ಬಿಜೆಪಿ ಮುಖಂಡನ ಉಚ್ಚಾಟನೆ

ಬದೌನ್(ಉತ್ತರಪ್ರದೇಶ), ಮಾ.5: ಜೆಎನ್‌ಯು ವಿದ್ಯಾರ್ಥಿ ಸಂಘದ ಮುಖಂಡ ಕನ್ಹಯ್ಯಾ ಕುಮಾರ್ ಅವರ ನಾಲಗೆ ಕತ್ತರಿಸಿದರೆ, ಐದು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದ ಬಿಜೆಪಿ ಯುವಮೋರ್ಚಾ ಮುಖಂಡನನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಅವಧಿಗೆ ಉಚ್ಚಾಟಿಸಲಾಗಿದೆ.
ಬಿಜೆಪಿ ಯುವಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಕುಲದೀಪ್ ಅವರನ್ನು ಆರು ವರ್ಷಗಳ ಅವಧಿಗೆ ಉಚ್ಚಾಟಿಸಲಾಗಿದೆ ಎಂದು ಜಿಲ್ಲಾ ಅಧ್ಯಕ್ಷ ಹರ್ಷ ಶಾಕ್ಯ ಪ್ರಕಟಿಸಿದ್ದಾರೆ. ಈ ವಿವಾದಾತ್ಮಕ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
Next Story





