ಅನಂತಕುಮಾರ್ ಹೆಗ್ಡೆಯವರು ಕರ್ನಾಟಕ ರಾಜ್ಯದ ಚುನಾವಣಾ ಫಲಿತಾಂಶದಿಂದ ಹತಾಶರಾಗಿ ಇಸ್ಲಾಮ್ ವಿರೋಧಿ ಹೇಳಿಕೆ
ಮಂಗಳೂರು,ಮಾ.1: ಉತ್ತರಕನ್ನಡ ಸಂಸದರಾದ ಅನಂತಕುಮಾರ್ ಹೆಗ್ಡೆಯವರು ಕರ್ನಾಟಕ ರಾಜ್ಯದ ಚುನಾವಣಾ ಫಲಿತಾಂಶದಿಂದ ಹತಾಶರಾಗಿ ಇಸ್ಲಾಮ್ ವಿರೋಧಿ ಹೇಳಿಕೆ ನೀಡಿದ್ದಾರೆ.
ಸಂಸದರ ಹೇಳಿಕೆಯು ಕೋಮು ಪ್ರಚೋದಿತ ಉದ್ದೇಶವಾಗಿದ್ದು, ಒಂದು ನಿರ್ದಿಷ್ಟ ಸಮುದಾಯವನ್ನು ಪ್ರಚೋದಿಸಲು ನಿಡಿದ ಹೇಳಿಕೆಯಾಗಿದೆ. ಈ ಬಗ್ಗೆ ದ.ಕ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಖಂಡಿಸುತ್ತದೆ. ಈ ಬಗ್ಗೆ ಒಕ್ಕೂಟ ಸಂಸದರ ವಿರುದ್ದ ಕ್ರಿಮಿನಲ್ ಮೊಕದ್ದಮೆ ಹೂಡಿದೆ. ಕರ್ನಾಟಕ ರಾಜ್ಯ ಸರಕಾರ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಒಕ್ಕೂಟ ಆಗ್ರಹಿಸಿದೆ ಎಂದು ದ.ಕ ಜಿಲ್ಲಾ ಮುಸ್ಲಿಂ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕೆ. ಅಶ್ರಫ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





