Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋಮುವಾದ ಬಿತ್ತುವ ಅನಧಿಕೃತ ಸೇನೆಗಳನ್ನು...

ಕೋಮುವಾದ ಬಿತ್ತುವ ಅನಧಿಕೃತ ಸೇನೆಗಳನ್ನು ಮಟ್ಟಹಾಕಿ: ಪ್ರೊ.ಮರುಳಸಿದ್ದಪ್ಪ ಆಗ್ರಹ

‘ಕ್ಯಾಂಪಸ್ ಡೆಮಾಕ್ರಸಿ ಉಳಿಸಿ, ಭಾರತ ರಕ್ಷಿಸಿ’ ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ5 March 2016 10:40 PM IST
share

ಬೆಂಗಳೂರು, ಮಾ.5: ದೇಶ ರಕ್ಷಣೆ ಹೆಸರಿನಲ್ಲಿ ಕೋಮುವಾದವನ್ನು ಬಿತ್ತುತ್ತಿರುವ ಅನಧಿಕೃತ ಸೇನೆಗಳನ್ನು ಮಟ್ಟ ಹಾಕಲು ವಿದ್ಯಾರ್ಥಿಗಳು ಸನ್ನದ್ಧರಾಗಬೇಕು ಎಂದು ಹಿರಿಯ ಸಾಹಿತಿ ಡಾ.ಕೆ.ಮರುಳಸಿದ್ದಪ್ಪ ಕರೆ ನೀಡಿದ್ದಾರೆ.
ಶನಿವಾರ ನಗರದ ಸೆಂಟ್ರಲ್ ಕಾಲೇಜಿನಲ್ಲಿ ಭಾರತೀಯ ವಿದ್ಯಾರ್ಥಿ ಸಂಘಟನೆ ಆಯೋಜಿಸಿದ್ದ ‘ಕ್ಯಾಂಪಸ್ ಡೆಮಾಕ್ರಸಿ ಉಳಿಸಿ, ಭಾರತ ರಕ್ಷಿಸಿ’ ಎಂಬ ವಿಷಯದ ರಾಜ್ಯಮಟ್ಟದ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ದೇಶ ರಕ್ಷಣೆ ಹೆಸರಿನಲ್ಲಿ ಅನಧಿಕೃತ ಸೇನೆಗಳು ದೇಶದಲ್ಲಿ ಕೋಮುವಾದವನ್ನು ಬಿತ್ತುತ್ತಿವೆ. ರಾಜಕೀಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ತಮ್ಮ ಕುತಂತ್ರ, ಒಳ ಸಂಚು ಅಪ ಪ್ರಚಾರದ ಮೂಲಕ ಅವುಗಳ ಸಿದ್ಧಾಂತಗಳನ್ನು ಬೆಳೆಸುತ್ತಿವೆ. ಸದ್ಯ ಈ ಫ್ಯಾಶಿಸ್ಟ್ ತಂತ್ರಗಳನ್ನು ಶೈಕ್ಷಣಿಕ ಕ್ಷೇತ್ರದಲ್ಲಿ ಪ್ರಯೋಗ ಮಾಡಲು ಸಿದ್ಧತೆ ನಡೆಸಿವೆ ಎಂದು ಹೇಳಿದರು.
ಅನಧಿಕೃತ ಸೇನೆ, ಗೂಂಡಾ ಪಡೆಗಳಾದ ಶಿವಸೇನೆ, ಬಜರಂಗದಳ, ವಿಶ್ವ ಹಿಂದೂ ಪರಿಷತ್ ಸಂಘಟನೆಗಳ ಕಣ್ಣು ವಿಶ್ವವಿದ್ಯಾಲಯಗಳ ಮೇಲೆ ಬಿದ್ದಿದೆ. ದೇಶದಲ್ಲಿ ಸ್ವಾತಂತ್ರವನ್ನು ಹತ್ತಿಕ್ಕುವಂತಹ ಪ್ರಯತ್ನ ವಿಶ್ವವಿದ್ಯಾಲಯಗಳಿಂದ ಮೊದಲಾಗಿಸಲು ಸಂಚು ರೂಪಿಸಿವೆ ಎಂದು ಆರೋಪಿಸಿದರು.
