ಕೊಣಾಜೆ: ಸಮುದಾಯ ಅರಿವು ಮಾಹಿತಿ ಶಿಬಿರ

ಸಮುದಾಯ ಅರಿವು ಕಾರ್ಯಕ್ರಮವು ಶನಿವಾರ ಕೊಣಾಜೆ ಪಂಚಾಯಿತಿಯ ಸಭಾಂಗಣದಲ್ಲಿ ನಡೆಯಿತು.
ಕೊಣಾಜೆ: ಶಿಕ್ಷಣ ಹಕ್ಕು ಕೋಶ ಹಾಗೂ ಶಿಕ್ಷಣ ಹಕ್ಕು ಕಾಯಿದೆ 2009 ಸಮುದಾಯ ಅರಿವು ಕಾರ್ಯಕ್ರಮವು ಶನಿವಾರ ಕೊಣಾಜೆ ಪಂಚಾಯಿತಿಯ ಸಭಾಂಗಣದಲ್ಲಿ ನಡೆಯಿತು.
ಸಾರ್ವಜನಿಕ ಶಿಕ್ಷಣ ಇಲಾಖೆ, ಮಂಗಳೂರು ದಕ್ಷಿಣ ವಲಯ ಶಿಕ್ಷಣ ಸಂಪನ್ಮೂಲ ಕೇಂದ್ರ, ಪಡಿ ಸಂಸ್ಥೆ ಮಂಗಳೂರು ಹಾಗೂ ಕೊಣಾಜೆ ಗ್ರಾಮ ಪಂಚಾಯಿತಿ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ತಾಲೂಕು ಪಂಚಾಯಿತಿ ಸದಸ್ಯೆ ಪದ್ಮಾವತಿ ಅವರು ಮಾಹಿತಿ ಶಿಬಿರದ ಉದ್ಘಾಟನೆಯನ್ನು ನೆರವೇರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕೊಣಾಜೆ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಶೌಕತ್ ಆಲಿ ಅವರು ಶಿಕ್ಷಣ ಎಂಬುದು ಇಂದು ಪ್ರತಿಯೊಬ್ಬರಿಗೂ ಅವಶ್ಯಕವಾಗಿದ್ದು ಈ ನಿಟ್ಟಿನಲ್ಲಿ ಯಾವೊಬ್ಬ ವಿದ್ಯಾರ್ಥಿಯೂ ವಂಚಿತರಾಗದಂತೆ ನೋಡಿಕೊಳ್ಳುವ ಜವಬ್ಧಾರಿ ಪೋಷಕರದ್ದು ಮತ್ತು ಸಮಾಜದ್ದು. ಇಂತಹ ಮಾಹಿತಿ ಶಿಬಿರಗಳು ಬಹಳ ಉಪಯುಕ್ತವಾಗಿದ್ದು ಪ್ರತಿಯೊಬ್ಬರೂ ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಂಚಾಯಿತಿ ಉಪಾಧ್ಯಕ್ಷೆ ಲಲಿತಾ ರಾವ್, ಸದಸ್ಯರುಗಳಾದ ಕೆ.ಅಚ್ಚುತಗಟ್ಟಿ, ಮುತ್ತುಶೆಟ್ಟಿ, ಗುಲಾಬಿ, ಚಂದ್ರಹಾಸ, ಮಹಮ್ಮದ್ ಯು, ವೇದಾವತಿ ಗಟ್ಟಿ, ರಾಜೀವಿ ಶೆಟ್ಟಿ, ಪಡಿ ಸಂಸ್ಥೆಯ ನಿರ್ದೇಶಕರಾದ ರೆನ್ನಿ ಡಿಸೋಜ, ಸಾರ್ವಜನಿಕ ಶಿಕ್ಷಣ ಇಲಾಖೆಯ ಸಮನ್ವಾಧಿಕಾರಿ ಲಕ್ಷ್ಮೀನಾರಾಯಣ, ಮಂಗಳೂರು ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷೆ ಆಶಾಲತಾ ಸುವರ್ಣ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೇಶವ, ಶಿಕ್ಷಕರ ಸಂಘದ ರಾಧಾಕೃಷ್ಣ ಭಟ್, ಕೊಣಾಜೆ ಪದವು ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ಭಾರತಿ ಉಪಸ್ಥಿತರಿದ್ದರು. ಶಿಕ್ಷಣ ಸಂಪನ್ಮೂಲ ಕೇಂದ್ರದ ಜೊತೆ ಕಾರ್ಯದರ್ಶಿ ಆಶಾ ಬೇಕಲ್ ಸ್ವಾಗತಿಸಿ, ಅಚ್ಯುತ ಗಟ್ಟಿಯವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಉಷಾ ನಾಯ್ಕಾ ವಂದಿಸಿದರು.





