Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉತ್ತರ ಕೊರಿಯಾದಿಂದ ಅಣ್ವಸ್ತ್ರ ದಾಳಿ...

ಉತ್ತರ ಕೊರಿಯಾದಿಂದ ಅಣ್ವಸ್ತ್ರ ದಾಳಿ ಎಚ್ಚರಿಕೆ

ಅಮೆರಿಕ-ದಕ್ಷಿಣ ಕೊರಿಯಾ ಸೇನಾ ಕವಾಯತು

ವಾರ್ತಾಭಾರತಿವಾರ್ತಾಭಾರತಿ7 March 2016 11:11 PM IST
share

ಸಿಯೋಲ್, ಮಾ.7: ಅಮೆರಿಕ ಹಾಗೂ ದಕ್ಷಿಣ ಕೊರಿಯಾ ತಮ್ಮ ವಾರ್ಷಿಕ ಜಂಟಿ ಮಿಲಿಟರಿ ಕಾರ್ಯಾಚರಣೆಗೆ ಚಾಲನೆ ನೀಡಿದ ಬೆನ್ನಲ್ಲೇ, ಈಶಾನ್ಯ ಏಷ್ಯಾ ಭಾಗದಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಅಣ್ವಸ್ತ್ರ ದಾಳಿ ನಡೆಸುವುದಾಗಿ ಉತ್ತರ ಕೊರಿಯಾ ಎಚ್ಚರಿಕೆ ನೀಡಿದೆ.
 ಅಮೆರಿಕ- ದಕ್ಷಿಣ ಕೊರಿಯಾ ಜಂಟಿ ಕಾರ್ಯಾಚರಣೆಗೆ ಸಾವಿರಾರು ಮಂದಿ ಅಮೆರಿಕನ್ ನೌಕಾಪಡೆ ಯೋಧರು ಮತ್ತು ಭೂಸೇನೆ ಹಾಗೂ ವಾಯುಪಡೆ ಸೈನಿಕರು ದಕ್ಷಿಣ ಕೊರಿಯಾಗೆ ಆಗಮಿಸಿದ್ದಾರೆ. ಇದರಲ್ಲಿ ಅಮೆರಿಕದ 17 ಸಾವಿರ ಹಾಗೂ ದಕ್ಷಿಣ ಕೊರಿಯಾ ಸೇನೆಯ 30 ಸಾವಿರ ಯೋಧರು ಪಾಲ್ಗೊಳ್ಳಲಿದ್ದಾರೆ. ಕೊರಿಯಾ ಪರ್ಯಾಯ ದ್ವೀಪದ ಮೇಲೆ ಉತ್ತರ ಕೊರಿಯಾ ದಾಳಿ ಮಾಡಿದಲ್ಲಿ, ಯಾವುದೇ ರೀತಿಯ ಎದಿರೇಟು ನೀಡಲು ಮಿತ್ರಪಡೆ ಸಿದ್ಧವಾಗಿದೆ ಎನ್ನುವುದನ್ನು ಪ್ರದರ್ಶಿಸುವ ಪ್ರಯತ್ನವಾಗಿ ಈ ಕಾರ್ಯಾಚರಣೆ ನಡೆಸಲಾಗುತ್ತದೆ.
ಈ ಜಂಟಿ ಕಾರ್ಯಾಚರಣೆ ದಾಳಿಗೆ ಅಭ್ಯಾಸವಾಗಿದೆ ಎಂದು ಹೇಳಿರುವ ಉತ್ತರ ಕೊರಿಯಾ ಈ ಮೊದಲು ಕೂಡಾ ದಾಳಿಯ ಎಚ್ಚರಿಕೆ ನೀಡಿತ್ತು. ಆದರೆ ಈ ಬಾರಿ ಉತ್ತರ ಕೊರಿಯಾದ ಅಣ್ವಸ್ತ್ರ ಪರೀಕ್ಷೆಯನ್ನು ಅಂತಾರಾಷ್ಟ್ರೀಯ ಸಮುದಾಯ ಖಂಡಿಸಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ಭಿನ್ನವಾಗಿದೆ.
