Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಡುಬಿದಿರೆ: ಭ್ರಷ್ಟಾಚಾರ...

ಮೂಡುಬಿದಿರೆ: ಭ್ರಷ್ಟಾಚಾರ ನಿರ್ಮೂಲನೆಯಿಂದ ಸಾಮಾಜಿಕ ಅಭಿವೃದ್ಧಿ ಸಾಧ್ಯ: ಜಸ್ಟಿಸ್ ಚಂದ್ರಶೇಖರಯ್ಯ

ವಾರ್ತಾಭಾರತಿವಾರ್ತಾಭಾರತಿ11 March 2016 7:59 PM IST
share
ಮೂಡುಬಿದಿರೆ: ಭ್ರಷ್ಟಾಚಾರ ನಿರ್ಮೂಲನೆಯಿಂದ ಸಾಮಾಜಿಕ ಅಭಿವೃದ್ಧಿ ಸಾಧ್ಯ: ಜಸ್ಟಿಸ್ ಚಂದ್ರಶೇಖರಯ್ಯ

  ಮೂಡುಬಿದಿರೆ: ಭ್ರಷ್ಟಾಚಾರವೆಂಬುದು ಸಮಾಜಕ್ಕೆ ಕ್ಯಾನ್ಸರ್ ರೋಗವಾಗಿ ಪರಿಣಮಿಸಿದೆ. ಮೌಲ್ಯಯುತ ಶಿಕ್ಷಣದ ಮೂಲಕ ಭ್ರಷ್ಟಾಚಾರದಂತಹ ಪಿಡುಗುಗಳನ್ನು ನಿವಾರಣೆ ಮಾಡಬಹುದು. ಭ್ರಷ್ಟಾಚಾರ ನಿರ್ಮೂಲನೆಯಾದರೆ ಮಾತ್ರ ಸಾಮಾಜಿಕ ಅಭಿವೃದ್ಧಿ ಸಾಧ್ಯ ಎಂದು ಕರ್ನಾಟಕ ಹೈಕೋರ್ಟ್‌ನ ನಿವೃತ ನ್ಯಾಯಾಧೀಶ ಚಂದ್ರಶೇಖರಯ್ಯ ಹೇಳಿದರು.

ಅವರು ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ಭಕ್ತಿವೇದ ಅಕಾಡೆಮಿ ಫಾರ್ ಕಲ್ಚರಲ್ ಎಂಡ್ ಕ್ಯಾರೆಕ್ಟರ್ ಎಜ್ಯುಕೇಶನ್ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಶುಕ್ರವಾರ ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕ್ಯಾಂಪಸ್‌ನಲ್ಲಿ ಬಿಎಸಿಸಿಇ ವ್ಯಕ್ತಿತ್ವಕೋರ್ಸ್‌ನ್ನು ಉದ್ಘಾಟಿಸಿ ಮಾತನಾಡಿದರು.

  ಸಾಹಿತ್ಯದ ಓದು ನಮ್ಮನ್ನು ಮಾನಸಿಕವಾಗಿ ಗಟ್ಟಿಗೊಳಿಸುತ್ತದೆ. ಭವಿಷ್ಯದ ಅಭಿವೃದ್ಧಿ, ಯಾವುದೇ ಸಂದರ್ಭವನ್ನು ಸಮರ್ಥವಾಗಿ ಎದುರಿಸಲು ಸಾಹಿತ್ಯದ ಓದಿನ ಸಾರ ಪ್ರಯೋಜನವಾಗುತ್ತದೆ. ನಾವು ಯಾವುದೇ ಕ್ಷೇತ್ರದಲ್ಲಿ ತೊಡಗಿಸಿದರೂ ಸಾಹಿತ್ಯದಿಂದ ದೂರವಾಗಬಾರದು. ಯುವಕರು ನೈತಿಕ ಪೊಲೀಸ್‌ಗಿರಿಯಂತಹ ಚಟುವಟಿಕೆಗಳಿಂದ ದೂರವಿರಬೇಕು. ಸಮಾಜದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದರು.
 
