ಮಂಗಳೂರು: ವಿಮಾನ ನಿಲ್ದಾಣದಲ್ಲಿ ಇಮಿಗ್ರೇಷನ್- ಕಸ್ಟಂಮ್ಸ್ ಅಧಿಕಾರಿಗಳ ಕಿರುಕುಳ ತಡೆಗೆ ಮನವಿ

ಮಂಗಳೂರು, ಮಾ.9: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಮಿಗ್ರೇಷನ್ ಮತ್ತು ಕಸ್ಟಂಮ್ಸ್ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಕೇರಳ ಸ್ಟೇಟ್ ಮುಸ್ಲಿಮ್ ಯೂತ್ ಲೀಗ್ ವತಿಯಿಂದ ಇಂದು ಬೆಳಗ್ಗೆ ವಿಮಾನ ನಿಲ್ದಾಣದ ಬಳಿ ನೂರಾರು ಮಂದಿ ಸೇರಿ ಧರಣಿ ನಡೆಸಿದರು.
ಈ ಸಂದರ್ಭ ಮಂಜೇಶ್ವರ ಶಾಸಕ ಅಬ್ದುಲ್ ರಝಾಕ್ ನೇತೃತ್ವದಲ್ಲಿ ವಿಮಾನ ನಿಲ್ದಾಣದ ನಿರ್ದೇಶಕ ಜಿ.ಟಿ. ರಾಧಾಕೃಷ್ಣ ಅವರಿಗೆ ಮನವಿ ಸಲ್ಲಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಯಿತು.
Next Story





