ಪುತ್ತೂರು ನಗರಸಭೆ ಆಡಳಿತಾಧಿಕಾರಿಯಾಗಿ ಜಿಲ್ಲಾಧಿಕಾರಿ ನೇಮಕ

ಪುತ್ತೂರು, ಮಾ.7: ಪುತ್ತೂರು ನಗರಸಭೆಯ ಹಾಲಿ ಅಧ್ಯಕ್ಷ, ಉಪಾಧ್ಯಕ್ಷರ ಅಧಿಕಾರಾವಧಿ ಮಾ.10ರಂದು ಕೊನೆಗೊಳ್ಳಲಿದ್ದು, ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಗೆ ಉಚ್ಚ ನ್ಯಾಯಾಲಯದಿಂದ ತಡೆ ಯಾಜ್ಞೆ ಇರುವ ಹಿನ್ನೆಲೆ ಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ನಡೆಯುವ ತನಕ ದ.ಕ. ಜಿಲ್ಲಾಧಿಕಾರಿಯನ್ನು ನಗರಸಭೆಯ ಆಡಳಿತಾಧಿಕಾರಿ ಯಾಗಿ ನೇಮಕಗೊಳಿಸಿ ಸರಕಾರ ಆದೇಶಿಸಿದೆ.
ಎ.ಬಿ.ಇಬ್ರಾಹೀಂ ಮಾ.10ರಂದು ನಗರಸಭೆಯ ಅಧಿಕಾರ ಸ್ವೀಕರಿಸಲಿದ್ದಾರೆ.
Next Story





