಳಕೆ ವಸ್ತುಗಳನ್ನು ಉಚಿತವಾಗಿ ಕೊಡಲಾಗುವುದು ಎಂದು ತಿಳಿಸಿದರು.
Next Story





