Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶೌಚಾಲಯ ನಿರ್ಮಾಣ ಕಾರ್ಯ ನಿರೀಕ್ಷೆಯಂತೆ...

ಶೌಚಾಲಯ ನಿರ್ಮಾಣ ಕಾರ್ಯ ನಿರೀಕ್ಷೆಯಂತೆ ನಡೆದಿಲ್ಲ: ಸುಭಾಷ್‌ಚಂದ್ರ

ವಾರ್ತಾಭಾರತಿವಾರ್ತಾಭಾರತಿ9 March 2016 10:40 PM IST
share

ಬೆಂಗಳೂರು, ಮಾ. 9: ಕರ್ನಾಟಕದ ಐದು ಜಿಲ್ಲೆಗಳಲ್ಲಿ ಹೊರತುಪಡಿಸಿದರೆ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಶೌಚಾಲಯ ನಿರ್ಮಾಣದ ಕಾರ್ಯ ನಿರೀಕ್ಷೆಯಂತೆ ನಡೆದಿಲ್ಲ ಎಂದು ಗ್ರಾಮೀಣ ಹಾಗೂ ಪಂಚಾಯತ್ ರಾಜ್ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಸುಭಾಷ್‌ಚಂದ್ರ ದೂರಿದ್ದಾರೆ. ಬುಧವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ಕಮ್ಯುನಿಕೇಷನ್ ಾರ್ ಡೆವಲಪ್‌ಮೆಂಟ್ ಆಂಡ್ ಲರ್ನಿಂಗ್ (ಸಿಡಿಎಲ್) ಸಂಸ್ಥೆಯು ಆಯೋಜಿಸಿದ್ದ ನೈರ್ಮಲ್ಯ ವಿಷಯ ಕುರಿತ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
 ಉಡುಪಿ, ಕೊಡಗು, ಮಂಡ್ಯ, ರಾಯಚೂರು ಮತ್ತು ಮಂಗಳೂರು ಜಿಲ್ಲೆಗಳು ನೈರ್ಮಲ್ಯ ಹಾಗೂ ಶೌಚಾಲಯ ನಿರ್ಮಾಣದಲ್ಲಿ ಸುಧಾರಣೆ ಕಂಡಿದ್ದು, ಚಿಕ್ಕಮಗಳೂರು, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಮಾಧಾನ ಪ್ರಗತಿ ಸಾಧಿಸಿ ದರೆ, ಉಳಿದ ಎಲ್ಲ ಜಿಲ್ಲೆಗಳು ನೈರ್ಮಲ್ಯ ಕಾಪಾಡುವಲ್ಲಿ ವಿಲವಾಗಿದೆ ಎಂದು ಮಾಹಿತಿ ನೀಡಿದರು.
  ಇಲಾಖೆಯು 2010-11ರಲ್ಲಿ ಸರ್ವೇ ಆಧಾರದ ಮೇಲೆ ಗ್ರಾಮೀಣ ಪ್ರದೇಶಗಳಲ್ಲಿ 55 ಲಕ್ಷಗ ಶೌಚಾಲಯಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದ್ದು, ಪ್ರಸ್ತುತ 21 ಲಕ್ಷ ಶೌಚಾಲಯ ಗಳನ್ನು ಕಟ್ಟಲಾಗಿದೆ. ಈ ಆರ್ಥಿಕ ವರ್ಷದಲ್ಲಿ 6.27 ಲಕ್ಷ ಶೌಚಾಲಯ ನಿರ್ಮಿಸಿದ್ದು, ಮಾ.31ರಒಳಗೆ 10 ಲಕ್ಷವಾಗುವ ನಿರೀಕ್ಷೆಯಿದೆ ಎಂದು ಹೇಳಿದರು.
ಪಶ್ಚಿಮ ಬಂಗಾಳ, ರಾಜಸ್ತಾನ ಮತ್ತು ಮಧ್ಯ ಪ್ರದೇಶ ರಾಜ್ಯಗಳಲ್ಲಿ ಬಡತನ ಹಾಗೂ ಜನಸಂಖ್ಯೆ ಹೆಚ್ಚಿದ್ದರೂ ಶೌಚಾಲಯ ನಿರ್ಮಾಣದಲ್ಲಿ ಪ್ರಗತಿ ಸಾಧಿಸಿದ್ದಾರೆ. ಅಲ್ಲಿನ ಗ್ರಾಮೀಣ ಭಾಗದ ರೈತರು ತಮ್ಮ ಹಣದಿಂದ ಶೌಚಾಲಯ ನಿರ್ಮಿಸಿ, ಅನಂತರದಲ್ಲಿಯೇ ಸರಕಾರ ನೀಡುವ ಸಹಾಯಧನ ಪಡೆಯುತ್ತಾರೆ. ಅದೇ ರೀತಿ, ರಾಜ್ಯದ ಜನರು ನೈರ್ಮಲ್ಯದ ಮಹತ್ವವನ್ನು ಅರಿತುಕೊಂಡು ಶೌಚಾಲಯ ನಿರ್ಮಾಣ ಕಾರ್ಯಗಳಿಗೆ ಮುಂದಾಗಬೇಕಿದೆ ಎಂದು ತಿಳಿಸಿದರು.
 ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಆಯುಕ್ತ ಮಂಜುನಾಥ್ ನಾಯಕ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಶೌಚಾಲಯ ನಿರ್ಮಾಣಕ್ಕೆ ಸರಕಾರವು ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಒಂದು ಶೌಚಾಲಯ ನಿರ್ಮಾಣಕ್ಕೆ 12 ಸಾವಿರ ರೂ. ನೀಡಲಾಗುತ್ತಿದೆ. ಅದೇ ರೀತಿ, ಪರಿಶಿಷ್ಟ ಜಾತಿ-ಪಂಗಡದ ವರ್ಗದವರಿಗೆ 15 ಸಾವಿರಕ್ಕೆ ಏರಿಸಲಾಗಿದೆ. ಶೌಚಾಲಯ ನಿರ್ವಹಣೆಗೆ ನೀರಿನ ಕೊರತೆ ಕಂಡುಬರುತ್ತಿದ್ದು, ಇದಕ್ಕಾಗಿಯೇ 9 ಸಾವಿರ ಅಂಗನವಾಡಿ ಮತ್ತು ಶಾಲೆಗಳಲ್ಲಿರುವ ಟ್ಯಾಂಕರ್ ಮೂಲಕ ನೀರನ್ನು ಸರಬರಾಜು ಮಾಡಲಾಗುತ್ತಿದೆ ಎಂದು ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X