Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಆಳ್ವಾಸ್ ಮೀಡಿಯಾ ಬಝ್’ ರಾಷ್ಟ್ರೀಯ...

‘ಆಳ್ವಾಸ್ ಮೀಡಿಯಾ ಬಝ್’ ರಾಷ್ಟ್ರೀಯ ವಿಚಾರ ಸಂಕಿರಣ ಹಾಗೂ ಮಾಧ್ಯಮ ಉತ್ಸವ

ವಾರ್ತಾಭಾರತಿವಾರ್ತಾಭಾರತಿ8 March 2016 4:39 PM IST
share
‘ಆಳ್ವಾಸ್ ಮೀಡಿಯಾ ಬಝ್’ ರಾಷ್ಟ್ರೀಯ ವಿಚಾರ ಸಂಕಿರಣ ಹಾಗೂ  ಮಾಧ್ಯಮ ಉತ್ಸವ

 ಆಳ್ವಾಸ್ ಕಾಲೇಜು ಸಂವಹನ ಮತ್ತು ಪತ್ರಿಕೋದ್ಯಮ ಸ್ನಾತಕೋತ್ತರ ಹಾಗೂ ಪದವಿ ವಿಭಾಗದ ವತಿಯಿಂದ ‘ಮೀಡಿಯಾ ಬಝ್’ ರಾಷ್ಟ್ರೀಯ ವಿಚಾರ ಸಂಕಿರಣ ಹಾಗೂ ಮಾಧ್ಯಮ ಉತ್ಸವವನ್ನು ಆಯೋಜಿಸಲಾಗುತ್ತದೆ. ಕಾರ್ಯಕ್ರಮವನ್ನು ಇದೇ ಮಾರ್ಚ್ 11 ಮತ್ತು 12 ರಂದು ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ನಡೆಸಲಾಗುತ್ತಿದೆ.ತನಿಖಾ ಪತ್ರಿಕೋದ್ಯಮದ ಮೇಲೆ ಈ ರಾಷ್ಟ್ರೀಯ ವಿಚರ ಸಂಕಿರಣವು ನಡೆಯಲಿದೆ. ಮಾರ್ಚ್ 11ರಂದು ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದ್ದು, ಹಿರಿಯ ಪತ್ರಕರ್ತ ಅನಂತ ಚಿನಿವಾರ್ ಅವರು ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಅವರು ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಯಾಗಿ ಮಂಗಳೂರು ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರದ ಅಧ್ಯಕ್ಷೆ ಡಾ.ವಹೀದಾ ಸುಲ್ತಾನಾ ಅವರು ಪಾಲ್ಗೊಳ್ಳಲಿದ್ದಾರೆ.

 ಮಾರ್ಚ್ 11 ರಂದು ಬೆಳಗ್ಗೆ 11.10ಕ್ಕೆ ‘ತನಿಖಾ ಪತ್ರಿಕೋದ್ಯಮ-ಆಯಾಮಗಳು ಮತ್ತು ಪ್ರಾಯೋಗಿಕ ಅನ್ವಯಗಳು’ ಎಂಬ ವಿಷಯದ ಕುರಿತಂತೆ ‘ವಿಶ್ವವಾಣಿ’ ದಿನಪತ್ರಿಕೆಯ ಮಂಗಳೂರು ವಿಭಾಗದ ವಿಶೇಷ ವರದಿಗಾರರಾದ ಜಿತೇಂದ್ರ ಕುಂದೇಶ್ವರ ಅವರು ಮಾತನಾಡಲಿದ್ದಾರೆ.

 ಮಾರ್ಚ್ 12ರಂದು ರಾಷ್ಟ್ರೀಯ ವಿಚಾರ ಸಂಕಿರಣದ ಮುಖ್ಯ ಭಾಗ ತೆರೆದುಕೊಳ್ಳಲಿದ್ದು, ತನಿಖಾ ಪತ್ರಿಕೋದ್ಯಮ ಕುರಿತಾಗಿ ಚರ್ಚೆ ನಡೆಯಲಿದೆ. ಚರ್ಚೆಯಲ್ಲಿ ಸುವರ್ಣ ನ್ಯೂಸ್ 24*7 ನ ಸೀನಿಯರ್ ಕರೆಸ್ಪಾಂಡೆಂಟ್ ಆದ ವಿಜಯಲಕ್ಷ್ಮಿ ಶಿಬರೂರು ಹಾಗೂ ಉಡುಪಿ ಜಿಲ್ಲೆಯ ಪೋಲೀಸ್ ವರಿಷ್ಠಾಧಿಕಾರಿ ಕೆ. ಅಣ್ಣಾಮಲೈ ಅವರು ಭಾಗವಹಿಸುತ್ತಿದ್ದಾರೆ.

