Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉರುಂಬಿಯಲ್ಲಿ ಕಿರು ಜಲವಿದ್ಯುತ್ ಯೋಜನೆ...

ಉರುಂಬಿಯಲ್ಲಿ ಕಿರು ಜಲವಿದ್ಯುತ್ ಯೋಜನೆ ಕಾಮಗಾರಿ ಆರಂಭ: ಹೋರಾಟಕ್ಕೆ ಅಣಿಯಾದ ಅಣೆಕಟ್ಟು ವಿರೋಧಿ ಹೋರಾಟ ಸಮಿತಿ

ವಾರ್ತಾಭಾರತಿವಾರ್ತಾಭಾರತಿ2 March 2016 11:36 PM IST
share

ಕಡಬ, ಮಾ.2: ಪುತ್ತೂರು ತಾಲೂಕಿನ ಪೆರಾಬೆ ಗ್ರಾಮದ ಉರುಂಬಿ ಎಂಬಲ್ಲಿ ಅನಧಿಕೃತವಾಗಿ ಕುಮಾರಧಾರಾ ನದಿಗೆ ಅಣೆಕಟ್ಟು ನಿರ್ಮಿಸಿ ಕಿರುಜಲವಿದ್ಯುತ್ ಯೋಜನೆಯ ಕಾಮಗಾರಿ ಕೈಗೆತ್ತಿಕೊಂಡಿರುವ ಕುಕ್ಕೆ ಹೈಡಲ್ ಪವರ್ ಪ್ರಾಜೆಕ್ಟ್ ಕಂಪೆನಿ ಯವರು ಕಾನೂನು ಉಲ್ಲಂಘಿಸುತ್ತಿದ್ದಾರೆ.

ಈ ಬಗ್ಗೆ ಕಾನೂನು ಹೋರಾಟಕ್ಕೆ ಸಿದ್ಧತೆ ನಡೆಸಲಾಗಿದೆ ಎಂದು ಕುಮಾರಧಾರಾ ಅಣೆಕಟ್ಟು ವಿರೋಧಿ ಹೋರಾಟ ಸಮಿತಿಯು ಎಚ್ಚರಿಸಿದೆ.

 ಕಡಬದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಹೋರಾಟ ಸಮಿತಿ ಅಧ್ಯಕ್ಷ ಕರುಣಾಕರ ಗೋಗಟೆ, ಇತ್ತೀಚೆಗೆ ಜಿಪಂ, ತಾ.ಪಂ ಚುನಾವಣೆ ಸಂದರ್ಭ ನೀತಿಸಂಹಿತೆ ಲಾಭವನ್ನು ಗಿಟ್ಟಿಸಿಕೊಂಡು, ಸ್ಥಳೀಯ ಅಧಿಕಾರಿಗಳಿಗೆ 2012-13ನೆ ಸಾಲಿನಲ್ಲಿ ಕೆಲವು ಇಲಾಖೆಗಳಲ್ಲಿ ಸಿಕ್ಕಿರುವ ಅನುಮತಿ ಪತ್ರವನ್ನು ತೋರಿಸಿ ಅದನ್ನೇ ಅಧಿಕೃತ ಅನುಮತಿ ಎಂದು ನಂಬಿಸಿ ಯೋಜನಾ ಉದ್ದೇಶಿತ ಸ್ಥಳವಾದ ಉರುಂಬಿ ಯಲ್ಲಿ ಕಾಮಗಾರಿ ಆರಂಭಿಸಿದ್ದರು ಎಂದು ಆರೋಪಿಸಿದರು.

