ಬೆಳ್ತಂಗಡಿ : ಈಗಿನ ಕಾಂಗ್ರೆಸ್ ನೇತೃತ್ವದ ಸರಕಾರವು ಹಿಂದೆ ಯಾವ ಸರಕಾರವೂ ಮಾಡದ ಅಭಿವೃದ್ಧಿಯನ್ನು ಮಾಡಿದೆ -ವಸಂತ ಬಂಗೇರ

ಬೆಳ್ತಂಗಡಿ : ಈಗಿನ ಕಾಂಗ್ರೆಸ್ ನೇತೃತ್ವದ ಸರಕಾರವು ಹಿಂದೆ ಯಾವ ಸರಕಾರವೂ ಮಾಡದ ಅಭಿವೃದ್ಧಿಯನ್ನು ಮಾಡಿದೆ ಶಿಕ್ಷಣಕ್ಕೆ, ಕೃಷಿಗೆ, ಆರೋಗ್ಯಕ್ಕೆ ಹೆಚ್ಚು ಒತ್ತು ನೀಡುತ್ತಿದ್ದು ಇದರಿಂದ ಬಡ ಹಾಗೂ ಮದ್ಯಮ ಕುಟುಂಬದ ವರ್ಗಗಳಿಗೆ ಹೆಚ್ಚು ಪ್ರಯೋಜನವಾಗಿದೆ. ಇದರಿಂದಾಗಿಯೇ ರಾಜ್ಯದಲ್ಲಿ ಇತ್ತೀಚೆಗೆ ನಡೆದ ಜಿ. ಪಂ. ಹಾಗೂ ತಾ. ಪಂ. ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಯಿತು ಎಂದು ಶಾಸಕ ಕೆ. ವಸಂತ ಬಂಗೇರ ಹೇಳಿದ್ದಾರೆ. ಅವರು ಮಂಗಳವಾರ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾ ಭವನದಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಇತ್ತೀಚೆಗೆ ನಡೆದ ಜಿ. ಪಂ. ತಾ. ಪಂ. ಚುನಾವಣೆಯಲ್ಲಿ ವಿಜೇತರಾದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಹಾಗೂ ಮತದಾರ ಭಾಂದವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಅಭಿನಂದನಾ ಸಭೆಯಲ್ಲಿ ಮಾತನಾಡಿ ಮುಂದಿನ ದಿನಗಳಲ್ಲಿ ಸರಕಾರದ ಪ್ರತಿಯೊಂದು ಯೋಜನೆಗಳನ್ನು ಪ್ರತೀ ಮನೆ ಮನೆಗಳಿಗೆ ತಲುಪಿಸಲು ಕಾಂಗ್ರೆಸ್ ಕಾರ್ಯಕರ್ತರು ಶ್ರಮಿಸಬೇಕು ಈ ರೀತಿಯಾಗಿ ಪಕ್ಷದ ಬಲವರ್ಧನೆಗೆ ಮುಂದಾಗಿ ಎಂದರು. ಇದೇ ಸಂದರ್ಭದಲ್ಲಿ ವಿಜೇತರಾದ ಜಿ. ಪಂ., ತಾ. ಪಂ. ಅಭ್ಯರ್ಥಿಗಳನ್ನು ಗೌರವಿಸಲಾಯಿತು. ಪಕ್ಷದ ವಿವಿಧ ಮುಖಂಡರುಗಳು ಉಪಸ್ಥಿತರಿದ್ದರು.