ಕಳೆದ ತಿಂಗಳು ಉತ್ತರ ಕೊರಿಯಾ ದೀರ್ಘದೂರ ಸಾಮರ್ಥ್ಯದ ರಾಕೆಟ್ ಮೂಲಕ ಉಪಗ್ರಹವನ್ನು ಕಕ್ಷೆಗೆ ಸೇರಿಸಿದ ಬಳಿಕ. ದಕ್ಷಿಣ ಕೊರಿಯಾದ ರಕ್ಷಣಾ ಸಚಿವರು, ಈ ಬಾರಿಯ ಕಾರ್ಯಾಚರಣೆ ಹಿಂದೆಂದಿಗಿಂತಲೂ ಬೃಹತ್ ಪ್ರಮಾಣದ್ದಾಗಿರುತ್ತದೆ ಎಂದು ಪ್ರಕಟಿಸಿದ್ದರು. ಅಣ್ವಸ್ತ್ರ ಸಾಮರ್ಥ್ಯದ ಯುದ್ಧವಿಮಾನ, ಜಾನ್ ಸಿ.ಸ್ಟೆನ್ನಿಸ್ ಕೂಡಾ ಕಾರ್ಯಾಚರಣೆಯಲ್ಲಿ ಪಾಲ್ಗೊಳ್ಳಲಿದೆ ಎಂದು ಅಮೆರಿಕ ಹಾಗೂ ದಕ್ಷಿಣ ಕೊರಿಯಾ ಸೇನೆಗಳ ಜಂಟಿ ಹೇಳಿಕೆ ತಿಳಿಸಿದೆ.
ಈ ಮಧ್ಯೆ ಪ್ರತ್ಯೇಕ ಹೇಳಿಕೆ ನೀಡಿರುವ ಉತ್ತರ ಕೊರಿಯಾ, ಅಮೆರಿಕದ ಸಾಮ್ರಾಜ್ಯಶಾಹಿ ಮನೋಭಾವದ ವಿರುದ್ಧ ಯಾವುದೇ ಪೂರ್ವ ಎಚ್ಚರಿಕೆ ಇಲ್ಲದೇ ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಏಷ್ಯಾ- ಫೆಸಿಪಿಕ್ ಪ್ರದೇಶ ಹಾಗೂ ಅಮೆರಿಕದಲ್ಲಿರುವ ಸೇನಾ ನೆಲೆಗಳ ಮೇಲೆ ದಾಳಿ ಮಾಡುವುದಗಿ ಎಚ್ಚರಿಕೆ ನೀಡಿದೆ.
ನಮ್ಮ ವೈರಿಗಳ ಹುಟ್ಟಡಗಿಸಲು ಈಗ ಗುಂಡಿಯನ್ನು ಅದುಮಿದರೆ, ಎಲ್ಲ ಪ್ರಚೋದಕ ನೆಲೆಗಳು, ಬೆಂಕಿಯ ಜ್ವಾಲೆಗಳಾಗಿ,ಬೂದಿಯಾಗಿ ಸಮುದ್ರಪಾಲಾಗಬೇಕಾಗುತ್ತದೆ ಎಂದು ಉತ್ತರ ಕೊರಿಯಾ ಗುಡುಗಿದೆ. ಇದಕ್ಕೆ ದಕ್ಷಿಣ ಕೊರಿಯಾ ಕೂಡಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಉತ್ತರ ಕೊರಿಯಾ ತನ್ನ ದಾಳಿಕೋರ ಹಾಗೂ ಧಾರ್ಷ್ಯ್ಟದ ಮನೋಭಾವವನ್ನು ತಕ್ಷಣ ನಿಲ್ಲಿಸಬೇಕು ಎಂದು ರಕ್ಷಣಾ ಸಚಿವಾಲಯದ ವಕ್ತಾರ ಮೂನ್ ಸಂಗ್ ಗ್ಯೂನ್ ಹೇಳಿದ್ದಾರೆ. ಉತ್ತರ ಕೊರಿಯಾ ಈ ಎಚ್ಚರಿಕೆಯನ್ನು ನಿರ್ಲಕ್ಷಿಸಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪ್ರತಿ ಎಚ್ಚರಿಕೆ ನೀಡಿದ್ದಾರೆ.
ಉತ್ತರ ಕೊರಿಯಾದ ಮುಖಂಡ ಜಿಮ್‌ಜಂಗ್ ಉನ್ ಅವರು ತಮ್ಮ ನಾಯಕತ್ವವನ್ನು ಪ್ರಬಲಗೊಳಿಸಿಕೊಳ್ಳುವ ಸಲುವಾಗಿ ಇಂಥ ಹೇಳಿಕೆ ನೀಡುತ್ತಿದ್ದಾರೆ ಎಂದು ದಕ್ಷಿಣ ಕೊರಿಯಾದ ಅಧಿಕಾರಿಗಳು ಹಾಗೂ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X