Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮನಪಾ ಒಳಚರಂಡಿ ಪುನರ್‌ನಿರ್ಮಾಣ: ಮೇಯರ್...

ಮನಪಾ ಒಳಚರಂಡಿ ಪುನರ್‌ನಿರ್ಮಾಣ: ಮೇಯರ್ ಹರಿನಾಥ್

ವಾರ್ತಾಭಾರತಿವಾರ್ತಾಭಾರತಿ11 March 2016 4:33 PM IST
share
ಮನಪಾ ಒಳಚರಂಡಿ ಪುನರ್‌ನಿರ್ಮಾಣ: ಮೇಯರ್ ಹರಿನಾಥ್

ಮಂಗಳೂರು, ಮಾ. 11: ಜನರ ನಿರೀಕ್ಷೆ, ಬೇಡಿಕೆಗಳಿಗೆ ತಕ್ಕುದಾಗಿ ಕಾರ್ಯ ನಿರ್ವಹಿಸಲು ತಾನು ಬದ್ಧವಾಗಿದ್ದು, ನಗರದ ಒಳಚರಂಡಿ ವ್ಯವಸ್ಥೆಯನ್ನು ಪುನರ್ ನಿರ್ಮಿಸುವ ನಿಟ್ಟಿನಲ್ಲಿ ಹಳೆಯ ಪೈಪ್‌ಲೈನ್‌ಗಳನ್ನು ತೆಗೆದು ಹೊಸತನ್ನು ಅಳವಡಿಸುವ ಕಾರ್ಯವನ್ನು ಮಾಡುವುದಾಗಿ ನೂತನ ಮೇಯರ್ ಹರಿನಾಥ್ ಭರವಸೆ ನೀಡಿದ್ದಾರೆ.
ನೂತನ ಮೇಯರ್ ಆಗಿ ಇಂದು ಆಯ್ಕೆಯಾದ ಅವರು ಮನಪಾ ಸದಸ್ಯರು, ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ಸ್ನೇಹಿತರಿಂದ ಮನಪಾ ಸಭಾಂಗಣದಲ್ಲಿ ಶುಭಾಶಯಗಳನ್ನು ಸ್ವೀಕರಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡುತ್ತಾ ಈ ಅಭಿಪ್ರಾಯ ವ್ಯಕ್ತಪಡಿಸಿದರು.
ಮನಪಾ ಜನತೆಯ ನಿರೀಕ್ಷೆ ಬಹಳಷ್ಟಿದ್ದು, ಅವರ ನಿರೀಕ್ಷೆಗಳೆಲ್ಲವನ್ನೂ ಪೂರೈಸಲು ಸಾಧ್ಯವಾಗದಿದ್ದರೂ ಜನರಿಗೆ ನ್ಯಾಯ, ಸಮಸ್ಯೆಗೆ ಪರಿಹಾರ ಕೊಡುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುವುದಾಗಿ ಹೇಳಿದರು.
ಮನಪಾ ವತಿಯಿಂದ ಈಗಾಗಲೇ ಪೌರ ಕಾರ್ಮಿಕರಿಗೆ ಗೃಹಭಾಗ್ಯ, ನಗರವನ್ನು ಸೀಮೆಎಣ್ಣೆ ಮುಕ್ತ ನಗರ, ಪುರಭವನಕ್ಕೆ ಹೊಸ ರೂಪು, ಕಾಂಕ್ರಿಟೀಕರಣ ಗೊಂಡ ರಸ್ತೆಗಳಲ್ಲಿ ಚರಂಡಿ ನಿರ್ಮಾಣಕ್ಕೆ ಟೆಂಡರ್ ಸೇರಿದಂತೆ ಹಲವಾರು ಯೋಜನೆಗಳನ್ನು ಕೈಗೊಳ್ಳಲಾಗಿದೆ.

ನಗರದಲ್ಲಿ ಶೀಘ್ರದಲ್ಲೇ ಉಚಿತ ಆ್ಯಂಬುಲೆನ್ಸ್ ಸೇವೆ
ನಗರದಲ್ಲಿ ಶೀಘ್ರವೇ ಉಚಿತ ಆ್ಯಂಬುಲೆನ್ಸ್ ಸೇವೆಯನ್ನು ಆರಂಭಿಸಲಾಗುತ್ತಿದ್ದು, ಆರಂಭದಲ್ಲಿ ತಾತ್ಕಾಲಿಕ ನೆಲೆಯಲ್ಲಿ ಖಾಸಗಿ ವಾಹನದ ಮೂಲಕ ಈ ಸೇವೆ ಆರಂಭಗೊಳ್ಳಲಿದೆ. ಇದಕ್ಕಾಗಿ ಟೆಂಡರ್ ಪ್ರಕ್ರಿಯೆ ನಡೆದಿದೆ ಎಂದು ನೂತನ ಮೇಯರ್ ಹರಿನಾಥ್ ತಿಳಿಸಿದರು.
ಎಂಟು ಅಂಶಗಳ ಕ್ರಿಯಾ ಯೋಜನೆ ಮೂಲಕ ನಗರದಲ್ಲಿ ಮಲೇರಿಯಾ ರೋಗ ನಿಯಂತ್ರಣಕ್ಕೆ ದಿಟ್ಟ ಹೆಜ್ಜೆ ಇರಿಸಲಾಗಿದ್ದು, ಈ ಹಿಂದಿನ ಮೇಯರ್‌ಗಳು ಕೈಗೊಂಡ ಪ್ಲಾಸ್ಟಿಕ್ ಮುಕ್ತ ನಗರದ ಯೋಜನೆಗೆ ಒತ್ತು ನೀಡಲಾಗುವುದು ಎಂದರು.


