Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರೆಸ್ಟ್ ಆಫ್ ಇಂಡಿಯಾಕ್ಕೆ ಐತಿಹಾಸಿಕ ಜಯ

ರೆಸ್ಟ್ ಆಫ್ ಇಂಡಿಯಾಕ್ಕೆ ಐತಿಹಾಸಿಕ ಜಯ

ವಾರ್ತಾಭಾರತಿವಾರ್ತಾಭಾರತಿ10 March 2016 11:18 PM IST
share
ರೆಸ್ಟ್ ಆಫ್ ಇಂಡಿಯಾಕ್ಕೆ ಐತಿಹಾಸಿಕ ಜಯ

ಮುಂಬೈ, ಮಾ.10: ಬ್ಯಾಟ್ಸ್‌ಮನ್‌ಗಳ ಅತ್ಯುತ್ತಮ ಪ್ರದರ್ಶನದ ನೆರವಿನಲ್ಲಿ ರೆಸ್ಟ್ ಆಫ್ ಇಂಡಿಯಾ ತಂಡ ಇಲ್ಲಿ ನಡೆದ ಇರಾನಿ ಟ್ರೋಫಿ ಪಂದ್ಯದಲ್ಲಿ ರಣಜಿ ಚಾಂಪಿಯನ್ ಮುಂಬೈ ವಿರುದ್ಧ ಐತಿಹಾಸಿಕ ಜಯ ದಾಖಲಿಸಿದೆ.
ಮುಂಬೈನ ಬ್ರೆಬೊರ್ನ್ ಸ್ಟೇಡಿಯಂನಲ್ಲಿ ಪಂದ್ಯದ ಐದನೆ ಹಾಗೂ ಅಂತಿಮ ದಿನವಾಗಿರುವ ಗುರುವಾರ 480 ರನ್ ಗಳಿಸಬೇಕಿದ್ದ ರೆಸ್ಟ್ ಆಫ್ ಇಂಡಿಯಾ ತಂಡ 129.4 ಓವರ್‌ಗಳಲ್ಲಿ 6 ವಿಕೆಟ್ ನಷ್ಟದಲ್ಲಿ 482 ರನ್ ಗಳಿಸಿ ಅಪೂರ್ವ ಗೆಲುವು ದಾಖಲಿಸಿತು.
 ವಿದರ್ಭ ತಂಡದ ಆರಂಭಿಕ ಎಡಗೈ ಬ್ಯಾಟ್ಸ್‌ಮನ್ ಫೈಝ್ ಫಝಲ್ 127 ರನ್(280, 10ಬೌ) , ಬಂಗಾಲದ ಸಂದೀಪ್ ಚಟರ್ಜಿ (54,3ಬೌ), ಕರಣ್ ನಾಯರ್ 92 ರನ್(132ಎ,7ಬೌ), ಸ್ಟುವರ್ಟ್ ಬಿನ್ನಿ 54ರನ್( 51ಎ,3ಬೌ,2ಸಿ), ಶೆಲ್ಡಾನ್ ಜಾಕ್ಸನ್ ಔಟಾಗದೆ 59 ರನ್ ಗಳಿಸಿ ರೆಸ್ಟ್ ಆಫ್ ಇಂಡಿಯಾದ ಗೆಲುವಿಗೆ ನೆರವಾದರು.
ಬುಧವಾರ ನಾಲ್ಕನೆ ದಿನದಾಟದಂತ್ಯಕ್ಕೆ 37 ಓವರ್‌ಗಳಲ್ಲಿ 1 ವಿಕೆಟ್ ನಷ್ಟದಲ್ಲಿ 100 ರನ್ ಗಳಿಸಿದ್ದ ರೆಸ್ಟ್ ಆಫ್ ಇಂಡಿಯಾ ತಂಡ ಇಂದು ಆಟ ಮುಂದುವರಿಸಿ ಮುಂಬೈಗೆ ಆಘಾತ ನೀಡಿತು.
ಅಂತಿಮ ದಿನ 380 ರನ್ ಗಳಿಸಬೇಕಾಗಿದ್ದ ರೆಸ್ಟ್ ಆಫ್ ಇಂಡಿಯಾ ತಂಡ ಯಾವುದೇ ಒತ್ತಡಕ್ಕೆ ಒಳಗಾಗದೆ ಸುಲಭವಾಗಿ ಗೆಲುವಿಗೆ ಅಗತ್ಯದ ರನ್ ಸೇರಿಸಿತು.
 
ಫಝಲ್ ಅವರು ನಾಲ್ಕನೆ ದಿನದಾಟದಂತ್ಯಕ್ಕೆ ಔಟಾಗದೆ 41 ರನ್ ಮತ್ತು 17 ರನ್ ಗಳಿಸಿದ ಸಂದೀಪ್ ಚಟರ್ಜಿ ಕ್ರೀಸ್‌ನಲ್ಲಿದ್ದರು. ಫಝಲ್ ಅವರು ಚಟರ್ಜಿ ಜೊತೆ ಬ್ಯಾಟಿಂಗ್ ಮುಂದುವರಿಸಿ ಎರಡನೆ ವಿಕೆಟ್‌ಗೆ 110 ರನ್‌ಗಳ ಜೊತೆಯಾಟ ನೀಡಿದರು. ಮೂರನೆ ವಿಕೆಟ್‌ಗೆ ಫಝಲ್ ಅವರು ಕರಣ್ ನಾಯರ್ ಅವರೊಂದಿಗೆ 130 ರನ್‌ಗಳ ಕೊಡುಗೆ ನೀಡಲು ನೆರವಾದರು. ಫಝಲ್ ತಾಳ್ಮೆಯ ಬ್ಯಾಟಿಂಗ್ ಪ್ರದರ್ಶಿಸಿ 11ನೆ ಪ್ರಥಮದರ್ಜೆ ಶತಕ ದಾಖಲಿಸಿದರು. ಚಟರ್ಜಿ ಅರ್ಧಶತಕ ದಾಖಲಿಸಿ ನಿರ್ಗಮಿಸಿದರು. ಫಝಲ್ ತಂಡದ ಸ್ಕೋರ್ 93.5 ಓವರ್‌ಗಳಲ್ಲಿ 306ಕ್ಕೆ ತಲುಪುತ್ತಿದ್ದಂತೆ ಔಟಾದರು.

