ಶ್ವೇತಪತ್ರ ಹೊರಡಿಸಲಿ: ಪುಟ್ಟಣ್ಣಯ್ಯ
ಬೆಂಗಳೂರು, ಮಾ.4: ಬಯಲುಸೀಮೆ ಪ್ರದೇಶಕ್ಕೆ ಎಷ್ಟು ನೀರು ಒದಗಿಸಲಾಗುತ್ತದೆ ಹಾಗೂ ಯಾವಾಗ ಎಂಬುದರ ಬಗ್ಗೆ ರಾಜ್ಯ ಸರಕಾರ ಶ್ವೇತಪತ್ರ ಹೊರಡಿಸಬೇಕು ಎಂದು ಕೆ.ಎಸ್.ಪುಟ್ಟಣ್ಣಯ್ಯ ಒತ್ತಾಯಿಸಿದ್ದಾರೆ.
ಶುಕ್ರವಾರ ಶಾಸಕರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಬಯಲು ಸೀಮೆಯ ಪ್ರದೇಶಕ್ಕೆ ಶಾಶ್ವತ ನೀರಾ ವರಿ ಯೋಜನೆಯನ್ನು ಕಲ್ಪಿಸುವಂತೆ ಆಗ್ರಹಿಸಿ ಹಲವಾರು ವರ್ಷ ಗಳಿಂದ ಹೋರಾಟ ಮಾಡುತ್ತಾ ಬರಲಾಗುತ್ತಿದೆ. ಆದರೆ, ಸರಕಾರ ಮಾತ್ರ ಕೇವಲ ಭರವಸೆ ನೀಡುತ್ತಾ ಬರುತ್ತಿದೆ. ಹೀಗಾಗಿ ಸರಕಾರದ ಭರವಸೆಗೆ ಅಂತಿಮ ದಿನಾಂಕವನ್ನು ಗೊತ್ತು ಮಾಡುವ ನಿಟ್ಟಿನಲ್ಲಿ ಶ್ವೇತಪತ್ರ ಹೊರಡಿಸಬೇಕು ಎಂದರು.
ನೀರಿಗಾಗಿ ಆಗ್ರಹಿಸಿ ಹೋರಾಟ ನಡೆಸಿದ ರೈತರ ಮೇಲೆ ಪೊಲೀಸರು ಲಾಠಿ ಬೀಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ. ಸರಕಾರ ಚಳವಳಿಯನ್ನು ನಿರ್ಲಕ್ಷ್ಯ ಮಾಡಿದ್ದರಿಂದ ಸಮಸ್ಯೆ ಉದ್ಭವವಾಯಿತು. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರಿರಲ್ಲಿ ಕ್ಷಮೆಯಾಚಿಸಿ, ಶೀಘ್ರವಾಗಿ ಯೋಜನೆಯನ್ನು ಅನು ಷ್ಠಾನಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಅವರು ಆಗ್ರಹಿಸಿದರು.
ಕಬ್ಬು ಬೆಳೆಗಾರರಿಗೆ ಬಾಕಿ ಇರಿಸಿಕೊಂಡಿರುವ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು. ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಬೇಕು ಎಂದು ಹೇಳಿದ ಅವರು, ರೈತರ ಸಮಸ್ಯೆಯನ್ನು ಪ್ರಧಾನಿಯವರ ಗಮನಕ್ಕೆ ತರಲು ಇದೇ 17ರಂದು ದಿಲ್ಲಿಯಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ರಾಜ್ಯದಿಂದಲೂ 2ರಿಂದ 3 ಸಾವಿರ ರೈತರು ದಿಲ್ಲಿಗೆ ಹೋಗಲಿದ್ದಾರೆ ಎಂದರು.
ರೈತ ಸಂಘದ ಅಧ್ಯಕ್ಷ ಚಾಮರಸ ಮಾಲಿ ಪಾಟೀಲ್ ಮಾತ ನಾಡಿ,ಪರಮಶಿವಯ್ಯ ವರದಿ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಮಾ.6ರಂದು ಕರೆದಿರುವ ಸಭೆಯಲ್ಲಿ ರೈತರಿಗೆ ಅನುಕೂಲಕರ ವಾದ ನಿರ್ಧಾರ ತೆಗೆದುಕೊಳ್ಳಬೇಕು ಎಂದರು. ಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಬಡಗಲಪುರ ನಾಗೇಂದ್ರ, ಪಿ. ಗೋಪಾಲ್, ರಾಮಸ್ವಾಮಿ, ವೀರಸಂಗಯ್ಯ ಉಪಸ್ಥಿತರಿದ್ದರು.