Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಳ್ಯದಲ್ಲಿ ಬಿಜೆಪಿಯಿಂದ ವಿಜಯೋತ್ಸವ -...

ಸುಳ್ಯದಲ್ಲಿ ಬಿಜೆಪಿಯಿಂದ ವಿಜಯೋತ್ಸವ - ಕಾರ್ಯಕರ್ತರಿಗೆ ಅಭಿನಂದನೆ

ಮರ, ಮರಳು ಮಾಫಿಯಾದಲ್ಲಿ ನಿರತರಾದ ನಾಲ್ವರು ಸಚಿವರು: ಸಂಸದ ಕಟೀಲ್ ಆರೋಪ

ವಾರ್ತಾಭಾರತಿವಾರ್ತಾಭಾರತಿ5 March 2016 7:29 PM IST
share
ಸುಳ್ಯದಲ್ಲಿ ಬಿಜೆಪಿಯಿಂದ ವಿಜಯೋತ್ಸವ - ಕಾರ್ಯಕರ್ತರಿಗೆ ಅಭಿನಂದನೆ

ಸುಳ್ಯ: ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ವಿಜೇತರಿಗೆ ಅಭಿನಂದನೆ, ಮತದಾರರು ಮತ್ತು ಕಾರ್ಯಕರ್ತರಿಗೆ ಕೃತಜ್ಞತೆ ಸಮಾರಂಭವು ಸುಳ್ಯ ಬಿಜೆಪಿ ಮಂಡಲ ಸಮಿತಿ ವತಿಯಿಂದ ನಡೆಯಿತು.

 ಶಾಸ್ತ್ರಿ ಸರ್ಕಲ್‌ನಿಂದ ಮೆರವಣಿಗೆ ಆರಂಭಗೊಂಡು ಮುಖ್ಯ ರಸ್ತೆಯಲ್ಲಿ ಸಂಚರಿಸಿ ಬಸ್ ನಿಲ್ದಾಣದ ಬಳಿ ಸಮಾವೇಶಗೊಂಡಿತು.

ಸಂಸದರ ಆರೋಪ:

ಸಮಾರೋಪದಲ್ಲಿ ಪಾಲ್ಗೊಂಡ ಸಂಸದ ನಳಿನ್‌ಕುಮಾರ್ ಕಟೀಲ್ ಮಾತನಾಡಿ, ಕೇಂದ್ರದಲ್ಲಿ ನರೇಂದ್ರ ಮೋದಿ ಮತ್ತು ರಾಜ್ಯದಲ್ಲಿ ಸಿದ್ದರಾಮಯ್ಯ ಸರಕಾರ ನೋಡಿ ಮತದಾರರು ಮೌಲ್ಯಮಾಪನ ಮಡಿದ್ದಾರೆ. ರಾಜ್ಯದಲ್ಲಿ ಸಿದ್ಧರಾಮಯ್ಯ ಮಾತ್ರ ಮಲಗಿರೋದಲ್ಲ. ಅವರ ಮಂತ್ರಿ ಮಂಡಲವೇ ಮಲಗಿದೆ. ಪರಿಣಾಮ ರಾಜ್ಯವೇ ಮಲಗಿದಂತಾಗಿದೆ. ಇಂತಹ ಸ್ಥಿತಿಯಲ್ಲಿ ಎಚ್ಚರಿಸುವ ಕೆಲಸವನ್ನು ಬಿಜೆಪಿ ಮಾಡಿದೆ ಎಂದರು. ದಕ್ಷಿಣ ಕನ್ನಡದ ನಾಲ್ಕು ಸಚಿವರು ಕೂಡಾ ಮಲಗಿದ್ದಾರೆ. ಅವರಿಗೆ ಜಿಲ್ಲೆಯ ಅಭಿವೃದ್ಧಿ ಬೇಕಿಲ್ಲ. ಅವರೆಲ್ಲ ಮರ ಮತ್ತು ಮರಳು ಮಾಫಿಯಾದಲ್ಲಿ ಮುಳುಗಿದ್ದಾರೆರೆ. ಇವರು ಇನ್ನಷ್ಟು ದಿನ ಇದ್ದರೆ ನೇತ್ರಾವತಿಯಲ್ಲಿ ಮರಳೂ ಉಳಿಯದು, ಸಂಪಾಜೆ ಕಾಡಿನಲ್ಲಿ ಮರವೂ ಉಳಿಯದು ಎಂದು ಕಟೀಲ್ ಹೇಳಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಪ್ರತಾಪಸಿಂಹ ನಾಯ್ ಮಾತನಾಡಿ, ಬಿಜೆಪಿಗೆ ಇಷ್ಟು ದೊಡ್ಡ ಮಟ್ಟದಲ್ಲಿ ಗೆಲುವು ದೊರಕಿಸಿಕೊಟ್ಟ ಮತದಾರರ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ಪ್ರತಿನಿಧಿಗಳು ಕಾರ್ಯನಿರ್ವಹಿಸಬೇಕು ಎಂದರು.

