ಪ್ರತ್ಯೇಕ ಆತ್ಮಹತ್ಯೆ ಪ್ರಕರಣ
ಶಿರ್ವ, ಮಾ.2: ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದ ಮಹಾಬಲ ದೇವಾಡಿಗ(65) ಎಂಬವರು ಮಾ.1ರಂದು ಸಂಜೆ ವೇಳೆ ಕುತ್ಯಾರು ಕುಂಬುಡ ಮಜಲು ಎಂಬಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಕಳ: ವೈಯಕ್ತಿಕ ಕಾರಣದಿಂದ ಮನನೊಂದ ಅಪರಿಚಿತ ವ್ಯಕ್ತಿಯೊಬ್ಬರು ನಾಲ್ಕು ದಿನಗಳ ಹಿಂದೆ ಸಾಣೂರು ಗ್ರಾಮದ ದೂಪದಕಟ್ಟೆ ಎಂಬಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರು ವುದು ಮಾ.1ರಂದು ಬೆಳಕಿಗೆ ಬಂದಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ: ಅನಾರೋಗ್ಯದಿಂದ ಬಳಲುತ್ತಿದ್ದ ಬಾರಕೂರು ನಾಗರಮಠದ ರಾಮ ಪೂಜಾರಿ(75) ಎಂಬವರು ಮಾ.1 ರಂದು ಹೊಸಾಳ ಗ್ರಾಮದ ಸೀತಾನದಿ ಕವಲು ಹೊಳೆಯ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