ಯುವ ಜನತೆಯನ್ನು ತೇಜೋವಧೆಯ ಮೂಲಕ ಇಬ್ಭಾಗ ಮಾಡಿ ತಮ್ಮ ಬೇಳೆಯನ್ನು ಬೇಯಿಸಿಕೊಳ್ಳಲು ಮುಂದಾಗಿವೆ. ಈಗಾಗಲೇ ಹೈದರಾಬಾದಿನ ರೋಹಿತ್‌ರನ್ನು ಬಲಿ ತೆಗೆದುಕೊಂಡಿದ್ದಾಗಿದೆ. ಅಲ್ಲದೆ ದೇಶದ ವಿವಿಗಳಲ್ಲಿ ಪ್ರಗತಿಪರ ಹೋರಾಟ ಮಾಡುವ ವಿದ್ಯಾರ್ಥಿಗಳನ್ನು ದಮನ ಮಾಡಲು ಸಿದ್ಧತೆ ನಡೆಸಿವೆ ಎಂದು ಕಿಡಿ ಕಾರಿದರು.
ಯಾವ ದೇಶದಲ್ಲಿ ಭಿನ್ನಾಭಿಪ್ರಾಯಗಳನ್ನು ವ್ಯಕ್ತಪಡಿಸಲು ಅವಕಾಶವಿರುವುದಿಲ್ಲವೋ ಆ ದೇಶ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ. ದೇಶಕ್ಕೆ ಉತ್ತಮ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಈ ಸಂಘ ಪರಿವಾರಗಳ ವಿರುದ್ಧ ವಿದ್ಯಾರ್ಥಿ ಸಮೂಹ ಸಂಘಟಿತರಾಗಬೇಕು. ರಾಜಕೀಯ ಸೇರಿದಂತೆ ಇತರೆ ಎಲ್ಲ ಕ್ಷೇತ್ರಗಳಲ್ಲಿನ ಸೂತ್ರದ ಗಾಳವನ್ನು ವಿದ್ಯಾರ್ಥಿಗಳು ಕೈಗೆತ್ತಿಕೊಳ್ಳಬೇಕು ಎಂದು ಹೇಳಿದರು.
 ಆರೆಸ್ಸೆಸ್ ದೇಶದ್ರೋಹಿ ಸಂಘಟನೆ: ಆರೆಸ್ಸೆಸ್‌ಗೆ ಬೇಕಾಗಿರುವುದು ಅಂಬೇಡ್ಕರ್‌ರ ಭಾವಚಿತ್ರಕ್ಕೆ ಮಾತ್ರ ಪೂಜೆ ಮಾಡಿ, ಅವರ ಗುಣಗಾನವಷ್ಟೆ. ಆದರೆ ಅಂಬೇಡ್ಕರ್ ವಿಚಾರಗಳನ್ನು ಅನುಷ್ಠಾನಗೊಳಿಸಬೇಕು ಎಂದು ಧ್ವನಿ ಎತ್ತಿದರೆ ಸಾಕು ಸಂಘ ಪರಿವಾರಗಳಿಗೆ ಬೆಂಕಿ ಬಿದ್ದಂತಹ ಅನುಭವ ವಾಗುತ್ತದೆ. ಜ.26ರಂದು ಕರಾಳದಿನವನ್ನಾಗಿ ಆಚರಣೆ ಮಾಡುವ ಆರೆಸ್ಸೆಸ್ ಸಂವಿಧಾನ ವಿರೋಧಿ. ದೇಶದಲ್ಲಿ ತ್ರಿವರ್ಣ ಧ್ವಜ ಹಾರಿಸುವ ಬದಲು ಕೇಸರಿ ಧ್ವಜವನ್ನು ಹಾರಿಸಲು ಚಿಂತಿಸಿದೆ. ಈ ಸಂಘಟನೆ ನಿಜವಾದ ದೇಶದ್ರೋಹಿ ಸಂಘಟನೆ ಎಂದು ಆರೋಪಿಸಿದರು.