ದ.ಕ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಶ್ರೀವಿದ್ಯಾ ಮುಖ್ಯ ಅತಿಥಿಯಾಗಿ ಮಾತನಾಡಿ, ನಾವು ಏನು ಶೈಕ್ಷಣಿಕ ಅರ್ಹತೆಯನ್ನು ಪಡೆದಿದ್ದೇವೆ ಎನ್ನುವದಕ್ಕಿಂತ ಜೀವನ ಮೌಲ್ಯವನ್ನು ಹೇಗೆ ರೂಢಸಿಕೊಂಡಿದ್ದೇವೆ ಎನ್ನುವುದು ಮುಖ್ಯವಾಗುತ್ತದೆ. ಸುಶಿಕ್ಷಿತರಿಂದಲೇ ಗೂಂಡಾಗಿರಿಯಂತಹ ಸಮಾಜ ವಿರೋಧಿ ಕೆಲಸಗಳು ಹೆಚ್ಚಾಗುತ್ತಿದ್ದು, ಜೀವನ ಮೌಲ್ಯದ ಅರಿವು ಇಲ್ಲದಿರುವುದೇ ಇದಕ್ಕೆ ಕಾರಣವಾಗಿದೆ. ಪರಸ್ಪರ ವಿಶ್ವಾಸ, ಸ್ವಯಂ ವ್ಯಕ್ತಿತ್ವ ನಿರ್ಮಾಣ, ಆಶಾವಾದ ವಿದ್ಯಾರ್ಥಿಗಳಲ್ಲಿರಬೇಕು ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಅಧ್ಯಕ್ಷತೆ ವಹಿಸಿದ್ದರು.

ಬಿಎಸಿಸಿಇ ಸ್ಥಾಪಕ ಶರದ್ ವಿಹಾರಿ ದಾಸ ಪ್ರಾಸ್ತಾವಿಕವಾಗಿ ಮಾತನಾಡಿ, ಆಧ್ಮಾತ್ಮಿಕವಾಗಿ ವಿದ್ಯಾರ್ಥಿಗಳನ್ನು ಗಟ್ಟಿಗೊಳಿಸಲು ದ.ಕ ಜಿಲ್ಲೆ ಸರ್ಕಾರಿ ಶಾಲಾ-ಕಾಲೇಜು ಸಹಿತ ವಿವಿಧ ಶಿಕ್ಷಣ ಸಂಸ್ಥೆಯಲ್ಲಿ ಈ ಕೋರ್ಸ್ ಅನ್ನು ಆಯೋಜಿಸುತ್ತೇವೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ, ಮಂಗಳೂರು ವಕೀಲರ ಸಂಘದ ಹಿರಿಯ ಸಲಹೆಗಾರ ಸೀತಾರಾಮ ಶೆಟ್ಟಿ, ಟೆಲಿಮ್ಯಾಟಿಕ್ಸ್4ಯು ಉದ್ಯಮ ಮುಖ್ಯಸ್ಥ ಹರ್ಷ ಮುಖ್ಯ ಅತಿಥಿಯಾಗಿದ್ದರು. ಪ್ರಶಾಂತ್ ಮಿರಾಂಡ ಔದ್ಯೋಗಿಕವಾಗಿ ವ್ಯಕ್ತಿತ್ವ ವಿಕಸನಗೊಳಿಸುವ ಕುರಿತು ಮಾತನಾಡಿದರು. ರವೀಂದ್ರ ಶೆಣೈ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. --

ಆಳ್ವಾಸ್‌ನಲ್ಲಿ ಬಿಎಸಿಸಿಇ ವ್ಯಕ್ತಿತ್ವಕೋರ್ಸ್‌ನ್ನು ಜಸ್ಟಿಸ್ ಚಂದ್ರಶೇಖರಯ್ಯ ಉದ್ಘಾಟಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X