ಅನಂತ್ ಕುಮಾರ್ ಹೆಗಡೆ ಹೇಳಿಕೆಗೆ ಮುಸ್ಲಿಂ ಒಕ್ಕೂಟ ಖಂಡನೆ
ಉಡುಪಿ, ಮಾ.3: ಉತ್ತರ ಕನ್ನಡ ಜಿಲ್ಲೆಯ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಇತ್ತೀಚೆಗೆ ಇಸ್ಲಾಮ್ ಹಾಗೂ ಮುಸ್ಲಿಮರ ವಿರುದ್ಧ ನೀಡಿರುವ ಹೇಳಿಕೆ ಭಾರತದ ಸಂವಿಧಾನದ ಅಖಂಡತೆ ಹಾಗೂ ಜಾತ್ಯತೀತ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಆರೋಪಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಅಶ್ಫಾಕ್ ಅಹ್ಮದ್, ಆರೆಸ್ಸೆಸ್ ಹಾಗೂ ಸಂಘ ಪರಿವಾರದಲ್ಲಿ ಪಳಗಿರುವ ಅನಂತ್ ಕುಮಾರ್ ಹೆಗಡೆ ಹಿಟ್ಲರ್‌ನ್ನು ಮೀರಿಸುವ ಕೋಮು ದ್ವೇಷವನ್ನು ಹೊಂದಿದ್ದು, ಇದು ಅತ್ಯಂತ ಅಪಾಯಕಾರಿ ಪ್ರವೃತ್ತಿಯಾಗಿದೆ. ಆದುದರಿಂದ ಸರಕಾರ ಅವರ ವಿರುದ್ಧ ಸ್ವಯಂಪ್ರೇರಿತವಾಗಿ ಕೇಸು ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಮುಸ್ಲಿಂ ಒಕ್ಕೂಟ ಆಗ್ರಹಿಸುತ್ತದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಖಾಸಿಂ ಬಾರಕೂರು, ಕಾರ್ಯದರ್ಶಿ ಸಲಾಹುದ್ದೀನ್, ಮಾಜಿ ಅಧ್ಯಕ್ಷ ಎಂ.ಪಿ.ಮೊಯ್ದಿನಬ್ಬ, ನಝೀರ್ ಅಹ್ಮದ್ ಉಪಸ್ಥಿತರಿದ್ದರು.
Next Story