 ಸುಳ್ಯ ಶಾಸಕ ಅಂಗಾರ ಮಾತನಾಡಿ, 1994 ರ ನಂತರ ಈ ಕ್ಷೇತ್ರದಲ್ಲಿ ಬಿಜೆಪಿ ನಿರಂತರವಾಗಿ ಗೆದ್ದು ಬರುತ್ತಿದೆ. ಆದರೂ ನಾವು ದುರಹಂಕಾರ ಪ್ರದರ್ಶಿಸಿಲ್ಲ. ನನ್ನ ಬಗ್ಗೆ ಕಾಂಗ್ರೆಸಿಗರು ಎಷ್ಟೇ ಟೀಕೆ ಮಾಡಿದರೂ ನಾನು ಉತ್ತರಿಸಲು ಹೋಗಿಲ್ಲ. ಆದರೆ ಮತದಾರರು ಸರಿಯಾದ ಉತ್ತರ ನೀಡಿದ್ದಾರೆ ಎಂದರು.

  ಜಿಲ್ಲಾ ಪಂಚಾಯತ್ ಸದಸ್ಯರಾದ ಎಸ್.ಎನ್.ಮನ್ಮಥ, ಹರೀಶ್ ಕಂಜಿಪಿಲಿ, ಪುಷ್ಪಾವತಿ ಬಾಳಿಲ, ಆಶಾ ತಿಮ್ಮಪ್ಪ, ಪ್ರಮೀಳಾ ಜನಾರ್ದನ, ತಾಲೂಕು ಪಂಚಾಯತ್ ಸದಸ್ಯರಾದ ರಾಧಾಕೃಷ್ಣ ಬೊಳ್ಳೂರು, ಉದಯ ಕೊಪ್ಪಡ್ಕ , ಪುಷ್ಪಾ ಮೇದಪ್ಪ, ಚನಿಯ ಕಲ್ತಡ್ಕ, ಜಾಹ್ನವಿ ಕಾಂಚೊಡು, ಪದ್ಮಾವತಿ, ಯಶೋದಾ ಬಾಳೆಗುಡ್ಡೆ, ಕುಸುಮಾ, ಶುಭದಾ ರೈ, ವಿದ್ಯಾಲಕ್ಷ್ಮಿ ಎರ್ಮೆಟ್ಟಿ ಯವರನ್ನು ಅಭಿನಂದಿಸಲಾಯಿತು. ಹಿರಿಯ ಬಿಜೆಪಿ ನಾಯಕ ಡಾ.ರಾಮಯ್ಯ ಭಟ್, ಭಾಗೀರಥಿ ಮುರುಳ್ಯ, ನ.ಪಂ.ಅಧ್ಯಕ್ಷ ಪ್ರಕಾಶ್ ಹೆಗ್ಡೆ ವೇದಿಕೆಯಲ್ಲಿದ್ದರು. ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಸ್ವಾಗತಿಸಿ ಜಿಲ್ಲಾ ಉಪಾಧ್ಯಕ್ಷ ಎ.ವಿ. ತೀರ್ಥರಾಮ ಪ್ರಸ್ತಾವನೆಗೈದರು. ನಗರ ಬಜೆಪಿ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ವಂದಿಸಿದರು. ವೆಂಕಟ್ ದಂಬೆಕೋಡಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X