 ಕಾರ್ಯಕ್ರಮದಲ್ಲಿ ಎಸ್‌ಎಫ್‌ಐನ ರಾಷ್ಟ್ರಾಧ್ಯಕ್ಷ ವಿ.ಪಿ.ಸಾನು ಮಾತನಾಡಿ, ದೇಶಕ್ಕಾಗಿ ಹೋರಾಟ ಮಾಡುವವರಿಗೆ ದೇಶದ್ರೋಹಿಗಳ ಪಟ್ಟ ಕಟ್ಟುತ್ತಿದ್ದಾರೆ. ದೇಶದಲ್ಲಿ ಎಡಪಂಥೀಯ ವಿದ್ಯಾರ್ಥಿಗಳ ಮೇಲೆ ಸಂಘ ಪರಿವಾರ ಮತ್ತು ಎಬಿವಿಪಿ ಸಂಘಟನೆಗಳು ಹಲ್ಲೆ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿವೆ. ಅಲ್ಲದೆ ಕಳೆದ ಎರಡು ವರ್ಷಗಳಲ್ಲಿ ಸಂಘ ಪರಿವಾರಗಳ ಕಿರುಕುಳಕ್ಕೆ 9 ವಿದ್ಯಾರ್ಥಿಗಳು ಪ್ರಾಣವನ್ನು ಕಳೆದುಕೊಂಡಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.
ಹೈದರಾಬಾದ್ ವಿವಿ ವಿದ್ಯಾರ್ಥಿ ವೇಮುಲಾ ರೋಹಿತ್ ಆತ್ಮಹತ್ಯೆ ಮತ್ತು ಜೆನ್‌ಯು ವಿದ್ಯಾರ್ಥಿ ನಾಯಕ ಕನ್ಹಯ್ಯರ ಮೇಲೆ ನಡೆದಿರುವ ಹಲ್ಲೆಯನ್ನು ಖಂಡಿಸಿ ಪ್ರಗತಿಪರ ವಿದ್ಯಾರ್ಥಿ ಸಂಘಟನೆಗಳು ಮಾ.15ರಂದು ದೆಹಲಿ ಚಲೋ ರ್ಯಾಲಿಯನ್ನು ಆಯೋಜಿಸಲಾಗಿದೆ ಎಂದು ಅವರು ಇದೇ ವೇಳೆ ತಿಳಿಸಿದರು.
 ಕಾರ್ಯಕ್ರಮದಲ್ಲಿ ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ಗುರುರಾಜ್ ದೇಸಾಯಿ, ಉಪಾಧ್ಯಕ್ಷ ರೇಣುಕಾ ಕಹಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕನ್ಹಯ್ಯ ದೇಶದ ಯುವ ನಾಯಕ
ಜೆನ್‌ಯು ವಿದ್ಯಾರ್ಥಿ ಕನ್ಹಯ್ಯ ಕುಮಾರ್ ಸಂಘ ಪರಿವಾರಗಳ ಷಡ್ಯಂತ್ರದಿಂದ ಜೈಲಿಗೆ ಹೋದ ಮೇಲೆ ಅವರು ಮಾನಸಿಕವಾಗಿ ಖಿನ್ನತೆಗೆ ಒಳಗಾಗಿರುತ್ತಾರೆ ಎಂದೇ ಭಾವಿಸಿದ್ದೆ. ಆದರೆ ಅವರು ಇನ್ನೂ ಹೆಚ್ಚಿನ ನಾಯಕತ್ವದ ಗುಣಗಳನ್ನು ವೃದ್ಧಿಸಿಕೊಂಡಿದ್ದಾರೆ. ಶುಕ್ರವಾರ ನೆಹರೂ ವಿವಿಯಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಭಾಷಣ ಕೇಳಿದರೆ ಅವನಲ್ಲಿನ ಹೋರಾಟದ ಚೈತನ್ಯ ಕಳೆಗುಂದಿಲ್ಲ. ಭಾಷಣದಲ್ಲಿ ಮುಖ್ಯವಾಗಿ ಒತ್ತಿ ಹೇಳಿರುವ ‘ದೇಶದಲ್ಲಿ ಸ್ವಾತಂತ್ರ ಬೇಕು ಮತ್ತು ನಾನೂ ಯಾರ ವೈರತ್ವವನ್ನು ಸಾಧಿಸುವುದಿಲ್ಲ’ ಎಂಬ ಮಾತುಗಳು ದೇಶದ ಪ್ರಮುಖ ನಾಯಕರು ಅಳವಡಿಸಿಕೊಳ್ಳಬೇಕು.
ಪ್ರೊ.ಕೆ.ಮರುಳಸಿದ್ದಪ್ಪ, ಸಾಹಿತಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X