Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಾಕ್ ಮತ್ತು ಚೀನಾ ಏಕಕಾಲದಲ್ಲಿ ಯುದ್ಧ...

ಪಾಕ್ ಮತ್ತು ಚೀನಾ ಏಕಕಾಲದಲ್ಲಿ ಯುದ್ಧ ಸಾರಿದರೆ ಎದುರಿಸಲು ವಿಮಾನಗಳ ಕೊರತೆ

ವಾರ್ತಾಭಾರತಿವಾರ್ತಾಭಾರತಿ10 March 2016 11:49 PM IST
share
ಪಾಕ್ ಮತ್ತು ಚೀನಾ ಏಕಕಾಲದಲ್ಲಿ ಯುದ್ಧ ಸಾರಿದರೆ ಎದುರಿಸಲು ವಿಮಾನಗಳ ಕೊರತೆ

ಕಟುವಾಸ್ತವ ಬಿಚ್ಚಿಟ್ಟ ಭಾರತೀಯ ವಾಯುಪಡೆ

ಹೊಸದಿಲ್ಲಿ,ಮಾ.10: ತನ್ನಲ್ಲಿರುವ ವಿಮಾನಗಳ ಸಂಖ್ಯೆ ಕ್ಷೀಣಿಸುತ್ತಿರುವುದನ್ನು ಪರಿಗಣಿಸಿದರೆ ಪಾಕಿಸ್ತಾನ ಮತ್ತು ಚೀನಾ ಏಕಕಾಲದಲ್ಲಿ ಭಾರತದ ಮೇಲೆ ಯುದ್ಧ ಸಾರಿದರೆ ಪೂರ್ಣ ಪ್ರಮಾಣದಲ್ಲಿ ವಾಯುದಾಳಿಗಳನ್ನು ಸಂಘಟಿಸಲು ಸಾಕಷ್ಟು ಯುದ್ಧ ವಿಮಾನಗಳು ತನ್ನ ಬಳಿಯಲ್ಲಿಲ್ಲ ಎಂಬ ಕಟುಸತ್ಯವನ್ನು ಭಾರತೀಯ ವಾಯುಪಡೆಯು ಗುರುವಾರ ಒಪ್ಪಿಕೊಂಡಿದೆ.

36 ರಾಫೇಲ್ ವಿಮಾನಗಳೇನೋ ತನ್ನ ಪಡೆಗೆ ಸೇರ್ಪಡೆಗೊಳ್ಳಲಿವೆ. ಆದರೆ ಅದರ ಜೊತೆಗೆ ತನಗೆ ಹೆಚ್ಚಿನ ಸಂಖ್ಯೆಯಲ್ಲಿ ಐದನೆ ತಲೆಮಾರಿನ ಯುದ್ಧವಿಮಾನಗಳ ಅಗತ್ಯವಿದೆ ಎಂದು ಅದು ಹೇಳಿದೆ.

ವಾಯುಪಡೆಗೆ ಮಂಜೂರಾಗಿರುವ ಸ್ಕ್ವಾಡ್ರನ್‌ಗಳ ಸಂಖ್ಯೆ 42,ಆದರೆ ಅವುಗಳ ಸಂಖ್ಯೆ ಈಗ 33ಕ್ಕೆ ಕುಸಿದಿದೆ. ಇಂತಹ ಸಂದರ್ಭದಲ್ಲಿ ವಾಯುಪಡೆಯು ಈ ಕಟುಸತ್ಯವನ್ನು ಹೊರಹಾಕಿದೆ.

ಈ 33 ಸ್ಕ್ವಾಡ್ರನ್‌ಗಳ ಪೈಕಿ ಹೆಚ್ಚಿನವು ದೇಶದ ಮುಂಚೂಣಿಯ ಯುದ್ಧವಿಮಾನವಾಗಿರುವ ರಷ್ಯ ಮೂಲದ ಸುಖೋಯಿ ಎಸ್‌ಯು-30 ಜೆಟ್‌ಗಳಾಗಿವೆ. ಆದರೆ ಯಾವುದೇ ಸಮಯದಲ್ಲಿ ಸೇವೆಗೆ ಲಭ್ಯವಿರುವ ಯುದ್ಧವಿಮಾನಗಳ ಸಂಖ್ಯೆ ಶೇ.55ರಷ್ಟು ಮಾತ್ರ. ಉಳಿದ ವಿಮಾನಗಳು ದುರಸ್ತಿಯಲ್ಲಿರುತ್ತವೆ.

ಐಎಎಫ್‌ನ ಉಪ ಮುಖ್ಯಸ್ಥ ಏರ್ ಮಾರ್ಷಲ್ ಬಿ.ಎಸ್. ಧನೋವಾ ಅವರು ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿವರಗಳನ್ನು ನೀಡಿದರು.
ನಾಳೆಯೇ ಎರಡು ಕಡೆಗಳಲ್ಲಿ ಯದ್ಧ ಆರಂಭವಾದರೆ ಅದನ್ನು ಎದುರಿಸುವ ಸಾಮರ್ಥ್ಯ ಐಎಎಫ್‌ಗೆ ಇದೆಯೇ ಎಂಬ ಪ್ರಶ್ನೆಗೆ ಅವರು ಉತ್ತರಿಸುತ್ತಿದ್ದರು.

ಮುಂದಿನ ಕೆಲವು ವರ್ಷಗಳ ಕಾಲ ಏಕಕಾಲದಲ್ಲಿ ಎರಡು ದೇಶಗಳೊಂದಿಗೆ ಯುದ್ಧ ನಡೆಯುವ ಸಾಧ್ಯತೆಯಿಲ್ಲ ಮತ್ತು ಅಷ್ಟರಲ್ಲಿ ಅಗತ್ಯ ಸಾಮರ್ಥ್ಯವನ್ನು ಪಡೆದುಕೊಳ್ಳುವ ಆಶಯವನ್ನು ಪಡೆಯು ಹೊಂದಿದೆ ಎಂದು ಐಎಎಫ್ ಮೂಲಗಳು ತಿಳಿಸಿದವು.

ನಾವು ನಮ್ಮ ಕಳವಳವನ್ನು ಸರಕಾರಕ್ಕೆ ತಿಳಿಸಿದ್ದೇವೆ. ಅದು ಸಮಸ್ಯೆಯನ್ನು ಅರ್ಥ ಮಾಡಿಕೊಂಡಿದೆ ಮತ್ತು ಇದೇ ಕಾರಣದಿಂದ ನಮ್ಮ ತುರ್ತನ್ನು ಗಮನಿಸಿ 36 ರಾಫೇಲ್ ವಿಮಾನಗಳ ಖರೀದಿ ಒಪ್ಪಂದಕ್ಕೆ ಸಹಿ ಮಾಡಿದೆ ಎಂದು ಧನೋವಾ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X