Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೆಚ್ಚು ಮಹಿಳೆಯರ ನಾಮಕರಣಕ್ಕೆ ಅನ್ಸಾರಿ...

ಹೆಚ್ಚು ಮಹಿಳೆಯರ ನಾಮಕರಣಕ್ಕೆ ಅನ್ಸಾರಿ ಸಲಹೆ

ವಾರ್ತಾಭಾರತಿವಾರ್ತಾಭಾರತಿ6 March 2016 12:21 AM IST
share

ಹೊಸದಿಲ್ಲಿ: ಮಹಿಳಾ ಮೀಸಲಾತಿ ಮಸೂದೆಯ ಶೀಘ್ರ ಅಂಗೀಕಾರವನ್ನು ಪ್ರತಿಪಾದಿಸಿದ ಉಪ ರಾಷ್ಟ್ರಪತಿ ಹಾಮಿದ್ ಅನ್ಸಾರಿಯವರು, ಈ ಬಗ್ಗೆ ಶಾಸನವು ಜಾರಿಗೆ ಬರುವವರೆಗೆ ಚುನಾವಣೆಗಳಲ್ಲಿ ಮಹಿಳಾ ಅಭ್ಯರ್ಥಿಗಳ ನಾಮಕರಣವನ್ನು ಸ್ವಯಂಪ್ರೇರಿತವಾಗಿ ಹೆಚ್ಚಿಸುವಂತೆ ಶನಿವಾರ ಇಲ್ಲಿ ರಾಜಕೀಯ ಪಕ್ಷಗಳಿಗೆ ಸೂಚಿಸಿದರು.
 2014ರ ಸಾರ್ವತ್ರಿಕ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳು ಕೇವಲ 146 ಮಹಿಳೆಯರನ್ನು ಕಣಕ್ಕಿಳಿಸಿದ್ದು, ಇದು ಒಟ್ಟು ಅಭ್ಯರ್ಥಿಗಳ ಸಂಖ್ಯೆ(1,591)ಯ ಶೇ.9.17ರಷ್ಟಿತ್ತು ಎಂದು ಬೆಟ್ಟು ಮಾಡಿದ ಅವರು, ಪ್ರಮುಖ ವಿಷಯಗಳಿಗೆ ಸಂಬಂಧಿಸಿದಂತೆ ಶಾಸನ ಸಭೆಗಳ ಮತ್ತು ಸಂಸದೀಯ ಸಮಿತಿಗಳಲ್ಲಿ ತೀವ್ರ ಲಿಂಗ ಅಸಮತೋಲನವಿದೆ ಎಂದು ವಿಷಾದಿಸಿದರು.

ಇಲ್ಲಿ ಎರಡು ದಿನಗಳ ಮಹಿಳಾ ಶಾಸಕರ ರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡುತ್ತಿದ್ದ ಅವರು, ಮಹಿಳೆಯರಿಗೆ ಮತದಾನದ ಸಾಂವಿಧಾನಿಕ ಹಕ್ಕು ನೀಡುವುದು ಒಂದು ವಿಷಯವಾಗಿದ್ದರೆ, ರಾಜ್ಯವ್ಯವಸ್ಥೆ ಮತ್ತು ಸಮಾಜದಲ್ಲಿ ಮಹಿಳೆಯರ ಅಧಿಕಾರ ಮತ್ತು ಪ್ರಭಾವವನ್ನು ಹೆಚ್ಚಿಸುವುದು ಬೇರೆಯದೇ ವಿಷಯವಾಗಿದೆ ಎಂದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಶೇ.47ರಷ್ಟು ಮತದಾರರು ಮಹಿಳೆಯರೇ ಆಗಿದ್ದರೂ ಅಧಿಕಾರದ ಹುದ್ದೆಗಳಲ್ಲಿ ಅದರ ಪೂರ್ಣ ಪ್ರತಿಫಲನಕ್ಕೆ ಪುರುಷ ಪ್ರಾಧಾನ್ಯತೆ ಮತ್ತು ಸಾಮಾಜಿಕ ಕಟ್ಟುಪಾಡುಗಳು ಅಡ್ಡಿಯಾಗಿವೆ ಎಂದರು. ಪಂಚಾಯತ್‌ಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರ ಪ್ರಾತಿನಿಧ್ಯವನ್ನು ಶೇ.43ಕ್ಕೆ ಹೆಚ್ಚಿಸಲಾಗಿದ್ದರೂ ಅದು ಸಂಸತ್ತು ಮತ್ತು ವಿಧಾನಸಭೆಗಳಲ್ಲಿ ಅವರ ಸಂಖ್ಯೆ ಹೆಚ್ಚುವಂತೆ ಮಾಡಿಲ್ಲ ಎಂದು ಅವರು ಬೆಟ್ಟು ಮಾಡಿದರು.
ಸಾಮಾನ್ಯವಾಗಿ ಹೆಚ್ಚಿನ ಮಹಿಳಾ ಸದಸ್ಯರನ್ನು ಮಹಿಳೆಯರ ವಿಷಯಗಳಿಗೆ ಸಂಬಂಧಿಸಿದ ಸಂಸದೀಯ ಸಮಿತಿಗಳಿಗೆ ಮಾತ್ರ ನಾಮಕರಣ ಮಾಡಲಾಗುತ್ತದೆ ಎಂದ ಅನ್ಸಾರಿ,ಎಲ್ಲ ವಿಷಯಗಳಲ್ಲಿ ಅವರು ಹೆಚ್ಚಿನ ಅಧಿಕಾರವಾಣಿ ಹೊಂದಿರುವಂತಾಗಲು ಕಾನೂನು ರೂಪಕರು ಮತ್ತು ಪಕ್ಷ ನಾಯಕತ್ವಗಳು ಶ್ರಮಿಸಬೇಕಾಗಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X