ಮಾರುಕಟ್ಟೆಗಳ ನಿರ್ಮಾಣಕ್ಕೆ ಆದ್ಯತೆ
ನಗರದಲ್ಲಿ ಮಂಗಳೂರು ಸೆಂಟ್ರಲ್, ಕಾವೂರು, ಕಂಕನಾಡಿ, ಸುರತ್ಕಲ್‌ನಲ್ಲಿ ಮಾರುಕಟ್ಟೆ ನಿರ್ಮಾಣ ಕಾರ್ಯವನ್ನು ಆದ್ಯತೆ ನೆಲೆಯಲ್ಲಿ ಕೈಗೊಳ್ಳುವುದಾಗಿ ಹೇಳಿದ ನೂತನ ಮೇಯರ್ ಹರಿನಾಥ್, ಮಂಗಳೂರು ಸೆಂಟ್ರಲ್ ಮಾರುಕಟ್ಟೆಯನ್ನು ಈಗಾಗಲೇ ಸಮೀಕ್ಷೆ ಮಾಡಿದ್ದು, ಇದ್ದ ಜಾಗದಲ್ಲಿಯೇ ಕಡಿಮೆ ಅವಧಿಯಲ್ಲಿ ವ್ಯವಸ್ಥಿತವಾಗಿ ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.
ಕೆಪಿಟಿಯಲ್ಲಿ ವಾಹನ ದಟ್ಟಣೆ ಅಧಿಕವಾಗಿರುವುದರಿಂದ ಅಲ್ಲಿ ಫ್ಲೈ ಓವರ್ ನಿರ್ಮಾಣ ಮಾಡುವ ಬಗ್ಗೆ ರಾಷ್ಟ್ರೀಯ ಹೆದ್ದಾರಿಯವರ ಜತೆ ಈಗಾಗಲೇ ಚರ್ಚೆ ನಡೆದಿದೆ. ಅವರು ಮನಪಾಕ್ಕೆ ಅನುಮತಿ ನೀಡಿದ್ದಲ್ಲಿ ಅಲ್ಲಿ ಫ್ಲೈ ಓವರ್ ಅಥವಾ ಅಂಡರ್ ಪಾಸ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವುದಾಗಿ ಸುದ್ದಿಗಾರರ ಪ್ರಶ್ನೆಗೆ ಹರಿನಾಥ್ ಪ್ರತಿಕ್ರಿಯಿಸಿದ್ದಾರೆ.
ನಗರದ ಸಮಗ್ರ ಅಭಿವೃದ್ಧಿ ಬದ್ದ: ಸುಮಿತ್ರಾ ಕರಿಯ
ತಾನು ಉಪ ಮೇಯರ್ ಸ್ಥಾನವೇರಲು ಸಹಕರಿಸಿದ ಪಕ್ಷಕ್ಕೆ ಆಭಾರಿಯಾಗಿದ್ದು, ನಗರದ ಸಮಗ್ರ ಮತ್ತು ಸರ್ವತೋಮುಖ ಅಭಿವೃದ್ಧಿಗೆ ಬದ್ಧವಾಗಿರುವುದಾಗಿ ಉಪ ಮೇಯರ್ ಸುಮಿತ್ರಾ ಕರಿಯ ಅಭಿಪ್ರಾಯಿಸಿದ್ದಾರೆ.
ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಸೇರಿದಂತೆ ಪಕ್ಷದ ಹಿರಿಯ ಸದಸ್ಯರು, ಕಾರ್ಯಕರ್ತರು, ಹಿತೈಷಿಗಳಿಂದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

ದಯವಿಟ್ಟು ಉದ್ಘಾಟನೆ- ಸಭೆ ಸಮಾರಂಭಗಳಿಗೆ ಕರೆಯಬೇಡಿ!
ದಯವಿಟ್ಟು ಉದ್ಘಾಟನೆಗಳು ಸಭೆ ಸಮಾರಂಭಕ್ಕೆ ಕರೆಯಬೇಡಿ. ಆ ಸಮಯವನ್ನು ಜನರ ಕೆಲಸಕ್ಕೆ ಮೀಸಲಿಡಲು ಅವಕಾಶ ನೀಡಿ. ಇದು ನನ್ನ ನಗರದ ಜನತೆಯಲ್ಲಿ ವಿನಮ್ರ ಮನವಿ ಎಂದು ಹೇಳುವ ಮೂಲಕ ಜನ ಪ್ರತಿನಿಧಿಗಳು ಜನರ ಸೇವೆಗೆ ಒತ್ತು ನೀಡಬೇಕೆಂಬ ಆಶಯವನ್ನು ವ್ಯಕ್ತಪಡಿಸುತ್ತಾ ನೂತನ ಮೇಯರ್ ಹರಿನಾಥ್ ಹೊಸ ಪರಿಪಾಠವೊಂದಕ್ಕೆ ನಾಂದಿ ಹಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X