ಮನಪಾ ನಗರ ಬಡತನ ನಿರ್ಮೂಲ ಕೋಶದಿಂದ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣೆ

ಮಂಗಳೂರು, ಮಾ.7: ಮಂಗಳೂರು ಮಹಾನಗರ ಪಾಲಿಕೆಯ ನಗರ ಬಡತನ ನಿರ್ಮೂಲ ಕೋಶದ ವತಿಯಿಂದ 24.10 ಶೇ, 7.25 ಶೇ. ಮತ್ತು 3 ಶೇ. ಮೀಸಲು ನಿಧಿಯಡಿ ಅರ್ಹ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ ಇಂದು ನಗರದ ಪುರಭವನದಲ್ಲಿ ನಡೆಯಿತು.
ಸಮಾರಂಭದಲ್ಲಿ 1100ಕ್ಕೂ ಅಧಿಕ ಮಂದಿಗೆ ವಿವಿಧ ಸೌಲಭ್ಯಗಳನ್ನು ವಿತರಿಸಲಿಯಾತು.
ಮನಪಾ ಮೇಯರ್ ಜೆಸಿಂತಾ ವಿಜಯಾ ಆಲ್ಫ್ರೆಡ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆರೋಗ್ಯ ಸಚಿವ ಯು.ಟಿ.ಖಾದರ್, ಶಾಸಕರಾದ ಬಿ.ಎ.ಮೊಯ್ದಿನ್ ಬಾವ, ಜೆ.ಆರ್.ಲೋಬೋ, ಐವನ್ ಡಿಸೋಜ, ಉಪಮೇಯರ್ ಪುರುಷೋತ್ತಮ ಚಿತ್ರಾಪುರ, ಮನಪಾ ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರು, ಸದಸ್ಯರು, ಹಾಗೂ ಮನಪಾ ಆಯುಕ್ತ ಡಾ.ಗೋಪಾಲಕೃಷ್ಣ ವೇದಿಕೆಯಲ್ಲಿದ್ದರು.
ಬೆಳಗ್ಗೆಯಿಂದ ಪುರಭವನದಲ್ಲಿ ಹಾಜರಿದ್ದ ಸಾವಿರರು ಮಂದಿ ಫಲಾನುಭವಿಗಳು ಸರತಿ ಸಾಲಿನಲ್ಲಿ ತಮ್ಮ ಹೆಸರು ನೋಂದಣಿ ಮಾಡಿಕೊಳ್ಳುವ ಮೂಲಕ ಉತ್ಸಾಹದಿಂದ ಪಾಲ್ಗೊಂಡು ತಮಗೆ ದೊರೆತ ಸೌಲಭ್ಯಗಳನ್ನು ಪಡೆದುಕೊಂಡರು.







Next Story







