Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು : ಡಿ11ರಂದು ಮನಪಾ ಮೇಯರ್-...

ಮಂಗಳೂರು : ಡಿ11ರಂದು ಮನಪಾ ಮೇಯರ್- ಉಪಮೇಯರ್ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ2 March 2016 8:24 PM IST
share

ಮಂಗಳೂರು, ಮಾ.2: ಮಂಗಳೂರು ಮಹಾನಗರಪಾಲಿಕೆಯ 18ನೇ ಅವಧಿಯ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರ ಚುನಾವಣೆ ಮಾ. 11 ರಂದು ಬೆಳಿಗ್ಗೆ 11.30ಕ್ಕೆ ಮಂಗಳೂರು ಮಹಾನಗರಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಮೇಯರ್ ಸ್ಥಾನ ಸಾಮಾನ್ಯ ವರ್ಗ- ಉಪ ಮೇಯರ್ ಪ.ಪಂ. ಮಹಿಳೆ

ಪ್ರಸಕ್ತ ಸಾಲಿನ ಮೇಯರ್ ಗಾದಿಯು ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದರೆ, ಉಪ ಮೇಯರ್ ಸ್ಥಾನವು ಪರಿಶಿಷ್ಟ ಪಂಗಡದ ಮಹಿಳೆಗೆ ಮೀಸಲಾಗಿದೆ.

60 ಸದಸ್ಯರಿರುವ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ 35, ಬಿಜೆಪಿ 20, ಜೆಡಿಎಸ್ 2, ಸಿಪಿಎಂ, ಎಸ್‌ಡಿಪಿಐ ಹಾಗೂ ಪಕ್ಷೇತರ ತಲಾ ಒಬ್ಬರು ಸದಸ್ಯರನ್ನು ಹೊಂದಿದೆ.

ಪ್ರಸಕ್ತ ಅವಧಿಯಲ್ಲಿ ಮೇಯರ್ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪ ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಕಾರಣ ಮೇಯರ್ ಆಗಿ ಕಾಂಗ್ರೆಸ್‌ನ ಜೆಸಿಂತಾ ವಿಜಯಾ ಆಲ್ಪ್ರೆಡ್ ಹಾಗೂ ಉಪ ಮೇಯರ್ ಆಗಿ ಪುರುಷೋತ್ತಮ ಚಿತ್ರಾಪುರ ಆಯ್ಕೆಯಾಗಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಅವಧಿಯು ಮಾ. 11ರಂದು ಕೊನೆಗೊಳ್ಳಲಿದೆ.

ಮುಂದಿನ ಮೇಯರ್ ಗಾದಿಯು ಸಾಮಾನ್ಯ ವರ್ಗಕ್ಕೆ ಮೀಸಲಾಗಿರುವುದರಿಂದ ಅಧಿಕ ಸಂಖ್ಯೆಯನ್ನು ಹೊಂದಿರುವ ಕಾಂಗ್ರೆಸ್‌ನ 35 ಸದಸ್ಯರು ಕೂಡಾ ಮೇಯರ್ ಸ್ಥಾನಕ್ಕೆ ಅರ್ಹತೆಯನ್ನು ಪಡೆದಿದ್ದಾರೆ. ಆದರೆ ಉಪಮೇಯರ್ ಸ್ಥಾನ ಪರಿಶಿಷ್ಟ ಪಂಗಡ ಮಹಿಳಾ ವರ್ಗಕ್ಕೆ ಮೀಸಲಾಗಿರುವುದರಿಂದ ಕಾಂಗ್ರೆಸ್ ಪಕ್ಷದಲ್ಲಿ ಈ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಯಾರೂ ಇಲ್ಲ. ಹಾಗಾಗಿ ಈ ಬಾರಿ ಉಪಮೇಯರ್ ಸ್ಥಾನ ಬಿಜೆಪಿಗೆ ಅನಾಯಾಸವಾಗಿ ದೊರೆಯುವುದು ಖಾತ್ರಿಯಾಗಿದೆ. ಬಿಜೆಪಿ ಸದಸ್ಯೆ ಸುಮಿತ್ರಾ ಕರಿಯ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದಾರೆ.

ಮೇಯರ್ ಸ್ಥಾನಕ್ಕೆ ತೀವ್ರ ಸ್ಪರ್ಧೆ!

ಪ್ರಸಕ್ತ ಸಾಲಿನ ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿರುವುದರಿಂದ ಕಾಂಗ್ರೆಸ್ ಸದಸ್ಯರೊಳಗೆ ತೀವ್ರ ಸ್ಪರ್ಧೆ ಏರ್ಪಟ್ಟಿದೆ. ಪಾಲಿಎಯ ಹಿರಿಯ ಸದಸ್ಯರಾಗಿರುವ ಹರಿನಾಥ್, ಯುವ ಸದಸ್ಯರಾದ ನವೀನ್ ಡಿಸೋಜಾ, ದೀಪಕ್ ಪೂಜಾರಿ, ಭಾಸ್ಕರ್ ಮೊಯ್ಲಿ, ಅಬ್ದುಲ್ ರವೂಫ್ ಹೆಸರು ಸದ್ಯ ಮುಂಚೂಣಿಯಲ್ಲಿದ್ದು, ಪಕ್ಷ ಯಾರ ಹೆಸರನ್ನು ಅಂತಿಮಗೊಳಿಸಲಿದೆ ಎಂಬ ಕುತೂಹಲ ಏರ್ಪಟ್ಟಿದೆ.

ಅಂದು ಅದೃಷ್ಟದಿಂದ ಕಾಂಗ್ರೆಸ್‌ಗೆ ಮೇಯರ್ ಸ್ಥಾನ- ಇಂದು ಬಿಜೆಪಿಗೆ ಉಪ ಮೇಯರ್ ಸ್ಥಾನ!

2012-13ನೆ ಅವಧಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಪ್ರಾಬಲ್ಯವಾಗಿದ್ದರೂ ಚುನಾವಣೆಯ ವೇಳೆ ಬಿಜೆಪಿ ಅಭ್ಯರ್ಥಿಯ ನಾಮಪತ್ರದಲ್ಲಿ ಆದ ಕಣ್ತಪ್ಪಿನಿಂದಾಗಿ ಮೇಯರ್ ಸ್ಥಾನ ಕಾಂಗ್ರೆಸ್‌ಗೆ ಒಲಿದಿತ್ತು. ಇದೀಗ ಮೀಸಲಾತಿಯಂತೆ ಕಾಂಗ್ರೆಸ್‌ನಲ್ಲಿ ಅರ್ಹ ಅಭ್ಯರ್ಥಿಯ ಕೊರತೆಯಿಂದಾಗಿ ಉಪ ಮೇಯರ್ ಸ್ಥಾನ ಅನಾಯಾಸವಾಗಿ ಬಿಜೆಪಿಗೆ ಸಿಗಲಿದೆ. ಒಟ್ಟಿನಲ್ಲಿ ಈ ಬಾರಿಯ ಮೇಯರ್- ಉಪ ಮೇಯರ್ ಚುನಾವಣೆ ಕುತೂಹಲವನ್ನು ಸೃಷ್ಟಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X