ಮುಂಬೈನ ಇಕ್ಬಾಲ್ ಅಬ್ದುಲ್ಲ (154ಕ್ಕೆ5) ಅವರು ಫಝಲ್‌ಗೆ ಪೆವಿಲಿಯನ್ ಹಾದಿ ತೋರಿಸಿದರು. ನಾಯರ್ ಮೊದಲ ಇನಿಂಗ್ಸ್‌ನಲ್ಲಿ 94 ರನ್ ಗಳಿಸಿ ಔಟಾಗಿದ್ದರು. ಎರಡನೆ ಇನಿಂಗ್ಸ್‌ನಲ್ಲೂ (92) ಶತಕ ವಂಚಿತಗೊಂಡರು. ಬಳಿಕ ಆದರೆ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ದೊರೆಯಿತು.ನಾಯಕ ನಮನ್ ಓಜಾ 29 ರನ್ ಗಳಿಸಿ ರನೌಟಾದರು. ಅಂತಿಮ ಅವಧಿಯಲ್ಲಿ ರೆಸ್ಟ್ ಆಫ್ ಇಂಡಿಯಾ 35 ಓವರ್‌ಗಳಲ್ಲಿ 159 ರನ್ ಗಳಿಸಬೇಕಾದ ಒತ್ತಡಕ್ಕೆ ಸಿಲುಕಿತು. ಕರ್ನಾಟಕದ ಸ್ಟುವರ್ಟ್ ಬಿನ್ನಿ ಮತ್ತು ಸೌರಾಷ್ಟ್ರದ ಶೆಲ್ಡಾನ್ ಜಾಕ್ಸನ್ ಮುಂಬೈ ಬೌಲರ್‌ಗಳ ಬೆವರಿಳಿಸಿ 56 ನಿಮಿಷಗಳ ಬ್ಯಾಟಿಂಗ್‌ನಲ್ಲಿ 101 ಎಸೆತಗಳನ್ನು ಎದುರಿಸಿದರು. 92 ರನ್ ಸೇರಿಸಿದರು.
  ಬಿನ್ನಿ ಅತ್ಯಂತ ವೇಗದಲ್ಲಿ ಅರ್ಧಶತಕ ಪೂರ್ಣಗೊಳಿಸಿದರು. ಎರಡು ಬಾರಿ ಚೆಂಡನ್ನು ಸಿಕ್ಸರ್‌ಗೆ ಅಟ್ಟಿದರು. ಚೆಂಡು ಬಾರಿ ಪ್ರೆಸ್ ಬಾಕ್ಸ್‌ನ ಬಳಿ ಬಿತ್ತು. ಗೆಲುವಿಗೆ 35 ರನ್‌ಗಳ ಆವಶ್ಯಕತೆ ಇದ್ದಾಗ ಬಿನ್ನಿ ಔಟಾದರು.
  41ನೆ ಬಾರಿ ರಣಜಿ ಚಾಂಪಿಯನ್ ಎನಿಸಿಕೊಂಡಿದ್ದ ಮುಂಬೈ 16ನೆ ಬಾರಿ ಇರಾನಿ ಕಪ್ ಗೆಲ್ಲುವ ಕನಸು ಕಂಡಿತ್ತು. ಕೊನೆಯಲ್ಲಿ ಜಾಕ್ಸನ್ ಮತ್ತು ಜೆ.ಯಾದವ್ ಏಳನೆ ವಿಕೆಟ್‌ಗೆ ಮುರಿಯದ ಜೊತೆಯಾಟದಲ್ಲಿ ಯಾದವ್ ಮತ್ತು ಜಾಕ್ಸನ್ 37 ರನ್ ಸೇರಿಸಿ ತಂಡವನ್ನು ಗೆಲುವಿನ ದಡ ದಾಟಿಸಿದರು.
ಸಂಕ್ಷಿಪ್ತ ಸ್ಕೋರ್ ವಿವರ
ಮುಂಬೈ ಮೊದಲ ಇನಿಂಗ್ಸ್ 603
ರೆಸ್ಟ್ ಆಫ್ ಇಂಡಿಯಾ ಮೊದಲ ಇನಿಂಗ್ಸ್ 306
ಮುಂಬೈ ಎರಡನೆ ಇನಿಂಗ್ಸ್ 182
 ರೆಸ್ಟ್ ಆಫ್ ಇಂಡಿಯಾ ಎರಡನೆ ಇನಿಂಗ್ಸ್ 129.4 ಓವರ್‌ಗಳಲ್ಲಿ 482/6( ಫಝಲ್ 127, ಕೆ. ನಾಯರ್ 92, ಜಾಕ್ಸನ್ ಔಟಾಗದೆ 59,ಚಟರ್ಜಿ 54, ಬಿನ್ನಿ 54, ಭರತ್ 42, ಯಾದವ್ ಔಟಾಗದೆ 19; ಇಕ್ಬಾಲ್ ಅಬ್ದುಲ್ಲ 154-5).
ಪಂದ್ಯಶ್ರೇಷ್ಠ: ಕರಣ್ ನಾಯರ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X