Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು : ಯೆನೆಪೋಯ ಶ್ವದ್ಯಾನಿಲಯದಲ್ಲಿ...

ಮಂಗಳೂರು : ಯೆನೆಪೋಯ ಶ್ವದ್ಯಾನಿಲಯದಲ್ಲಿ ವಿಶ್ವ ಕಿಡ್ನಿ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ10 March 2016 7:32 PM IST
share
ಮಂಗಳೂರು : ಯೆನೆಪೋಯ ಶ್ವದ್ಯಾನಿಲಯದಲ್ಲಿ ವಿಶ್ವ ಕಿಡ್ನಿ ದಿನಾಚರಣೆ

ಮಂಗಳೂರು,ಮಾ.10: ಮಂಗಳೂರಿನ ದೇರಳಕಟ್ಟೆಯ ಯೆನೆಪೋಯ ವಿಶ್ವದ್ಯಾನಿಲಯದ ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೂತ್ರರೋಗ ಶಾಸ್ತ್ರ ವಿಭಾಗ ಹಾಗೂ ಮೂತ್ರಪಿಂಡ ಚಿಕಿತ್ಸಾ ಭಾಗಗಳ ಜಂಟಿ ಆಶ್ರಯದಲ್ಲಿ ವಿಶ್ವ ಕಿಡ್ನಿ ದಿನಾಚರಣೆಯನ್ನು 2016 ಮಾರ್ಚ್ 10 ರಂದು ಆಸ್ಪತ್ರೆಯ ಸಭಾಂಗಣದಲ್ಲಿ ಯೆನೆಪೋಯ ವಿಶ್ವದ್ಯಾನಿಲಯದ ಉಪಕುಲಪತಿಗಳಾದ ಡಾ. ಎಂ. ವಿಜಯಕುಮಾರ್‌ರವರ ಅಧ್ಯಕ್ಷತೆಯಲ್ಲಿ ಹ್ಮುಕೊಳ್ಳಲಾಯಿತು.
 ಕರ್ನಾಟಕ ಸರ್ಕಾರದ ಕಿಡ್ನಿ ಕಸಿ ಸಂಯೋಜನ ಸಮಿತಿ ಕಾರ್ಯಕಾರಿ ಸಮಿತಿ ಸದಸ್ಯರಾದ ಡಾ.ಜಿ. ಕೆ ವೆಂಕಟೇಶ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ವ್ಯಕ್ತಿಯ ನಿಧನದ ಬಳಿಕ ಅಂಗಾಂಗಗಳ ದಾನ ನೀಡುವ ಪ್ರಕ್ರಿಯೆ ಕುರಿತು ಮಾತನಾಡಿ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವವರಿಗೆ ಅಪಘಾತ ಮತ್ತಿತರ ಕಾರಣಗಳಿಂದ ನಿಧನ ಹೊಂದಿದ ದಾನಿಗಳಿಂದ ಪಡೆದ ಅಂಗಾಂಗಳ ಕಸಿಯೇ ರೋಗಿಗಳ ಪಾಲಿಗೆ ಮುಖ್ಯ ಆಶಾ ಕಿರಣವಾಗಿ ಕಾಣುತ್ತದೆ. ಕಿಡ್ನಿ ಕಸಿ ಕುರಿತು ಸಮಾಜದಲ್ಲಿರುವ ಮೂಢನಂಬಿಕೆ, ಭ್ರಮೆಗಳ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಲು ಸರ್ವರೂ ಪ್ರಯತ್ನಿಸಬೇಕೆಂದು ಕರೆ ನೀಡಿದರು.
   ಇನ್ನೋರ್ವ ಮುಖ್ಯ ಅತಿಥಿಯಾಗಿ ಮಾತನಾಡಿದ ಮಂಗಳೂರಿನ ಯುನಿಟಿ ಹೆಲ್ತ್ ಕಾಂಪ್ಲೆಕ್ಸ್‌ನ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ. ಸಿ.ಪಿ ಹಬೀಬ್ ರಹಿಮಾನ್, ಇಸ್ಲಾಂ ಧರ್ಮದಲ್ಲಿ ಅಂಗಾಂಗ ದಾನಗಳ ಬಗ್ಗೆ ನಿರೂಪಿತವಾಗಿರುವ ಅಂಶಗಳ ಬಗ್ಗೆ ಗಮನ ಸೆಳೆದು ಧಾರ್ಮಿಕ ನಂಬಿಕೆ, ವಿಶ್ವಾಸಗಳು ಜನಜೀವನದ ಬುನಾದಿಯಾಗಿವೆ. ಜನಸೇವೆಗೆ, ಧಾನ ಧರ್ಮಕ್ಕೆ ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಎಲ್ಲಾ ಧರ್ಮಗಳೂ ಪ್ರಾಶಸ್ತ್ಯ ಕೊಟ್ಟಿವೆ. ವ್ಯಕ್ತಿಯ ಮರಣಾ ನಂತರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಇತರರಿಗೆ ಅವರ ಬದುಕು ಉತ್ತಮ ಪಡಿಸುವ ಉದ್ದೇಶದಿಂದ ಅಂಗಾಂಗಗಳನ್ನು ದಾನ ಮಾಡಿದರೆ ಅದು ಹೆಚ್ಚು ಪ್ರಯೋಜನಕಾರಿ ಮತ್ತು ಇಸ್ಲಾಂ ಧರ್ಮ ಅಂಗಾಂಗ ದಾನಕ್ಕೆ ಅಡ್ಡಿಮಾಡಲಾರದು ಎಂದು ಅಭಿಪ್ರಾಯ ಪಟ್ಟರು.
 ಇದೇ ಸಂಧರ್ಭದಲ್ಲಿ ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯ ವತಿಯಿಂದ ಸಿದ್ಧಪಡಿಸಲಾದ ಯೆನ್ ಆರ್ಗನ್ ಡೊನೇಶನ್ ಕಾರ್ಡ್‌ನ್ನು ಬಿಡುಗಡೆ ಮಾಡಲಾಯಿತು. ಮೂತ್ರರೋಗ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಮುಜಿಬ್ ರಹಿಮಾನ್ ಹಾಗೂ ಮೂತ್ರಪಿಂಡ ಚಿಕಿತ್ಸಾ ಭಾಗದ ಸಹ ಪ್ರಾಧ್ಯಾಪಕರಾದ ಡಾ ಸಂತೋಷ್ ಕಿಡ್ನಿ ದಿನಾಚರಣೆಯ ಅಂಗವಾಗಿ ಆಸ್ಪತ್ರೆಯಲ್ಲಿ ಹಾಗೂ ಸಮುದಾಯದಲ್ಲಿ ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ವಿವರಗಳನ್ನು ನೀಡಿದರು.
   ಅಧ್ಯಕ್ಷತೆ ವಹಿಸಿದ್ದ ಯೆನೆಪೋಯ ಶ್ವದ್ಯಾನಿಲಯದ ಉಪಕುಲಪತಿಗಳಾದ ಡಾ ಎಂ. ವಿಜಯಕುಮಾರ್ ಮಾತನಾಡಿ ಕರ್ನಾಟಕದ ಉದ್ದಗಲಕ್ಕೂ ಅನೇಕ ವೈದ್ಯಕೀಯ ತಪಾಸಣೆ ಹಾಗೂ ಚಿಕಿತ್ಸೆ ಕೇಂದ್ರಗಳಿದ್ದರೂ, ಉಚಿತ ಶಿಬಿರಗಳು ನಡೆಯುತ್ತಿದ್ದರೂ ಈಗಲೂ ಸಾರ್ವಜನಿಕರು ತಮಗೆ ರೋಗಗಳೇನಾದರು ಇದೆಯೇ ಎಂದು ತಪಾಸಣೆಗೆ ಒಳಪಡಲು ಹಿಂಜರಿಯುತ್ತಿದ್ದಾರೆ. ಮುಂಚಿತವಾಗಿ ಆರೋಗ್ಯ ತಪಾಸಣೆ ಒಳಗಾದಲ್ಲಿ ಇಂದು ಬಹುತೇಕ ರೋಗಗಳನ್ನು ಗುಣಪಡಿಸಬಹುದಾಗಿದೆ. ಸಾರ್ವಜನಿಕರು ಆರೋಗ್ಯದ ಬಗ್ಗೆ ಹೆಚ್ಚು ಜಾಗೃತರಾಗಿರಬೇಕು. ಅವರ ಮನೋಭಾವ ಬದಲಾದಲ್ಲಿ ಆರೋಗ್ಯಯುತ ಜೀವನ ಸಾಧಿಸಲು ಸಾಧ್ಯ ಎಂದು ಅಭಿಪ್ರಾಯ ಪಟ್ಟರು.
 
