ಕಾರು ಅಪಘಾತ: ಸಚಿವೆ ಸ್ಮತಿ ಇರಾನಿ ಪವಾಡಸದೃಶ ಪಾರು

ಹೊಸದಿಲ್ಲಿ: ಮಾನವ ಸಂಪನ್ಮೂಲ ಸಚಿವೆ ಸ್ಮತಿ ಇರಾನಿ ಸಂಚರಿಸುತ್ತಿದ್ದ ಕಾರು ಅಪಘಾತವಾಗಿ ಸಚಿವೆ ಪವಾಡಸದೃಶ ರೀತಿಯಲ್ಲಿ ಪಾರಾದ ಘಟನೆ ರವಿವಾರ ಯಮುನಾ ಎಕ್ಸ್‌ಪ್ರೆಸ್ ವೇನಲ್ಲಿ ಸಂಭವಿಸಿದೆ.
ಘಟನೆಯಲ್ಲಿ ಒಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದಾರೆ. ಇರಾನಿ ಸಂಚರಿಸುತ್ತಿದ್ದ ಕಾರು ವಾಹನವ್ಯೆಹದಲ್ಲಿ ಪೊಲೀಸ್ ವಾಹನದ ಹಿಂದಿನ ಭಾಗಕ್ಕೆ ಢಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಇರಾನಿ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ತಾನು ಸುರಕ್ಷಿತವಾಗಿರುವುದಾಗಿ ಸಚಿವೆ ಸ್ಮತಿ ಇರಾನಿ ಟ್ವೀಟ್ ಮಾಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಮತಿ ಇರಾನಿಯ ಕೈ ಕಾಲುಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿಯ ಯುವಜನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಇರಾನಿ ಹಿಂದಿರುಗುತ್ತಿದ್ದರು.
Next Story