ಮಾರ್ಚ್ 12ರಂದು ಮಧ್ಯಾಹ್ನ 3.00 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ‘ಡೆಕ್ಕನ್ ಹೆರಾಲ್ಡ್’ ದಿನಪತ್ರಿಕೆಯ ಮಂಗಳೂರು ವಿಭಾಗದ ಸ್ಥಾನಿಕ ಸಂಪಾದಕ ಹಾಗೂ ಮಂಗಳೂರು ಪ್ರೆಸ್‌ಕ್ಲಬ್‌ನ ಅಧ್ಯಕ್ಷ ರೊನಾಲ್ಡ್ ಅನಿಲ್ ಫೆರ್ನಾಂಡಿಸ್ ಮತ್ತು ಮೂಡುಬಿದಿರೆ ಪ್ರೆಸ್‌ಕ್ಲಬ್‌ನ ಅಧ್ಯಕ್ಷ, ‘ಹೊಸದಿಗಂತ’ ದಿನಪತ್ರಿಕೆಯ ಕರೆಸ್ಪಾಂಡೆಂಟ್ ಎಂ. ಗಣೇಶ್ ಕಾಮತ್ ಅವರು ಭಾಗವಹಿಸಲಿದ್ದಾರೆ. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟೀ ವಿವೇಕ್ ಆಳ್ವ ಅವರು ವಹಿಸಿಕೊಳ್ಳಲಿದ್ದಾರೆ.

ಮೀಡಿಯಾ ಬಝ್ ಮಾಧ್ಯಮ ಉತ್ಸವ

  ಉಳಿದಂತೆ ವಿದ್ಯಾರ್ಥಿಗಳಿಗಾಗಿ ಮಾಧ್ಯಮ ಉತ್ಸವ ನಡೆಯಲಿದ್ದು, ಅನೇಕ ಸ್ಪರ್ಧೆಗಳಿಗೆ ಮೀಡಿಯಾ ಬಜ್‌ ವೇದಿಕೆ ನೀಡುತ್ತಿದೆ. ಫೋಟೋಗ್ರಫಿ, ವಿಜೆ ಹಂಟ್, ಲೈವ್‌ರಿಪೋರ್ಟಿಂಗ್, ಪೇಜಿನೇಶನ್, ಮ್ಯಾಡ್ ಆ್ಯಡ್, ಮಾಕ್‌ಪ್ರೆಸ್, ಪ್ರೊಡಕ್ಟ್ ಪ್ರೊಮೋಶನ್, ಕಿರುಚಿತ್ರ, ಸಾಕ್ಷ್ಯ ಚಿತ್ರ, ರೇಡಿಯೋ ಫೀಚರ್, ಕ್ವಿಜ್‌ ಹೀಗೆ ಸುಮಾರು 11 ವಿವಿಧ ಸ್ಪರ್ಧೆಗಳನ್ನು ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾಗಿದೆ.

  ಪ್ರತಿಯೊಬ್ಬ ವಿದ್ಯಾರ್ಥಿಯು ಇಲ್ಲಿ ನಡೆಸುವ ವಿಚಾರ ಸಂಕಿರಣದ ಮೂಲಕ ತನ್ನ ಜ್ಞಾನದ ಪರಿಮಿತಿಯನ್ನು ವಿಶಾಲಗೊಳಿಸುವುದು ಹಾಗೂ ಮೀಡಿಯಾ ಫೆಸ್ಟ್‌ನ ಮೂಲಕ ತನ್ನನ್ನು ತಾನು ಪತ್ರಿಕಾ ಬದುಕಿಗೆ ಅಣಿಯಾಗಿಸುವುದು ಮಿಡಿಯಾ ಬರ್ನ ಒಟ್ಟು ಉದ್ದೇಶವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X