  ಯೆನೆಪೋಯ ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ.ಸಿ. ರಘುವೀರ್ ,ಯೆನೆಪೋಯ ಮೆಡಿಕಲ್ ಕಾಲೇಜಿನ ಡೀನ್ ಡಾ.ಗುಲಾಮ್ ಜೀಲಾನಿ ಖಾದಿರಿ, ಯುರೋಲೊಜಿ ವಿಭಾಗದ ಸಹಪ್ರದ್ಯಾಪಕರುಗಳಾದ ಡಾ.ನಿಶ್ಚಿತ್ ಡಿಸೋಜ ಮತ್ತು ಅಲ್ತಾಫ್ ಖಾನ್ ವೇದಿಕೆಯಲ್ಲಿ ಉಪಸ್ಥ್ಥಿತರಿದ್ದರು. ಪ್ರಾರಂಭದಲ್ಲಿ ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಮೊಹಮ್ಮದ್ ಅಮೀನ್ ವಾಣಿ ವಿಶ್ವ ಕಿಡ್ನಿ ದಿನದ ಉದ್ದೇಶಗಳ ಬಗ್ಗೆ ಮಾತನಾಡಿ ಆಸ್ಪತ್ರೆಯಲ್ಲಿ ಮೂತ್ರ ರೋಗ ಮತ್ತು ಕಿಡ್ನಿ ರೋಗ ಚಿಕಿತ್ಸಾ ವಿಭಾಗಗಳಲ್ಲಿ ಕೈಗೊಂಡ ಅಭಿವೃಧಿ ಕಾರ್ಯಗಳ ಬಗ್ಗೆ ವಿವರಿಸಿದರು.
 ವೈದ್ಯಕೀಯ ಸಮಾಜ ಕಾರ್ಯ ಭಾಗದ ಮುಖ್ಯಸ್ಥ ಡಾ.ಮೊಹಮ್ಮದ್ ಗುತ್ತಿಗಾರ್ ವಂದಿಸಿದರು.ಯೆನೆಪೋಯ ಮೆಡಿಕಲ್ ಕಾಲೇಜು ಮೈಕ್ರೋಬಯೋಲಜಿ ವಿಭಾಗದ ಡಾ ರೋಶೆಲ್ ಟೆಲ್ಲಿಸ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X