ಈ ಬಗ್ಗೆ ಹೋರಾಟ ಸಮಿತಿ ಜಿಲ್ಲಾಧಿಕಾರಿಯವರಿಗೆ ದೂರು ಸಲ್ಲಿಸಿದಾಗ ಕಂಪೆನಿಯವರಿಗೆ ಯಾವುದೇ ಅನುಮತಿ ದೊರೆತಿಲ್ಲ ಎಂದು ಹೇಳಿ, ಎ.ಸಿ ಹಾಗೂ ಕಡಬ ವಿಶೇಷ ತಹಶೀಲ್ದಾರರಿಗೆ ಸೂಚಿಸಿ ಕಾಮಗಾರಿಗೆ ತಡೆ ನೀಡಿದ್ದಾರೆ.
ಈ ನಡುವೆ ಹೋರಾಟ ಸಮಿತಿ ನಿಯೋಗ ಬೆಂಗಳೂರಿನ ಇಂಧನ ಇಲಾಖೆ, ಕ್ರೆಡಲ್ ಮತ್ತು ಅರಣ್ಯ ಇಲಾಖೆಗೆ ತೆರಳಿ ವಿಚಾರಿಸಿದಾಗಲೂ ಯಾವುದೇ ರೀತಿಯ ಅನುಮತಿ ನೀಡದಿ ರುವುದರ ಬಗ್ಗೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಕ್ರೆಡೆಲ್ ಅಧಿಕಾರಗಳ ತಂಡವೊಂದು ಮುಂದಿನ 15 ದಿನದೊಳಗೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವುದಾಗಿ ಭರವಸೆ ನೀಡಿದೆ ಎಂದರು.


ಯೋಜನೆ ಅನುಷ್ಠಾನವಾಗಲು ಸುಮಾರು 39 ಇಲಾಖೆಗಳ ಹಾಗೂ ಸ್ಥಳೀಯಾಡಳಿತದ ಅನುಮತಿ ಬೇಕು. ಈ ಪೈಕಿ ಕೆಲವೊಂದು ಇಲಾಖೆಗಳ ಅನುಮತಿ ಪಡೆದು ಈ ಹಿಂದೆ ಕೆಲಸ ಪ್ರಾರಂಭಿಸಿತ್ತು. ಆ ಸಂದರ್ಭ ಸ್ಥಳದಲ್ಲಿ ಹೋರಾಟ ಸಮಿತಿ ಪ್ರತಿಭಟನೆ ಹಮ್ಮಿಕೊಂಡಿದ್ದರಿಂದ ಜಿಲ್ಲಾಧಿಕಾರಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಕಾಮಗಾರಿ ಸ್ಥಗಿತಗೊಳಿಸಿದ್ದರು. ಕಂಪೆನಿಗೆ ನೀಡುವ ಅನುಮತಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳುವುದಿದ್ದರೆ ಹೋರಾಟ ಸಮಿತಿಯವರಿಗೆ ಮುಂಚಿತವಾಗಿ ತಿಳಿಸಿಯೇ ಮುಂದುವರಿಯುತ್ತೇವೆ ಎಂದು ಭರವಸೆ ನೀಡಿದ್ದರು. ಕಾಮಗಾರಿಗೆ ಅಂದು ನೀಡಿದ್ದ ತಡೆಯಾಜ್ಞೆ ಊರ್ಜಿತ ದಲ್ಲಿದೆ. ಆದರೂ ಕೆಲವು ದಿನಗಳ ಹಿಂದೆ ಹಿಟಾಚಿ ಯಂತ್ರದ ಮೂಲಕ ನದಿ ಪಾತ್ರದಲ್ಲಿ ಸಮತಟ್ಟು ಕಾರ್ಯವನ್ನು ಕಂಪೆನಿಯವರು ಮಾಡುತ್ತಿದ್ದಾರೆ. ಅನಧಿಕೃತ ಕಾಮಗಾರಿಯನ್ನು ತಕ್ಷಣ ನಿಲ್ಲಿಸಬೇಕು. ಇಲ್ಲದಿದಲ್ಲಿ ಮುಂದಿನ ದಿನಗಳಲ್ಲಿ ಕಾನೂನು ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಹೋರಾಟ ಸಮಿತಿ ಕಾರ್ಯದರ್ಶಿ ಕಿರಣ್ ಗೋಗಟೆ, ಕೋಶಾಧಿಕಾರಿ ರಘುನಾಥ ಹೆಬ್ಬಾರ್, ಉಪಾಧ್ಯಕ್ಷ ಗೋಪಾಲಕೃಷ್ಣ ಗೌಡ ದೋಳ್ಪಾಡಿ, ಜೊತೆ ಕಾರ್ಯದರ್ಶಿ ಎಲ್ಸಿ ತೋಮಸ್, ಸದಸ್ಯ ಜಯರಾಮ ಆರ್ತಿಲ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X